ಈ ದಿನ ವರದಿ ಫಲಶೃತಿ | ವಡ್ಡರ ಸಮುದಾಯದ ಸಂಕಷ್ಟಕ್ಕೆ ಸ್ಪಂದಿಸಿದ ಜೇವರ್ಗಿ ತಹಶೀಲ್ದಾರ್‌

Date:

ಅಡುಗೆ ಮನೆಯಲ್ಲಿ ಉಪಯೋಗಿಸುವ ಕಲ್ಲಿನ ಉಪಕರಣಗಳಾದ ಬೀಸುವ ಕಲ್ಲು, ರುಬ್ಬುಗುಂಡು, ಖಲಗಲ್(ಅಸಗಲ್ಲ) ಸೇರಿದಂತೆ ಹಲವು ಕಲ್ಲಿನ ಉಪಕರಣಗಳು ಮಾರಾಟವಾಗದೆ ಸಂಕಷ್ಟದಲ್ಲಿದ್ದ ವಡ್ಡರ ಸಮುದಾಯದ ಬಳಿಗೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಹಶೀಲ್ದಾರ್‌ ಮತ್ತು ಸಾಮಾಜ ಕಲ್ಯಾಣ ಇಲಾಖೆಯ ಮುಖ್ಯಾಧಿಕಾರಿಗಳು ಭೇಟಿ ನೀಡಿದ್ದು, ವಡ್ಡರ ಸಮುದಾಯದ ಸಂಕಷ್ಷ ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ.

- Advertisement -

ಕಲ್ಲು ಒಡೆದು, ಅದಕ್ಕೆ ಸುಂದರ ಆಕೃತಿ ಕೊಟ್ಟು ಅಡುಗೆ ಮನೆಯಲ್ಲಿ ಉಪಯೋಗಿಸುವ ಉಪಕರಣ ತಯಾರಕರ ಕುರಿತು ಈ ದಿನ.ಕಾಮ್ ಕಳೆದ ಆಗಸ್ಟ್ 17ರಂದು ಜೇವರ್ಗಿ | ಮಾರಾಟವಾಗದ ಅಡುಗೆ ಮನೆಯಲ್ಲಿ ಉಪಯೋಗಿಸುವ ಕಲ್ಲಿನ ಉಪಕರಣಗಳು; ಸಂಕಷ್ಟದಲ್ಲಿ ವ್ಯಾಪಾರಿಗಳು ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. ಅಲ್ಲದೇ, ಆ.20ರಂದು ವಿಡಿಯೋ ವರದಿ ಕೂಡ ಪ್ರಕಟಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಈ ವರದಿಯನ್ನು ಗಮನಿಸಿದ ಜೇವರ್ಗಿ ತಹಶೀಲ್ದಾರ್ ಮಲ್ಲಣ್ಣ ಯಲಗೋಡ್ ಅವರು ವಡ್ಡರ ಸಮುದಾಯದ ಕುಟುಂಬಗಳು ವಾಸಿಸುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ್ದು, ಸರ್ಕಾರದಿಂದ ಸೂಕ್ತ ಸೌಲಭ್ಯ ಒದಗಿಸುವುದಾಗಿ ಭರವಸೆ ನೀಡಿದ್ದಾರೆ.

ವಡ್ಡರ ಸಮುದಾಯಕ್ಕೆ ತಹಶೀಲ್ದಾರ್‌ ಸ್ಪಂದನೆ

“ಸದ್ಯಕ್ಕೆ ಈ ವ್ಯಾಪ್ತಿಯಲ್ಲಿ ಎಲ್ಲಿಯೂ ಸರ್ಕಾರಿ ಜಾಗವಿಲ್ಲ. ಅಲ್ಲದೇ, ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ನಿವೇಶನ ಒದಗಿಸುವ ಯಾವುದೇ ಯೋಜನೆ ಇಲ್ಲದಿರುವುದರಿಂದ ಮುಂಬರುವ ದಿನಗಳಲ್ಲಿ ನಿವೇಶನ ವಂಚಿತರ ಪಟ್ಟಿಯಲ್ಲಿ ವಡ್ಡರ ಸಮುದಾಯದ ಐದು ಕುಟುಂಬಗಳ ಹೆಸರನ್ನು ಸೇರಿಸುತ್ತೇವೆ. ನಂತರ ಈ ಯೋಜನೆಯಲ್ಲಿ ನಿವೇಶನ ಒದಗಿಸಲಾಗುವುದು” ಎಂದು ಭರವಸೆ ನೀಡಿದರು.

