ಈ ದಿನ ಫಲಶೃತಿ | ಪಡಿತರ ಗೋದಾಮಿಗೆ ಗಜೇಂದ್ರಗಡ ಅಧಿಕಾರಿಗಳ ಭೇಟಿ; ಆಹಾರ ನಿಯಮ ಪಾಲನೆಗೆ ಸೂಚನೆ

Date:

ಹಾಳಕೆರೆ ಗ್ರಾಮದಲ್ಲಿ ಪಡಿತರ ಅಕ್ಕಿ ವಿತರಣೆ ಮಾಡುವ ಸಂಘದವರು ಒಂದೇ ಗೋದಾಮಿನಲ್ಲಿ ಪಡಿತರ ಅಕ್ಕಿ ಹಾಗೂ ಬೀಜ-ಗೊಬ್ಬರಗಳನ್ನು ಸಂಗ್ರಹ ಮಾಡಿ ಇಟ್ಟಿದ್ದಾರೆಂದು ಆರೋಪ ವ್ಯಕ್ತವಾಗಿದೆ. ಆಹಾರ ನಿಯಮ ಪಾಲನೆ ಮಾಡಿಕೊಂಡು ಆರೋಗ್ಯ ಮತ್ತು ಸ್ವಚ್ಚತೆಗೆ ಆದ್ಯತೆ ನೀಡಿ ಜನರಿಗೆ ತೊಂದರೆಯಾಗದಂತೆ ಪಡಿತರ ಅಕ್ಕಿ, ಕಾಳುಕಡ್ಡಿ ಸಂಗ್ರಹ ಮಾಡಬೇಕು ಹಾಗೂ ಸಮಯಕ್ಕೆ ಸರಿಯಾಗಿ ವಿತರಣೆ ಮಾಡಬೇಕು ಎಂದು ಗಜೇಂದ್ರಗಡ ತಾಲೂಕು ಆಹಾರ ಸರಬರಾಜು ಅಧಿಕಾರಿ ಉಮೇಶ್ ಅರಳಿಗಿಡದ ತಿಳಿಸಿದರು.

- Advertisement -

ಈ ದಿನ.ಕಾಮ್‌ ಅಕ್ಟೋಬರ್‌ 17ರಂದು ಗದಗ | ಒಂದೇ ಗೋದಾಮಿನಲ್ಲಿ ಪಡಿತರ ಅಕ್ಕಿ, ರಸಗೊಬ್ಬರ, ಕ್ರಿಮಿನಾಶಕ, ಸಿಮೆಂಟ್ ದಾಸ್ತಾನು: ಆತಂಕದಲ್ಲಿ ಗ್ರಾಮಸ್ಥರು ಎಂಬ ಶೀರ್ಷಿಕೆಯಲ್ಲಿ ವಿಶೇಷ ವರದಿ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಘಟನೆ ಕುರಿತು ಈ ದಿನ.ಕಾಮ್‌ ವರದಿ ಪ್ರಕಟ ಮಾಡಿದೆ. ಸಾರ್ವಜನಿಕರ ಹಿತ ಕಾಯುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹಾಗಾಗಿ ಉಣ್ಣುವ ಪಡಿತರ ಅಕ್ಕಿಗಳನ್ನು ಕ್ರಿಮಿನಾಶಕ, ಬೀಜ ಗೊಬ್ಬರದ ಜೊತೆಯಲ್ಲಿ ಇಡಬಾರದು. ಕಟ್ಟಡ ನಿರ್ಮಾಣವಾಗುವವರೆಗೂ ಪ್ರತ್ಯೇಕ ವ್ಯವಸ್ಥೆ ಮಾಡಿಕೊಂಡು ಸಂಗ್ರಹ ಮತ್ತು ಸಂರಕ್ಷಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುಬೇಕು” ಎಂದು ಆಹಾರ ಸರಬರಾಜು ಅಧಿಕಾರಿ ಪಡಿತರ ವಿತರಣೆ ಮಾಡುವವರಿಗೆ ತಿಳಿಸಿದರು.

