105 ತಾಲೂಕುಗಳಲ್ಲಿ ಶೀಘ್ರ ಬರ ಘೋಷಣೆ: ಸಿಎಂ ಸಿದ್ದರಾಮಯ್ಯ

Date:

  • ಸೆ.4ರಂದು ಸಚಿವ ಸಂಪುಟದ ಉಪ ಸಮಿತಿ ಸಭೆ ನಡೆಯಲಿದೆ
  • ಒಟ್ಟು 114 ತಾಲೂಕುಗಳಲ್ಲಿ ಜಂಟಿ ಸರ್ವೇ ಆಗಿದೆ: ಸಿದ್ದರಾಮಯ್ಯ

ಸೆ.4ರಂದು ಸಚಿವ ಸಂಪುಟದ ಉಪ ಸಮಿತಿ ಸಭೆ ನಡೆಯಲಿದೆ. ಒಟ್ಟು 114 ತಾಲೂಕುಗಳಲ್ಲಿ ಜಂಟಿ ಸರ್ವೇ ಆಗಿದ್ದು, 105 ತಾಲೂಕುಗಳಲ್ಲಿ ಬರ ಘೋಷಣೆ ಮಾಡಲಾಗುವುದು. ನಂತರ 73 ತಾಲೂಕುಗಳ ಘೋಷಣೆಗೆ ಸೇರ್ಪಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಳ್ಳಾರಿಯ ತೋರಣಗಲ್‌ನ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜೂನ್‌ನಲ್ಲಿ ಮಳೆ ಇಲ್ಲ. ಆಗಸ್ಟ್‌ನಲ್ಲಿ ಶೇ.56% ಮಳೆ ಕೊರತೆ ಆಗಿದೆ. ಕಾವೇರಿಗೆ ಸಂಕಷ್ಟ ಬಂದಿದ್ದು, ಬೆಳೆ ರಕ್ಷಣೆ ಮಾಡಬೇಕಿದೆ. ಇದಕ್ಕಾಗಿ ಸಂಕಷ್ಟ ಸೂತ್ರ ಪಾಲಿಸಬೇಕಿದೆ ಕಾವೇರಿ ನೀರು ಹಂಚಿಕೆ ಮತ್ತು ಬರ ಪರಿಹಾರಕ್ಕೆ ಸರ್ಕಾರ ಸೂಕ್ತವಾಗಿ ಸ್ಪಂದಿಸಬೇಕು” ಎಂದು ಒತ್ತಾಯಿಸಿದರು.

ಮೇಕೆದಾಟು ವಿಚಾರವಾಗಿ ತಮಿಳುನಾಡು ಸರ್ಕಾರ ಅನಗತ್ಯ ವಿರೋಧ ವ್ಯಕ್ತಪಡಿಸುತ್ತಿದೆ. ಕೆಆರ್‌ಎಸ್‌ನಲ್ಲಿ 113 ಅಡಿ ನೀರು ಬಂದಿದೆ. ಹಾರಂಗಿ ಕಬಿನಿಯಲ್ಲಿ ನೀರು ಬರಬೇಕಿತ್ತು. ಆದರೆ ಮಳೆ ಕೊರತೆಯಿಂದ ನೀರು ಕೊಡಲು ಆಗಿಲ್ಲ ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಖಾಸಗಿ ಸಾರಿಗೆ ಒಕ್ಕೂಟ ಬಂದ್​ಗೆ ಕರೆ: ಸಿಎಂ, ಸಾರಿಗೆ ಸಚಿವರೊಂದಿಗೆ ಮಾತನಾಡುತ್ತೇನೆ ಎಂದ ಡಿಸಿಎಂ ಡಿಕೆ

ಒಂದು ದೇಶ ಒಂದು ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಒಂದು ದೇಶ ಒಂದು ಚುನಾವಣೆ ಜಾರಿ ಎಲ್ಲ ರಾಜ್ಯಗಳಿಗೆ ಕಷ್ಟ ಆಗಲಿದೆ ಎನ್ನುವುದು ನನ್ನ ವೈಯಕ್ತಿಕ ವಿಚಾರ. ವಿಧಾನಸಭೆ ಸೇರಿದಂತೆ ಸ್ಥಳೀಯ ಚುನಾವಣೆಗಳನ್ನು ನಡೆಸುವುದು ಸುಲಭವಲ್ಲ. ಮಾಜಿ ರಾಷ್ಟ್ರಪತಿ ಕೋವಿಂದ್ ಅವರ ನೇತೃತ್ವದ ಸಮಿತಿ ವರದಿ ನೀಡಲಿ ಎಂದಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮತದಾನ ಬಹಿಷ್ಕಾರ ಹಿಂಪಡೆದ ಕಟ್ಟಿಂಗೇರಿ ಮತದಾರರು

ರಸ್ತೆಯ ಅವ್ಯವಸ್ಥೆ ಖಂಡಿಸಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದ ಮತದಾರರ ಮನವೊಲಿಸುವಲ್ಲಿ ಮಾಜಿ...

ಕಲಬುರಗಿ | ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿತ್ತು: ಮಾಲೀಕಯ್ಯ ಗುತ್ತೇದಾರ

2018ರಲ್ಲಿ ಕಾರಣಾಂತರಗಳಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರ್ಪಡೆಯಾದೆ. ಪಕ್ಷದಲ್ಲಿ...

ದಕ್ಷಿಣ ಕನ್ನಡ | ಎನ್‌ಡಿಎ ಹೀನಾಯ ಸೋಲು, ‘ಇಂಡಿಯಾ’ ಒಕ್ಕೂಟಕ್ಕೆ ಬಹುಮತ ಖಚಿತ: ಎಂ ವೀರಪ್ಪ ಮೊಯಿಲಿ

ಬೆಲೆ ಏರಿಕೆ, ಆರ್ಥಿಕ ಅಸಮಾನತೆ ನಿರುದ್ಯೋಗದಿಂದ ಕೇಂದ್ರ ಸರ್ಕಾರದ ವಿರುದ್ಧ ಜನರ...

ಕರ್ನಾಟಕಕ್ಕೆ ಬರ ಪರಿಹಾರ ನೀಡಲು ಚುನಾವಣಾ ಆಯೋಗ ಸಮ್ಮತಿ, ಶೀಘ್ರವೇ ಹಣ ಬಿಡುಗಡೆ; ಸುಪ್ರೀಂಗೆ ಕೇಂದ್ರ ಮಾಹಿತಿ

ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಬರ ಪರಿಹಾರ ನೀಡಲಾಗಿದೆ. ಕರ್ನಾಟಕಕ್ಕೆ ಮೋಸವಾಗಿಲ್ಲವೆಂದು ಬೊಬ್ಬೆ...