ವಸತಿ ವಂಚಿತ ವಡ್ಡರ ಸಮುದಾಯಗಳ ಕುಟುಂಬಗಳ ಬಗ್ಗೆ eedina ಯೂಟ್ಯೂಬ್‌ನಲ್ಲಿ ಪ್ರಸಾರವಾಗಿದ್ದ ವರದಿ

ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವಂತೆ ಹೇಳಿದ್ದು, “ನಾವು ಮತ್ತೊಮ್ಮೆ ಈ ಸಮುದಾಯಕ್ಕೆ ಭೇಟಿ ನೀಡುವಷ್ಟರಲ್ಲಿ ನಿಮ್ಮ ಮಕ್ಕಳನ್ನೆಲ್ಲ ಶಾಲೆಗೆ ದಾಖಲಿಸಿರಬೇಕು” ಎಂದು ಸೂಚನೆ ನೀಡಿದ್ದಾರೆ.

ಅಧಿಕಾರಿಗಳ ಭೇಟಿ

ಈ ಸುದ್ದಿ ಓದಿದ್ದೀರಾ? ಮಂಡ್ಯ | ಮೈಷುಗರ್ ಸಕ್ಕರೆ ಕಾರ್ಖಾನೆಯ ₹181.84 ಕೋಟಿ ಸಾಲ ತೀರುವಳಿ: ಸಿ ಡಿ ಗಂಗಾಧರ್

ವಡ್ಡರ ಸಮುದಾಯದ ನಾಗುಬಾಯಿ ಅವರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಅಧಿಕಾರಿಗಳು ಭೇಟಿ ನೀಡಿ ಸೌಲಭ್ಯ ಒದಗಿಸುವುದಾಗಿ ಭರವಸೆ ನೀಡಿದ್ದಾರೆ. ವರದಿಯ ಮೂಲಕ ನಮ್ಮ ಸಮುದಾಯದ ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ತಂದ ಈ ದಿನ.ಕಾಮ್‌ಗೆ ಧನ್ಯವಾದಗಳು” ಎಂದು ಸಂತಸ ವ್ಯಕ್ತಪಡಿಸಿದರು.

ತಹಶೀಲ್ದಾರ್ ಭೇಟಿಯ ವೇಳೆ ಸಮಾಜ ಕಲ್ಯಾಣ ಇಲಾಖೆಯ ಮುಖ್ಯಾಧಿಕಾರಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕೂಡ ಉಪಸ್ಥಿತರಿದ್ದರು.

WhatsApp Image 2024 08 26 at 7.56.13 PM edited
WhatsApp Image 2024 08 26 at 8.01.59 PM
WhatsApp Image 2026 05 02 at 12.01.27 e1777704270988
ಗೀತಾ ಹೊಸಮನಿ
+ posts

ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ...

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ...

ಮಂಗಳೂರು | ಬರದ ಸಂಕಷ್ಟದ ನಡುವೆ ಕಂಬಳ ಬೇಡ: ಕೋಣಗಳ ಮಾಲೀಕರಿಗೆ ಎ.ಟಿ. ರಾಮಸ್ವಾಮಿ ಮನವಿ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸುತ್ತಿದ್ದು, ರೈತರು ಹಾಗೂ...

ಚಿಕ್ಕಮಗಳೂರು | ಮಹಿಳೆಗೆ ದೌರ್ಜನ್ಯ ಆರೋಪದಡಿ ಅರ್ಚಕ ಬಂಧನ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಅರ್ಚಕ ಸತೀಶ್ ಪಾತ್ರಿ ಎಂಬಾತ ದೆವ್ವ...