ಹಾಲಕೆರೆ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎ ಸಿ ಪಾಟೀಲ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಹಳೆಯದಾಗಿರುವ ಘಟಕವನ್ನು ನೆಲಸಮಗೊಳಿಸಿ ಅಭಿವೃದ್ಧಿಪಡಿಸುವಂತೆ ರೋಣ ಶಾಸಕ ಜಿ ಎಸ್ ಪಾಟೀಲರು ₹20 ಲಕ್ಷ ಮಂಜೂರು ಮಾಡಿದ್ದಾರೆ. ಈಗಾಗಲೆ ಹೊಸ ಕಟ್ಟಡ ಕಾಮಗಾರಿ ನಡೆದಿದೆ. ಆದಕಾರಣ ಒಂದೇ ಘಟಕದಲ್ಲಿ ಅಕ್ಕಿ ಮತ್ತು ಗೊಬ್ಬರ ಸಂಗ್ರಹವಾಗಿರುತ್ತದೆ. ಆಹಾರ ಇಲಾಖೆಯ ನಿಯಮಗಳನ್ನು ಉಲ್ಲಂಘನೆ ಮಾಡದೆ ಜನರಿಗೆ ತೊಂದರೆಯಾಗದಂತೆ ಜಾಗೃತಿ ವಹಿಸಿ ಅಕ್ಕಿ ವಿತರಣೆ ಮಾಡುತ್ತಿದ್ದೇವೆ. ಮುಂದೆಯೂ ಮಾಡುತ್ತೇವೆ. ಇನ್ನೆರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ಪಡಿತರ ಅಕ್ಕಿ ಹಾಗೂ ಬೀಜಗೊಬ್ಬರದ ಸಂಗ್ರಹಣೆ, ವಿತರಣೆ ಪ್ರತ್ಯೇಕಿಸಲಾಗುತ್ತದೆ” ಎಂದರು.

ಘಟನೆ ಹಿನ್ನೆಲೆ

ಗದಗ ಜಿಲ್ಲೆಯ ರೋಣ ತಾಲೂಕಿನ ಹಾಳಕೇರಿ ಗ್ರಾಮದಲ್ಲಿ ಬಡವರಿಗೆ ಉತ್ತಮ ಗುಣಮಟ್ಟದ ಆಹಾರ ಕೊಡುವ ಉದ್ದೇಶದಿಂದ ಸರ್ಕಾರ ಪಡಿತರ ಕಾರ್ಡ್ ವ್ಯವಸ್ಥೆ ಮಾಡಿ, ನ್ಯಾಯ ಬೆಲೆ ಅಂಗಡಿ ಮೂಲಕ ಬಡವರಿಗೆ‌ ಉಚಿತ ಪಡಿತರ ನೀಎಉತ್ತದೆ. ಆದರೆ ಇಲ್ಲೊಂದು ನ್ಯಾಯಬೆಲೆಯ ಅಂಗಡಿಯಲ್ಲಿ ಪಡಿತರ ಅಕ್ಕಿಯ ಜೊತೆಗೆ ಗೊಬ್ಬರ, ಕ್ರಿಮಿನಾಶಕದಂತಹ ಎಣ್ಣೆ ಔಷಧಿ, ರಸಗೊಬ್ಬರ ಶೇಖರಣೆ ಮಾಡಿ, ಜನರಿಗೆ ಪಡಿತರ ಹಂಚುತ್ತಾರೆ. ಜನರ ಜೀವದ ಜತೆಗೆ ಚೆಲ್ಲಾಟ ಆಡುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗುಡುಗು-ಸಿಡಿಲು ಸಹಿತ ಮಳೆ : ತುಮಕೂರು ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ : ಜಿಲ್ಲಾಧಿಕಾರಿ

ಸರ್ಕಾರದ ನಿಯಮದ ಪ್ರಕಾರ ಸೊಸೈಟಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಜಮೀನುದಾರರಿಗೆ, ಸಂಬಂಧಿಸಿದ ದಾಖಲೆಗಳು ಇದ್ದರೆ ಅವರಿಗೆ ಬೀಜ ಗೊಬ್ಬರ ಕೊಡಬೇಕು. ಆದರೆ ಇವರಿಗೆ ಸಿಗುವುದಿಲ್ಲ. ಈ ನಿಯಮ ಕಡೆಗಣಿಸಿ ಯಾರು ದುಡ್ಡು ಕೊಡುತ್ತಾರೋ, ಅವರಿಗೆ ಬೀಜ ಗೊಬ್ಬರ ಕೊಡುತ್ತಾರೆ. ಇಲ್ಲಿರುವ ಡಿ ದರ್ಜೆ ಕೆಲಸಗಾರ ಕೂಡ ಸಾರ್ವಜನಿಕರೊಂದಿಗೆ ಬೇಜವಾಬ್ದಾರಿಯಿಂದ ವರ್ತಿಸುತ್ತಾನೆಂದು ಅಲ್ಲಿಯ ಜನರು ಹೇಳುತ್ತಾರೆ ಎಂದು ಈ ದಿನ.ಕಾಮ್‌ ಸ್ಥಳೀಯ ಸಮಸ್ಯೆ ಕುರಿತು ವರದಿ ಪ್ರಕಟಿಸಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

SHARANAPPA H SANGANALA
ಶರಣಪ್ಪ ಎಚ್ ಸಂಗನಾಳ
+ posts

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ ಶಾಪವೇ?‌ – ಭಾಗ 2

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...