ಪಠ್ಯ ಪರಿಷ್ಕರಣೆಯ ಧಾವಂತ ಏಕೆ, ಋಣ ತೀರಿಸಲಿಕ್ಕಾಗಿಯೇ: ಸುನಿಲ್‌ ಕುಮಾರ್‌ ಪ್ರಶ್ನೆ

Date:

  • ವಿದ್ಯಾರ್ಥಿ ಹಾಗೂ ಶಿಕ್ಷಕರ ಸಮಸ್ಯೆ ಮೊದಲು ಅರ್ಥ ಮಾಡಿಕೊಳ್ಳಿ
  • ಋಣ ಸಂದಾಯಕ್ಕೆ ಶಿಕ್ಷಣದಲ್ಲಿ ಗುಲಾಮಿ ಚಿಂತನೆ ತುರುಕುತ್ತೀರಾ?

ಪಠ್ಯ ಪರಿಷ್ಕರಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗಿರುವ ಧಾವಂತ ನೋಡಿದರೆ ಶಿಕ್ಷಣ ಇಲಾಖೆಯನ್ನು ಮೂರನೇ ವ್ಯಕ್ತಿಗಳು ನಿಯಂತ್ರಿಸುತ್ತಿರುವ ಅನುಮಾನ ಬರುತ್ತಿದೆ ಎಂದು ಮಾಜಿ ಸಚಿವ ಸುನಿಲ್‌ ಕುಮಾರ್‌ ಹರಿಹಾಯ್ದಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆ ವಿಚಾರವಾಗಿ ರಾಜ್ಯ ಸರ್ಕಾರ ತಾತ್ಕಾಲಿಕ ಸಮಿತಿ ರಚಿಸಿದ ಹಿನ್ನೆಲೆಯಲ್ಲಿ ಸರಣಿ ಟ್ವೀಟ್‌ ಮಾಡಿರುವ ಅವರು, “ನಾನು ಮೇಷ್ಟ್ರಾಗಿದ್ದೆ ಕಣ್ರಿ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡುವುದಕ್ಕೆ ಮುನ್ನ ವಿದ್ಯಾರ್ಥಿ ಹಾಗೂ ಶಿಕ್ಷಕರ ಸಮಸ್ಯೆ ಮೊದಲು ಅರ್ಥ ಮಾಡಿಕೊಳ್ಳಿ” ಎಂದು ಹೇಳಿದ್ದಾರೆ.

“ಅಧಿಕಾರಕ್ಕೆ ಬಂದು ತಿಂಗಳು ಕಳೆಯುವಷ್ಟರಲ್ಲೇ ಸಿದ್ದರಾಮಯ್ಯ ಸರ್ಕಾರ ಪಠ್ಯ-ಪುಸ್ತಕ ಪರಿಷ್ಕರಣೆಗೆ ಕೈ ಹಾಕಿದೆ. ಪಠ್ಯದಲ್ಲಿ ಭಾರತೀಯತೆ, ಸಂಸ್ಕ್ರತಿ ಹಾಗೂ ಇತಿಹಾಸದ ನೈಜ ಸತ್ಯಗಳೇನು ಎಂಬುದು ವಿದ್ಯಾರ್ಥಿಗಳಿಗೆ ತಿಳಿಯದಂತೆ ಮುಚ್ಚಿಡುವುದು ಸರ್ಕಾರದ ಉದ್ದೇಶವೇ? ಶಾಲೆಗಳಿಗೆ ಪಠ್ಯ- ಪುಸ್ತಕ ಪೂರೈಕೆಯಾದ ನಂತರ ಪರಿಷ್ಕರಣೆಯ ಹಟವೇಕೆ” ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಾಲಾ ಪಠ್ಯ ಪರಿಷ್ಕರಣೆ | ಬರಗೂರು ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆ ಮಾಡಿದ ಸರ್ಕಾರ

