ಈದಿನ ಫಲಶೃತಿ | ಎಚ್ಚೆತ್ತ ಜೆಜೆಎಂ ಅಧಿಕಾರಿಗಳು : ರಸ್ತೆ ಬದಿಯ ಹಳ್ಳ ಮುಚ್ಚಿ ರಸ್ತೆ ಸಂಚಾರಕ್ಕೆ ಅವಕಾಶ

Date:

ಗುಬ್ಬಿ ತಾಲೂ ಳಕಿನ ಚಿಕ್ಕ ಚೆಂಗಾವಿ ಗ್ರಾಮದ ಬಳಿ ರಸ್ತೆ ಬದಿ 600 ಮೀಟರ್ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿಗೆ ತೆಗೆದ ಹಳ್ಳ ಅಪಘಾತಕ್ಕೆ ಕಾರಣವಾಗಿತ್ತು. ಈ ಹಿನ್ನಲೆ ಈದಿನ ಡಾಟ್ ಕಾಮ್  ನಲ್ಲಿ ಸುದ್ದಿ ಪ್ರಕಟವಾದ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಬದಿಯ ಹಳ್ಳವನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

- Advertisement -

ಕಳೆದ ಆರು ತಿಂಗಳ ಹಿಂದೆ ಜಲ ಜೀವನ್ ಮಿಷನ್ ಯೋಜನೆಯ ಮನೆ ಮನೆಗೆ ನಳ ಸಂಪರ್ಕ ಮಾಡುವ ಕಾಮಗಾರಿ ಆರಂಭಿಸಲಾಗಿತ್ತು. ಆದರೆ ಕೆಲವು ಕಡೆ ಪೈಪ್ ಲೈನ್ ಅಳವಡಿಸಿ ಉಳಿದಂತೆ ಹಾಗೆಯೇ ಹಳ್ಳ ಉಳಿಸಲಾಯಿತು. ಇದರಿಂದ ಗ್ರಾಮಸ್ಥರಿಗೆ ತೀವ್ರ ಅಸಮಾಧಾನ ತಂದಿತ್ತು. ಆರೇಳು ಅಪಘಾತಗಳು ಸಂಭವಿಸಿತು. ಟ್ರ್ಯಾಕ್ಟರ್ ಈ ಹಳ್ಳಕೆ ಬಿದ್ದು ಚಾಲಕನ ಕೈ ಮೂಳೆ ಮುರಿತ ಅದ ಹಿನ್ನಲೆ ಗ್ರಾಮಸ್ಥರು ಕಳಪೆ ಕಾಮಗಾರಿ ಹಾಗೂ ಗುತ್ತಿಗೆದಾರನ ಬ್ಲಾಕ್ ಲಿಸ್ಟ್ ಗೆ ಸೇರಿಸಲು ಒತ್ತಾಯಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿ ಅಧಿಕಾರಿಗಳಿಗೆ ಹಿಡಿ ಶಾಪ ಹಾಕಿದ್ದರು. ಈ ಹಿನ್ನಲೆ ಕೂಡಲೇ ಸ್ಥಳಕ್ಕೆ ಎಇಇ ನಟರಾಜ್ ಹಾಗೂ ಜೆಇ ಲಿಂಗರಾಜ್ ಶೆಟ್ಟಿ ಹಳ್ಳವನ್ನು ಮುಚ್ಚಿ ಮೂರು ತಿಂಗಳಲ್ಲಿ ಓವರ್ ಹೆಡ್ ಟ್ಯಾಂಕ್ ಹಾಗೂ ಪೈಪ್ ಲೈನ್ ಪೂರ್ಣ ಗೊಳಿಸುವ ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎರಡು ದಿನದ ಕಂಬಳಕ್ಕಾಗಿ ಪರಿಸರ ಬಲಿ? ಕೆರೆಯ ಜಾಗ, ಮರಗಳ ತೆರವಿನ ಸುತ್ತ ಗಂಭೀರ ಪ್ರಶ್ನೆಗಳು!

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಂಬಳ ಆಯೋಜಿಸುವ ನಿರ್ಧಾರ ಈಗ ಕೇವಲ...

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ತುಮಕೂರು | ಸಚಿವ ಸೋಮಣ್ಣ ಭಾಷಣದ ವೇಳೆ ಚುನಾವಣಾ ಪ್ರಚಾರಕ್ಕೆ ಆಕ್ಷೇಪ; ಸಭೆಯಲ್ಲಿ ವಾಗ್ವಾದ

ತುಮಕೂರು ನಗರದ ಶ್ರೀ ಮುರುಘ ರಾಜೇಂದ್ರ ಸಭಾಂಗಣದಲ್ಲಿ ವೀರಶೈವ ಲಿಂಗಾಯತ  ಸಮಾಜದ...