ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

Date:

Advertisements

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು. ಈ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಮತ್ತು ಬಣ್ಣದ ವಿಗ್ರಹಗಳನ್ನು ಕೆರೆ, ಬಾವಿ ಹಾಗೂ ಇನ್ನಿತರ
ನೈಸರ್ಗಿಕ ಜಲಮೂಲಗಳಲ್ಲಿ ವಿಸರ್ಜಿಸುವುದರಿಂದ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಅವುಗಳ ಭೌತಿಕ ಹಾಗೂ ರಾಸಾಯನಿಕ ಸ್ಥಿತಿಗಳ ಬದಲಾವಣೆಯಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೇ ಪ್ರಾಣಿ, ಪಕ್ಷಿ ಹಾಗೂ ಇತರೇ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ. ಅಲ್ಲದೇ ಇಂತಹ ಕಲುಷಿತ ನೀರಿನಿಂದ ಸಾರ್ವಜನಿಕ ಆರೋಗ್ಯಕ್ಕೂ ಹಾನಿ ಉಂಟಾಗುತ್ತದೆ. ಉಚ್ಚ ನ್ಯಾಯಾಲಯದ ಆದೇಶದಂತೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುತ್ತೋಲೆ ಅನ್ವಯ ಸದರಿ ಹಬ್ಬದ ಆಚರಣೆಯಿಂದ ಉಂಟಾಗುವ ಮಾಲಿನ್ಯದಿಂದ ನೈಸರ್ಗಿಕ ಜಲ ಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ರಾಜ್ಯದ ಯಾವುದೇ ಕೆರೆ, ಬಾವಿ, ಕಟ್ಟೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿರುತ್ತದೆ.

ಆದ್ದರಿಂದ ಸಾರ್ವಜನಿಕರು ಈ ಕೆಳಕಂಡ ಕ್ರಮಗಳನ್ನು ಅನುಸರಿಸಿ ಪರಿಸರಸ್ನೇಹಿ ಗೌರಿಗಣೇಶ ಹಬ್ಬವನ್ನು ಆಚರಿಸಿ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸಲು ಸಹಕರಿಸುವಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚಿಸಿದೆ. ಮಾನ್ಯ ಉಚ್ಚ ನ್ಯಾಯಾಲಯದ ಆದೇಶದಂತೆ ಈಗಾಗಲೇ ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದ್ದು, ಪಿ.ಓ.ಪಿ ವಿಗ್ರಹಗಳನ್ನು ಅನಧಿಕೃತವಾಗಿ ತಯಾರಿ/ ಮಾರಾಟ ಮಾಡುವ ವ್ಯಕ್ತಿ/ ಸಂಸ್ಥೆಗಳ ಮೇಲೆ ಕಾನೂನು ಕ್ರಮವನ್ನು ತಕ್ಷಣ ಜರುಗಿಸಲಾಗುವುದು. ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ಬಣ್ಣ ಲೇಪಿತ ವಿಗ್ರಹಗಳನ್ನು ಯಾವುದೇ ನದಿ, ಕಾಲುವೆ,
ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿರುತ್ತದೆ.

ಗೌರಿ ಹಾಗೂ ಗಣೇಶ ಹಬ್ಬದ ಸಂದರ್ಭದಲ್ಲಿ ರಾಸಾಯನಿಕ ಬಣ್ಣಗಳಿಂದ ಮಾಡಿದ ಮೂರ್ತಿಗಳ ಬದಲಾಗಿ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವೈಜ್ಞಾನಿಕ ರೀತಿಯಲ್ಲಿ ವಿಸರ್ಜಿಸಬೇಕು. ವಿಸರ್ಜನೆ ಸಂದರ್ಭದಲ್ಲಿ ಹಸಿಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ ಇತ್ಯಾದಿ) ಹಾಗೂ ಒಣಕಸವನ್ನು ನೀರಿಗೆ ಎಸಯದೆ ಪ್ರತ್ಯೇಕವಾಗಿ ವಿಂಗಡಿಸಿ, ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಕ್ರಮವಹಿಸಬೇಕು. ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು, ಪ್ರತಿ ಸಮಿತಿಯವರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೋಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸಬೇಕು. ಗಣೇಶೋತ್ಸವ ಸಂದರ್ಭದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಉಪಯೋಗಿಸುವುದನ್ನು, ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯ ತನಕ ಧ್ವನಿ ವರ್ಧಕಗಳ ಬಳಕೆಯನ್ನು ಹಾಗೂ ಗಣೇಶ ವಿಗ್ರಹಗಳ ವಿಸರ್ಜನೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳ ಹೊರತಾಗಿ ಇತರೆ ಯಾವುದೇ ಪಟಾಕಿಗಳನ್ನು ಸುಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

Advertisements

ಪರಿಸರ ಮತ್ತು ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಪ್ರಕಟಣೆಯನ್ನು ನೀಡಲಾಗಿದ್ದು, ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಜಿಲ್ಲೆಯ ನಾಗರಿಕರು ಸಹಕರಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

Download Eedina App Android / iOS

X