ಹುಬ್ಬಳ್ಳಿ | ‘ಈ ದಿನ’ ವರದಿಗೆ ಎಚ್ಚೆತ್ತ ಅಧಿಕಾರಿಗಳು: ರಸ್ತೆ ಗುಂಡಿಗಳಿಗೆ ಮಣ್ಣು ಹಾಕಿ ತಾತ್ಕಾಲಿಕ ಪರಿಹಾರ!

Date:

ಹುಬ್ಬಳ್ಳಿ ನಗರದ ಆರ್ ಎನ್ ಶೆಟ್ಟಿ ರಸ್ತೆಯಲ್ಲಿ ದೊಡ್ಡ ಗುಂಡಿಗಳು ಬಿದ್ದಿರುವ ಪರಿಣಾಮ ವಾಹನ ಸವಾರರಿಗೆ ಮತ್ತು ಶಾಲಾ ಮಕ್ಕಳಿಗೆ, ವೃದ್ಧರಿಗೆ ಓಡಾಡಲು ಬಹಳ ಸಮಸ್ಯೆ ಉಂಟಾಗಿತ್ತು. ಈ ಬಗ್ಗೆ ಆಗಸ್ಟ್ 29ರಂದು ‘ಗುಂಡಿಗಳಿಂದ ತುಂಬಿ ಹೋದ ಆರ್ ಎನ್ ಶೆಟ್ಟಿ ರಸ್ತೆ: ಜನಪ್ರತಿನಿಧಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ’ ಎಂಬ ಶೀರ್ಷಿಕೆಯಡಿಯಲ್ಲಿ ಈ ದಿನ.ಕಾಮ್ ವಿಡಿಯೋ ವರದಿ ಮಾಡಿತ್ತು.

- Advertisement -

ಈದಿನ.ಕಾಮ್ ವರದಿಯಿಂದ ಎಚ್ಚೆತ್ತುಕೊಂಡ ಮಹಾನಗರ ಪಾಲಿಕೆ ಅಧಿಕಾರಿಗಳು, ಅಪಘಾತದ ಕೂಪಗಳಂತಿದ್ದ ರಸ್ತೆ ಗುಂಡಿಗಳಿಗೆ ಮಣ್ಣು ಹಾಕಿಸಿ ತಾತ್ಕಾಲಿಕವಾಗಿ ರಸ್ತೆ ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಹುಬ್ಬಳ್ಳಿಯ ಸಿದ್ಧಾರೂಢ ಸ್ವಾಮಿ ಮಠಕ್ಕೆ ತಲುಪುವ ಆರ್ ಏನ್ ಶೆಟ್ಟಿ ರಸ್ತೆಯಲ್ಲಿ ಬೃಹತ್ ರಸ್ತೆ ಗುಂಡಿಗಳು ಬಿದ್ದಿದ್ದ ಪರಿಣಾಮ ಸಾರ್ವಜನಿಕರ ಸಂಚಾರಕ್ಕೆ ಬಹಳಷ್ಟು ಸಮಸ್ಯೆ ಉಂಟಾ ಮಾಡುತ್ತಿತ್ತು. ಹಲವು ಬಾರಿ ಸಂಬಂಧಪಟ್ಟ ಪಾಲಿಕೆ ಸದಸ್ಯರು, ಶಾಸಕರ ಗಮನಕ್ಕೆ ತಂದರೂ ಉಪಯೋಗವಾಗಿಲ್ಲ ಎಂದು ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಕುರಿತು ಈದಿನ ಆಗಸ್ಟ್ 29 ರಂದು ಪ್ರತ್ಯಕ್ಷ ವರದಿ ಮಾಡಿದ್ದು, ಅಧಿಕಾರಿಗಳ ಗಮನಸೆಳೆಯುವ ಕೆಲಸ ಮಾಡಿತ್ತು. ಈ ದಿನ ವರದಿಯ ಮರುದಿನವೇ ವರದಿಗೆ ಎಚ್ಚೆತ್ತುಕೊಂಡ ಅಧಿಕಾರಿಗಳು, ತೆರೆದುಕೊಂಡಿದ್ದ ಗುಂಡಿಗಳಿಗೆ ಮಣ್ಣು ಹಾಕಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಹೋರಾಟಗಾರ ರಾಜು ನಾಯಕವಾಡಿ ಈ ದಿನ.ಕಾಮ್ ಜೊತೆಗೆ ಮಾತನಾಡಿ, “ಈ ದಿನ.ಕಾಮ್‌ನ ಸುದ್ಧಿಯಿಂದ ಜನರಿಗೆ ಅನುಕೂಲ ಆಯಿತು, ನಿಮ್ಮ ವರದಿಯಿಂದ ಪಾಲಿಕೆ ಎಚ್ಚೆತ್ತುಕೊಂಡು ತಾತ್ಕಾಲಿಕವಾಗಿ ಸಮಸ್ಯೆ ಬಗೆಹರಿಸಿದೆ. ಆದರೆ ಸಂಪೂರ್ಣ ಉತ್ತಮ ರಸ್ತೆ ನಿರ್ಮಿಸಲು ಶ್ರಮಿಸಬೇಕು. ಮಳೆಗಾಲ ಮುಗಿದ ಕೂಡಲೇ ರಸ್ತೆ ಕಾಮಗಾರಿ ನಡೆಸಬೇಕು” ಎಂದು ಆಗ್ರಹಿಸಿದರು.

IMG 20240805 WA0207
ಶರಣಪ್ಪ ಗೊಲ್ಲರ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...