ಈ ದಿನ.ಕಾಮ್ ಫಲಶೃತಿ | ವರದಿಗೆ ಎಚ್ಚೆತ್ತ ಮಂಡ್ಯ ನಗರಸಭೆ: ಸಾರ್ವಜನಿಕ ಶೌಚಾಲಯಕ್ಕೆ ಕಾಯಕಲ್ಪ

Date:

Advertisements

ಜಿಲ್ಲಾಧಿಕಾರಿ ಕಛೇರಿ ಪಕ್ಕದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ 25ಲಕ್ಷಕ್ಕೂ ಹೆಚ್ಚಿನ ವೆಚ್ಚದಲ್ಲಿ ನಿರ್ಮಾಣವಾದ ಸಾರ್ವಜನಿಕ ಶೌಚಾಲಯವು ಮುಚ್ಚಿ ವರ್ಷಗಳೇ ಕಳೆದಿದ್ದವು. ಅದರ ಪರಿಣಾಮ ದಿನನಿತ್ಯ ನಾಗರಿಕ ಜನರಿಗೆ ತುಂಬಾ ತೊಂದರೆ ಉಂಟಾಗುತ್ತಿತ್ತು.

ಟೆಂಡರ್ ಪಡೆದ ಗುತ್ತಿಗೆದಾರರ ನಿರ್ವಹಣೆಯ ಕೊರತೆಯಿಂದ ಪಾಲುಬಿದ್ದ ಶೌಚಾಲಯವು ಉಪಯೋಗಕ್ಕೆ ಬಾರದಿರುವುದನ್ನು ಕರ್ನಾಟಕ ಜನಶಕ್ತಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಸಿದ್ದರಾಜು ಈ ದಿನ.ಕಾಮ್ ಗಮನಕ್ಕೆ ತಂದಿದ್ದರು. ಈ ಹಿನ್ನೆಲೆಯಲ್ಲಿ ಸೆ.19ರಂದು ಈ ದಿನ.ಕಾಮ್ ಮಂಡ್ಯ | ನಗರಸಭೆಯ ನಿರ್ಲಕ್ಷ್ಯಕ್ಕೆ ಮುಚ್ಚಿದ ಶೌಚಾಲಯ; ಸಾರ್ವಜನಿಕರ ಪರದಾಟ‘ ಎಂಬ ಶೀರ್ಷಿಕೆಯಡಿಯಲ್ಲಿ ವರದಿ ಪ್ರಕಟಿಸಿತ್ತು.

ಈ ದಿನ.ಕಾಮ್ ವರದಿ ಮಾಡಿದ ನಂತರ ಎಚ್ಚೆತ್ತುಕೊಂಡ ನಗರಸಭೆಯ ಅಧಿಕಾರಿಗಳು, ಶೌಚಾಲಯಕ್ಕೆ ಬೇಕಾದ ಸೌಲಭ್ಯಗಳಾದ ವಿದ್ಯುತ್, ನೀರು, ನಲ್ಲಿಗಳು ಹಾಗೂ ಸ್ವಚ್ಛತೆಯು ಸೇರಿದಂತೆ ಕೊರೆತೆಗಳನೆಲ್ಲ ತುರ್ತಾಗಿ ಸರಿಪಡಿಸಿ ಸಾರ್ವಜನಿಕರಿಗೆ ಉಪಯೋಗವಾಗುವಂತೆ ದುರಸ್ತಿ‌ ಮಾಡಲು ಮುಂದಾಗಿದ್ದು, ಎಲ್ಲ ಕೆಲಸಗಳನ್ನು ಪ್ರಾರಂಭಿಸಿದ್ದಾರೆ.

Advertisements

ನಗರಸಭೆ ಪರಿಸರ ಕಾರ್ಯಪಾಲಕ ಅಭಿಯಂತರ ರುದ್ರೇಗೌಡ, ಆರೋಗ್ಯ ಅಧಿಕಾರಿ ಚೆಲುವರಾಜು ಮತ್ತು ಮೇಸ್ತ್ರಿ ರಾಜು ಹಾಗೂ ನಗರಸಭೆ ಪೌರಸೇವಕರ ಶ್ರಮದಿಂದ ಸಾರ್ವಜನಿಕರಿಗೆ ಶೌಚಾಲಯ ಕೊರತೆಗೆ ಇಂದು ಮುಕ್ತಿ ದೊರಕಿದೆ.

ಇದನ್ನು ಓದಿದ್ದೀರಾ? ಮಂಡ್ಯ | ಮಹಿಳೆಯರಿಗೆ ಸಮಾನತೆ ನೀಡಿದ ನಾಡುಗಳು ಮುಂಚೂಣಿಯಲ್ಲಿವೆ: ನ್ಯಾ. ಬಿ ಟಿ ವಿಶ್ವನಾಥ್‌

ಇನ್ನು ಮುಂದಾದರೂ ಸಾರ್ವಜನಿಕರಿಗೆ ಸಮಸ್ಯೆಯಾಗದೆ ಸದುಪಯೋಗವಾಗಲಿ ಎಂದು ಈ ದಿನ.ಕಾಮ್‌ನ ಆಶಯ. ವರದಿ ಮಾಡುವ ಮೂಲಕ ಅಧಿಕಾರಿಗಳ ಗಮನಕ್ಕೆ ತಂದದ್ದಕ್ಕೆ ಕರ್ನಾಟಕ ಜನಶಕ್ತಿ ಸಂಘಟನೆಯ ಸಿದ್ದರಾಜು ಧನ್ಯವಾದ ಸಲ್ಲಿಸಿದ್ದಾರೆ.

Untitled 24
ನಗರಕೆರೆ ಜಗದೀಶ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X