ಶಿವಮೊಗ್ಗ | ಈದಿನ ಇಂಪ್ಯಾಕ್ಟ್; ಬಡ ಕುಟುಂಬದ ನೆರವಿಗೆ ಧಾವಿಸಿದ ಕರವೇ

Date:

ಈದಿನ ಡಾಟ್ ಕಾಮ್ “ಶಿವಮೊಗ್ಗ| ನೆರವಿನ ಹಸ್ತಕ್ಕಾಗಿ ಎದುರು ನೋಡುತ್ತಿದೆ ಬಡ ಕುಟುಂಬ” ಎಂಬ ಶೀರ್ಷಿಕೆಯಡಿಯಲ್ಲಿ ಸುದ್ದಿಯೊಂದನ್ನು ಮಾಡಿತ್ತು. ಈ ಸುದ್ದಿಗೆ ಸ್ಪಂದಿಸಿದ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಆರೋಗ್ಯಾಧಿಕಾರಿಗಳು ಬಡ ಕುಟುಂಬಕ್ಕೆ ನೆರವಿನ ಹಸ್ತ ಚಾಚಿದ್ದಾರೆ.

- Advertisement -

ಶಿವಮೊಗ್ಗ ನಗರದ ಕರವೇ ಸ್ವಾಭಿಮಾನಿ ಬಣದ ಕಿರಣ್ ಅವರ ತಂಡ, ಸಹಾಯಕ್ಕೆ ಧಾವಿಸಿದ್ದು, ಒಂದು ತಿಂಗಳಿಗೆ ಸರಿಹೊಂದುವಷ್ಟು ಆಹಾರ, ದಿನಸಿ ಕಿಟ್ ಹಾಗೂ ಧನ ಸಹಾಯ ನೀಡಿ ಮಾನವೀಯತೆ ಮೆರದಿದೆ. ತಂಡದ ಉಪಾಧ್ಯಕ್ಷ ವಿಜಯ್ ಕುಮಾರ್ ಮೊಬೈಲ್ ಕ್ಯಾಂಟೀನ್ ವ್ಯವಸ್ಥೆಗೆ ಅನುಕೂಲವಾಗುವಂತೆ ತಾತ್ಕಾಲಿಕವಾಗಿ ಆಟೋ ನೀಡಿದ್ದಾರೆ. ಜೊತಗೆ ಮುಂದಿನ ದಿನಗಳಲ್ಲಿ ಇವರಿಗೆ ಅವಶ್ಯಕ ನೆರವು ಬೇಕಾದಲ್ಲಿ ತಿಳಿಸಲು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...
1001176090

ಶಿವಮೊಗ್ಗ ನಗರದ ಆರೋಗ್ಯಾಧಿಕಾರಿ ಕೃಷ್ಣಮೂರ್ತಿ ಸಹ ಈದಿನ ಡಾಟ್‌ ಕಾಮ್ ಸುದ್ದಿಗೆ ಸ್ಪಂದಿಸಿ, ಮನೆಗೆ ತೆರಳಿ ತಮ್ಮ ಕೈಯಲ್ಲಾಗುವ ಎಲ್ಲಾ ರೀತಿಯ ಸಹಾಯವನ್ನು ನೀಡಲಿದ್ದೇವೆ. ಸರ್ಕಾರದಿಂದ ಬರುವ ಯೋಜನೆಯ ಸಹಾಯ ಮಾಡಿಸಿಕೊಡುತ್ತೇವೆ ಎಂದು ತಿಳಿಸಿದರು. ಶಿವಮೊಗ್ಗ ಈದಿನ ಮಾಧ್ಯಮ ಪ್ರತಿನಿಧಿ ರಾಘವೇಂದ್ರ ಅವರಿಗೆ ಉತ್ತಮ ಸಮಾಜಮುಖಿ ಸುದ್ದಿ ಮಾಡಿದ್ದೀರಿ ಎಂದು ಮೆಚ್ಚುಗೆ ಸೂಚಿಸಿದರು.

ಮಾಧ್ಯಮ ಪ್ರತಿನಿಧಿ ರಾಘವೇಂದ್ರ MILAAP ಎಂಬ App ಮೂಲಕ ಅನಾರೋಗ್ಯಕ್ಕೆ ಒಳಗಾಗಿರುವ ಈ ಕುಟುಂಬಕ್ಕೆ ಸಹಾಯ ಹಸ್ತ ಕೋರಿದ್ದಾರೆ. MILAAP ಎಂಬ ತಂತ್ರಾಂಶವು ದೇಶದ ಯಾವುದೇ ಬಡ ಕುಟುಂಬಕ್ಕೆ ದಾನಿಗಳ ಮುಖೇನ ಹಣ ಸಂಗ್ರಹಣೆ ಮಾಡಿ ಸಹಾಯ ಮಾಡುತ್ತದೆ.

ಬುದ್ದಿಮಾಂದ್ಯ ಮಗ 1024x576 1

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ನೆರವಿನ ಹಸ್ತಕ್ಕಾಗಿ ಎದುರು ನೋಡುತ್ತಿದೆ ಬಡ ಕುಟುಂಬ

ಬಡ ಕುಟುಂಬಕ್ಕೆ ಮತ್ತಷ್ಟು ಸಹಾಯದ ಅವಶ್ಯಕತೆ ಇದೆ. ಮಗಳ ವಿದ್ಯಾಭ್ಯಾಸ ಹಾಗೂ ಬುದ್ದಿಮಾಂದ್ಯ ಮಗನ ಜೀವನಕ್ಕೆ ದಾರಿ ರೂಪಿಸಿಕೊಡಬೇಕಿದೆ. ಮುಂದಿನ ದಿನಗಳಲ್ಲಿ ದಾನಿಗಳು ಹಾಗೂ ಶಕ್ತರು ಬಡ ಕುಟುಂಬಕ್ಕೆ ನೆರವು ನೀಡುವ ಮೂಲಕ ಕುಟುಂಬವನ್ನು ಸ್ವಾವಲಂಬಿಯಾಗಿ ಮಾಡುವ ನಿಟ್ಟಿನಲ್ಲಿ ಒಂದಾಗಿ ಸದೃಢ ಸಮಾಜ ಕಟ್ಟುವ ಕೆಲಸ ಆಗಲಿ ಎಂಬುದು ನಮ್ಮ ಈದಿನ ಡಾಟ್ ಕಾಮ್ ಆಶಯವಾಗಿದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...