ಬೀದರ್‌ | ʼಈದಿನʼ ಫಲಶೃತಿ : ವರದಿಯಾದ ಗಂಟೆಯಲ್ಲೇ ವೃದ್ಧೆ ಮನೆಗೆ ಧಾವಿಸಿದ ಅಧಿಕಾರಿ

Date:

ಬೀದರ್‌ ತಾಲೂಕಿನ ಮಿರ್ಜಾಪುರ(ಟಿ) ಗ್ರಾಮದ 72 ವರ್ಷದ ವೃದ್ಧೆ ನಾಗಮ್ಮ ಶಂಕರೆಪ್ಪ ಅವರ ಮನೆಗೆ ಬೀದರ್‌ ತಹಸೀಲ್ದಾರ್‌ ದಿಲಶಾದ್ ಮಹಾತ್‌ ಅವರ ಸೂಚನೆ ಮೇರೆಗೆ ಗ್ರಾಮ ಲೆಕ್ಕಾಧಿಕಾರಿ ಭೇಟಿ ನೀಡಿದ್ದಾರೆ.

- Advertisement -

ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿ ತಯ್ಯಾಬ್‌ ಅವರು ಸೋಮವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ವೃದ್ಧೆ ನಾಗಮ್ಮ ಅವರ ಮನೆಗೆ ಭೇಟಿ ನೀಡಿ ದಾಖಲೆ ಪರಿಶೀಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

7 ದಿನಗಳಲ್ಲಿ 8 ಇ-ಮೇಲ್‌ಗಳು; ಆದರೂ ಮತಪಟ್ಟಿಯಲ್ಲಿ ಉಳಿಯಲಿಲ್ಲ...

90 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿರುವ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ 97 ಮತದಾರರು ಎಂಬ ಸಂಖ್ಯೆ ಅತಿ ಚಿಕ್ಕದಾಗಿ ಕಾಣಬಹುದು. ಆದರೆ, ಗೋವಾದ ಈ 97 ಮತದಾರರ ಪ್ರಕರಣವು ಚುನಾವಣಾ ಆಯೋಗದ ಕಾರ್ಯವಿಧಾನ,...

ಈ ಬಗ್ಗೆ ಅಜ್ಜಿಯ ಮಗ ಪ್ರಭು ಮಾತನಾಡಿ, ʼಈದಿನ.ಕಾಮ್ ವರದಿ ಪರಿಣಾಮವಾಗಿ ಗ್ರಾಮ ಲೆಕ್ಕಾಧಿಕಾರಿಗಳು ಮನೆಗೆ ಆಗಮಿಸಿ ನಮ್ಮ ತಾಯಿಯ ದಾಖಲೆ ಪರಿಶೀಲಿಸಿದ್ದಾರೆ. ಶೀಘ್ರದಲ್ಲೇ ವೃದ್ಧಾಪ್ಯ ವೇತನ ಮಂಜೂರು ಮಾಡುವುದಾಗಿ ಭರವಸೆ ನೀಡಿದ್ದಾರೆ. ಅತ್ಯಂತ ಕಳಕಳಿಯಿಂದ ವರದಿ ಪ್ರಕಟಿಸಿದ ʼಈದಿನʼ ಮಾಧ್ಯಮಕ್ಕೆ ಧನ್ಯವಾದʼ ಎಂದು ತಿಳಿಸಿದ್ದಾರೆ.

ʼನಾಗಮ್ಮಾ ಅವರು ಇಲ್ಲಿಯವರೆಗೆ ಪಿಂಚಣಿಗಾಗಿ ಒಮ್ಮೆಯೂ ಅರ್ಜಿ ಹಾಕಿಲ್ಲ. ಅಜ್ಜಿಯ ಹೆಸರಿನಲ್ಲಿ ಯಾವುದೇ ಬ್ಯಾಂಕ್ ಖಾತೆಯಿಲ್ಲ. ಗ್ರಾಮ ಲೆಕ್ಕಾಧಿಕಾರಿ ಅವರು ಅಂಚೆ ಕಚೇರಿಯಲ್ಲಿ ಖಾತೆ ತೆರೆಯಲು ಸಂಪರ್ಕಿಸಿದರೆ ಪಾನ್ ಕಾರ್ಡ್ ಬೇಕಾಗುತ್ತದೆ ಎಂದು ಹೇಳಿದ್ದಾರೆ. ಬ್ಯಾಂಕ್ ಖಾತೆ ಇಲ್ಲದೇ ಅರ್ಜಿ ಸಲ್ಲಿಸಲು ಬರುವುದಿಲ್ಲ. ಬ್ಯಾಂಕ್‌ ಖಾತೆಗಾಗಿ ಪ್ರಯತ್ನಿಸುತ್ತಿದ್ದೇವೆ. ಖಾತೆಯಾದ ಬಳಿಕ ಪಿಂಚಣಿ ಮಂಜೂರು ಮಾಡಲಾಗುವುದುʼ ಎಂದು ಮನ್ನಳ್ಳಿ ಹೋಬಳಿ ನಾಡ ತಹಸೀಲ್ದಾರ್‌ ಮಲ್ಲಿಕಾರ್ಜುನ ಈದಿನ.ಕಾಮ್‌ ಗೆ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ವೃದ್ಧಾಪ್ಯ ವೇತನ, ಅನ್ನಭಾಗ್ಯ ಸಿಗದೆ ವೃದ್ಧೆ ಪರದಾಟ

ಅನ್ನಭಾಗ್ಯ, ಗೃಹಲಕ್ಷ್ಮಿ, ವಿಧವಾ ವೇತನ ಹಾಗೂ ವೃದ್ಧಾಪ್ಯ ವೇತನ ಹಣ ಸೇರಿದಂತೆ ಸರ್ಕಾರದ ಎಲ್ಲ ಯೋಜನೆಗಳಿಂದ ವಂಚಿತರಾದ ನಾಗಮ್ಮ ಅವರು ಎದುರಿಸುತ್ತಿರುವ ಸಮಸ್ಯೆ ಕುರಿತು ಈದಿನ.ಕಾಮ್‌ ನಿನ್ನೆ (ಆ.27) ಮಧ್ಯಾಹ್ನ ‘ಬೀದರ್‌ | ವೃದ್ಧಾಪ್ಯ ವೇತನ, ಅನ್ನಭಾಗ್ಯ ಸಿಗದೆ ವೃದ್ಧೆ ಪರದಾಟ’ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. ವರದಿಗೆ ಸ್ಪಂದಿಸಿದ ಆಡಳಿತ ವರ್ಗ ವೃದ್ಧೆಗೆ ಸ್ಪಂದಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಹಸಿರು ನಿಶಾನೆ; ಚಾಲಕರ ಸಂಘದಿಂದ ಸುಪ್ರೀಂಗೆ ಮೇಲ್ಮನವಿ

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಹಸಿರು ನಿಶಾನೆ ತೋರಿಸಿದ್ದ ಹೈಕೋರ್ಟ್ ತೀರ್ಪು...

ಉಡುಪಿ | ಜೈಂಟ್ಸ್ ಗ್ರೂಪ್ ವತಿಯಿಂದ ಒಂದು ವಾರದ ಸಮಾಜಮುಖಿ ಸೇವಾ ಕಾರ್ಯಕ್ರಮಗಳು ಯಶಸ್ವಿ

ದಾನಧರ್ಮ ಹಾಗೂ ಸಮಾಜಮುಖಿ ಸೇವಾ ಚಟುವಟಿಕೆಗಳಿಗೆ ಸದಾ ಆದ್ಯತೆ ನೀಡುತ್ತಿರುವ ಜೈಂಟ್ಸ್...

ಹೆರಿಗೆಯ ನಂತರ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಿಗೆ! ಬಾಲಕನ ವಿರುದ್ಧ ಪೋಕ್ಸೋ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಕೇರಳ ಮೂಲದ ಬಾಲಕನೊಬ್ಬ ಅಪ್ರಾಪ್ತ ಬಾಲಕಿಯೊಂದಿಗೆ...

ಶೌಚಕ್ಕೆ ಬಾವಿ ನೀರು ಹೊರುವ ವಿದ್ಯಾರ್ಥಿಗಳು: ತಾತ್ಕಾಲಿಕವಷ್ಟೇ ಎಂದು ನುಣುಚಿದ ಆಡಳಿತ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಿಂದ ಸುಮಾರು 8 ಕಿ.ಮೀ ದೂರದಲ್ಲಿರುವ...