“ನಿಮ್ಮನ್ನು ಎರಡನೇ ಬಾರಿಗೆ ಮುಖ್ಯಮಂತ್ರಿ ಮಾಡಿದ್ದಾರೆಂಬ ಋಣ ತೀರಿಸಿಕೊಳ್ಳುವುದಕ್ಕಾಗಿ ಗುಲಾಮಿ ಚಿಂತನೆಯನ್ನು ಶಿಕ್ಷಣದಲ್ಲಿ ತುರುಕುತ್ತೀರಾ? ಸಿದ್ದರಾಮಯ್ಯನವರೇ ನಿಮಗೆ ಶ್ರೇಷ್ಠ ಭಾರತೀಯ ಚಿಂತನೆಗಳು, ನಿಜವಾದ ಆದರ್ಶ ಪುರುಷ ಯಾರಾಗಬೇಕು? ತಾಯಿ ಭಾರತೀಯ ಅಮರಪುತ್ರರು ಎಂಬ ವಿಚಾರಗಳು ಹೇಗೆ ಇಷ್ಟವಾಗುತ್ತದೆ ಹೇಳಿ? ನಿಮ್ಮ ದೃಷ್ಟಿಯಲ್ಲಿ ಶಾಲಾ ಪಠ್ಯದಲ್ಲಿ ನಕಲಿ ಗಾಂಧಿ ಕುಟುಂಬದ ಚರಿತ್ರೆ, ವಿದೇಶಿ ದಾಳಿಯ ವಿಕೃತಿಗಳು ಮಾತ್ರ ತುಂಬಿರಬೇಕಲ್ಲವೇ?” ಎಂದು ಟೀಕಿಸಿದ್ದಾರೆ.

“ಮಾನ್ಯ ಸಿದ್ದರಾಮಯ್ಯನವರೇ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ಇಲಾಖೆಯ ಇತರೆ ವಿಚಾರಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯುವುದಕ್ಕಾದರೂ ಅವಕಾಶ ಕೊಡಿ. ಅದನ್ನು ಬಿಟ್ಟು ಆರಂಭದಲ್ಲೇ ವಿದ್ಯಾರ್ಥಿಗಳಿಗೆ ಕಲಿಸುವ ಪಾಠ ಯಾವುದೆಂದು ನಿರ್ಧರಿಸಿ ಎಂದು ನೀವು ಪಾಠ ಮಾಡಬೇಡಿ” ಎಂದು ಆಗ್ರಹಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ಉಮಾಕಾಂತ ನಾಗಮಾರಪಳ್ಳಿ

ಚುನಾವಣೆ ಘೋಷಣೆಯಾದಾಗಿನಿಂದ ಒಂದಿಲ್ಲೊಂದು ರೀತಿಯಲ್ಲಿ ಕಿರುಕುಳ ನೀಡಲಾಗುತ್ತಿದೆ ಎಂದು ಗಂಭೀರ ಆರೋಪ ಡಿಸಿಸಿ...

ಗದಗ | ಸೆ.30ರಂದು ಜಿಲ್ಲಾ ಉಸ್ತುವಾರಿ ಸಚಿವರ ಜನತಾ ದರ್ಶನ; ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ

ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಜನತಾ...

ಪಾಕಿಸ್ತಾನ | ಮಸೀದಿ ಬಳಿ ಆತ್ಮಹತ್ಯಾ ಬಾಂಬ್ ದಾಳಿ; 52 ಮಂದಿ ಬಲಿ, 130ಕ್ಕೂ ಹೆಚ್ಚು ಜನ ಗಂಭೀರ

ಪಾಕಿಸ್ತಾನದ ಪ್ರಕ್ಷುಬ್ಧ ಪ್ರದೇಶವಾದ ಬಲೂಚಿಸ್ತಾನ್ ಪ್ರಾಂತ್ಯದ ಮಸೀದಿಯೊಂದರ ಬಳಿ ಶುಕ್ರವಾರ ಪ್ರವಾದಿ...

ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ...