ಹಾಸನ | ಸಮಾಜದ ಉನ್ನತಿಯಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದು: ಥಾವರ್ ಚಂದ್ ಗೆಹ್ಲೋಟ್

Date:

Advertisements

ಸಮಾಜ ನಿರ್ಮಾಣ ಮತ್ತು ವ್ಯಕ್ತಿಯ ಉನ್ನತಿಯಲ್ಲಿ ಶಿಕ್ಷಣವು ಅತ್ಯಂತ ಮಹತ್ವದ ಕೊಡುಗೆಯನ್ನು ಹೊಂದಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.

ಹಾಸನ ನಗರದಲ್ಲಿ ಸೆಂಟ್ ಜೋಸೆಫ್ ಕಾಲೇಜಿನ ನೂತನ ಕಟ್ಟಡವನ್ನು ಶನಿವಾರ ಉದ್ಘಾಟಿಸಿ ಮಾತನಾಡಿ, ಇಡೀ ಸಮಾಜ ಮತ್ತು ದೇಶದಲ್ಲಿ ನೈತಿಕತೆಯನ್ನು ಮೂಡಿಸುವ, ಆಧುನಿಕ ಜ್ಞಾನದ ಜೊತೆಗೆ ಸಂಸ್ಕೃತಿಯ ಸಂರಕ್ಷಣೆ ಮಾಡುವ, ರಾಷ್ಟ್ರದ ಏಕತೆ-ಸಮಗ್ರತೆ ಮತ್ತು ಸಮಾಜದಲ್ಲಿ ಸಮಾನತೆ ಹಾಗೂ ಸೌಹಾರ್ದತೆಯನ್ನು ಕಾಪಾಡುವಂತಹ ಶಿಕ್ಷಣದ ಅವಶ್ಯಕತೆ ಇಂದು ಇದೆ ಎಂದು ಅಭಿಪ್ರಾಯಪಟ್ಟರು.

“ಶಿಕ್ಷಣದಿಂದ ವ್ಯಕ್ತಿತ್ವವು ರೂಪುಗೊಳ್ಳುತ್ತದೆ, ಮಾನಸಿಕ ಬೆಳವಣಿಗೆಯಾಗುತ್ತದೆ, ಬುದ್ಧಿವಂತಿಕೆಯು ಬೆಳೆಯುತ್ತದೆ ಮತ್ತು ಮನುಷ್ಯ ತನ್ನ ಸ್ವಂತ ಕಾಲಿನ ಮೇಲೆ ನಿಲ್ಲುತ್ತಾನೆ” ಎಂದು ಸ್ವಾಮಿ ವಿವೇಕಾನಂದ ಹೇಳಿದ್ದರು. ಈ ನಿಟ್ಟಿನಲ್ಲಿ ಶಿಕ್ಷಣವನ್ನು ಕೌಶಲ್ಯ ಮತ್ತು ನೈತಿಕ ಮೌಲ್ಯಗಳೊಂದಿಗೆ ಜೋಡಿಸುವ ಮೂಲಕ ಹೊಸ ಭಾರತ ನಿರ್ಮಿಸುವ ದೃಷ್ಟಿಯಲ್ಲಿ ಶಿಕ್ಷಣ ಸಂಸ್ಥೆಗಳು ಕೆಲಸ ಮಾಡಬೇಕಿದೆ ಎಂದು ಸಲಹೆ ನೀಡಿದರು.

Advertisements

ಸೆಂಟ್ ಜೋಸೆಫ್ ವಿದ್ಯಾಸಂಸ್ಥೆಯು ರಾಷ್ಟ್ರಕ್ಕೆ ಅನೇಕ ಸ್ವಾತಂತ್ರ್ಯ ಹೋರಾಟಗಾರರನ್ನು, ಭಾರತೀಯ ನ್ಯಾಯಾಂಗಕ್ಕೆ ಅನೇಕ ದಿಗ್ಗಜರನ್ನು, ನಾಗರಿಕ ಸೇವಕರು, ವಿಜ್ಞಾನಿಗಳು, ಕ್ರೀಡಾಪಟುಗಳು, ರಾಜಕಾರಣಿಗಳು ಮತ್ತು ಸೇನಾ ಅಧಿಕಾರಿಗಳನ್ನು ನೀಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಗ್ಯಾರಂಟಿಗಳ ಟೀಕಿಸುವ ಮುನ್ನ ಬಿಜೆಪಿ ಕೊಟ್ಟ ಮಾತು ಉಳಿಸಿಕೊಳ್ಳಲಿ: ಡಿಕೆಶಿ ತಿರುಗೇಟು

ಶಾಸಕ ಎಚ್‌ ಪಿ ಸ್ವರೂಪ್ ಪ್ರಕಾಶ್, ಹಾಸನ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ತಾರಾನಾಥ್, ಹಾಸನ ಜಿಲ್ಲಾಧಿಕಾರಿ ಅರ್ಚನಾ, ಪೊಲೀಸ್ ವರಿಷ್ಠಾಧಿಕಾರಿ ಹರಿಹರನ್ ಶಂಕರ್, ಹಸನ್ ಜೆಸ್ಯೂಟ್ ಎಜುಕೇಷನಲ್ ಸೊಸೈಟಿಯ ಅಧ್ಯಕ್ಷ ಫಾರ್ ಡಿಯೋನಿಸಿಯಸ್ ವಾಜ್, ಹಾಸನ ಜೆಸ್ಯೂಟ್ ಎಜುಕೇಷನಲ್ ಸೊಸೈಟಿ ಪ್ರಾಂಶುಪಾಲ ಡೇನಿಯಲ್ ಫೆರ್ನಾಂಡಿಸ್ ಹಾಗೂ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X