ಗದಗ | ಈ ದಿನ.ಕಾಮ್‌ ಫಲಶ್ರುತಿ: ಅಲೆಮಾರಿ ಸಮುದಾಯ ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ

Date:

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಹಾಗೂ ಶಿಗ್ಲಿ ಗ್ರಾಮದಲ್ಲಿ ಅಲೆಮಾರಿ ಬುಡಕಟ್ಟು ಸಮುದಾಯಗಳ ಸಮಸ್ಯೆಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಗಳ ಕುರಿತು ಈದಿನ.ಕಾಮ್‌, “ನೀರು, ಕರೆಂಟ್ ಕೇಳಿದ್ರ, ನಿಮ್ಜಾಗ ಎಲೈತಿ ಅಂತ ಹೇಳ್ತಾರೆ; ಅಲೆಮಾರಿ ಸಮುದಾಯಗಳ ಗೋಳು ಕೇಳೋರಾರು?” ಎಂದು ವಿಸ್ತೃತ ವರದಿ ಮಾಡಿತ್ತು. ಈ ಸುದ್ದಿ ಪ್ರಕಟವಾದ ಬೆನ್ನಲ್ಲೇ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

- Advertisement -

ಶಿಗ್ಲಿ ಗ್ರಾಮ ಮತ್ತು ಲಕ್ಷ್ಮೇಶ್ವರ ಪಟ್ಟಣದ ದೊಡ್ಡೂರು ರಸ್ತೆಯ ಪಕ್ಕದಲ್ಲಿ ವಾಸಿಸುವ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಜನರನ್ನು ಭೇಟಿ ಮಾಡಿರುವ ಅಧಿಕಾರಿಗಳು ಅಲ್ಲಿ ವಾಸಿಸುವವರ ಸಮಸ್ಯೆಗಳ ಕುರಿತು ಆಲಿಸಿದ್ದಾರೆ. ಜೊತೆಗೆ, ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪರಿಶೀಲನೆ ಬಳಿಕ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಶಿರಹಟ್ಟಿ ತಾಲೂಕು ಸಹಾಯಕ ನಿರ್ದೇಶಕ ಶರಣಯ್ಯ ಕುಲಕರ್ಣಿ, “ಶಿಗ್ಲಿ ಹಾಗೂ ಲಕ್ಷ್ಮೇಶ್ವರ ಪಟ್ಟಣದ ಅಲೆಮಾರಿ ಜನಾಂಗದವರನ್ನು ಭೇಟಿ ಮಾಡಿದ್ದೇನೆ. ಇಲ್ಲಿಯ ಜನರಿಗೆ ಜಾಗ ಇಲ್ಲ, ಮನೆಗಳಿಲ್ಲ. ಅವರೆಲ್ಲರೂ ಗುಡಿಸಲುಗಳಲ್ಲಿದ್ದಾರೆ. ಗಟಾರ ತೊಂದರೆ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಅವರು ಎದುರಿಸುತ್ತಿದ್ದಾರೆ. ಎಲ್ಲ ಕುಟುಂಬಗಳ ಸರ್ವೆ ಮಾಡಿ, ಅರ್ಹರ ಪಟ್ಟಿ ತಯಾರಿಸಿ, ಅಗತ್ಯ ದಾಖಲಾತಿಗಳನ್ನು ಕೊಟ್ಟರೆ, ಸಮಾಜ ಕಲ್ಯಾಣ ಇಲಾಖೆಗೆ ವರದಿ ಒಪ್ಪಿಸಿ, ಸರ್ಕಾರದಿಂದ ಸೌಲಭ್ಯ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ ಕೇಶವ ಕಟ್ಟಿಮನಿ, ಅಲೆಮಾರಿ ಸಮುದಾಯಗಳ ಮುಖಂಡ ರಾಘವೆಂದ್ರ, ರಮೇಶ ಹಂಗನಕಟ್ಟಿ, ಸುರೇಶ ಹರದಗಟ್ಟಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ...

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...