ಈ ದಿನ ಇಂಪ್ಯಾಕ್ಟ್ | ಮೇಲನಹಳ್ಳಿ ಕಾಲೋನಿ ಸಮಸ್ಯೆಗೆ ಸ್ಪಂದಿಸಿದ ಸಮಾಜ ಕಲ್ಯಾಣ ಇಲಾಖೆ; ನಿವೇಶನ ಹಂಚಿಕೆ ಭರವಸೆ

Date:

ಮೇಲನಹಳ್ಳಿ ಕಾಲೋನಿಯಲ್ಲಿ ಜನರು ಗುಡಿಸಲು ನಿರ್ಮಿಸಿಕೊಂಡಿದ್ದ ಆ ಜಾಗವನ್ನು ಗ್ರಾಮಸ್ಥರಿಗೆ ಸರ್ವೇ ಮಾಡಿ ಕೊಡುವಂತೆ ಎಸಿ ಮುಖಾಂತರ ಡಿಸಿ ಅವರಿಗೆ ಮಾಹಿತಿ ಕಳಿಸಿಕೊಟ್ಟಿದ್ದು, ಯಾರಿಗೆ ನಿವೇಶನ ಇಲ್ಲ ಅಂಥವರಿಗೆ ಒಂದು ತಿಂಗಳಲ್ಲಿ ನಿವೇಶನ ಹಂಚಿಕೆ ಮಾಡಲಾಗುತ್ತದೆ ಎಂದು ತಹಶೀಲ್ದಾರ್ ಭರವಸೆ ನೀಡಿದ್ದಾರೆ.

- Advertisement -

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೇಲನಹಳ್ಳಿ ಕಾಲೋನಿಯ ಗ್ರಾಮಸ್ಥರು ನಿರ್ಮಿಸಿದ್ದ ಗುಡಿಸಲನ್ನು ತೆರವುಗೊಳಿಸಿದ್ದ ಜಾಗಕ್ಕೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರ್‌ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ, ನಿವೇಶನ ಹಂಚಿಕೆಗೆ ಉಪ ನಿರ್ದೇಶಕರ ಕಚೇರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...
Screenshot 2024 12 06 20 20 20 26 7352322957d4404136654ef4adb64504

ಮೇಲನಹಳ್ಳಿ ಕಾಲೋನಿಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಸುಮಾರು 80 ಕುಟುಂಬದ ಮೂಲ ನಿವಾಸಿಗಳು ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿದ್ದರು. ಇವು ಅನಧಿಕೃತ ಗುಡಿಸಿಲುಗಳೆಂಬ ದೂರು ಆಧರಿಸಿ ತಹಶೀಲ್ದಾರ್ ನೇತೃತ್ವದಲ್ಲಿ ಪೊಲೀಸರ ನೆರವಿನೊಂದಿಗೆ ಕಂದಾಯ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿ ಗುಡಿಸಲುಗಳನ್ನು ನಾಶಗೊಳಿಸಿದ್ದರು.

ಗುಡಿಸಲುಗಳನ್ನು ನಾಶಗೊಳಿಸಿದ ಹಿನ್ನೆಲೆಯಲ್ಲಿ ʼಚಿಕ್ಕಮಗಳೂರು | ಪ್ರಾಣ ಬಿಟ್ಟೇವು, ಭೂಮಿ ಬಿಡಲ್ಲ: ದಲಿತ ನಿವಾಸಿಗಳ ಅಳಲುʼ ಎಂಬ ಶೀರ್ಷಿಕೆಯಡಿ ಈ ದಿನ.ಕಾಮ್‌ ನವೆಂಬರ್‌ 19ರಂದು ವರದಿ ಪ್ರಕಟಿಸಿತ್ತು. ಈ ಹಿನ್ನೆಲೆಯಲ್ಲಿ ಕಡೂರು ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ನವೆಂಬರ್ 21ರಂದು‌ ಮೇಲನಹಳ್ಳಿ ಕಾಲೋನಿಯ ಗ್ರಾಮಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದ್ದಾರೆ.

ಘಟನೆ ಹಿನ್ನೆಲೆ

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೇಲನಹಳ್ಳಿ ಕಾಲೋನಿಯ ಸರ್ವೇ ನಂ.22ರಲ್ಲಿ 20 ಎಕ್ಕರೆ 16 ಗುಂಟೆ ಸರ್ಕಾರದ ಬೀಳು ಬಿದ್ಧ ಜಾಗದಲ್ಲಿ ವಸತಿರಹಿತ 58 ಕುಟುಂಬಸ್ಥರು 5 ಎಕರೆಗೆ ಸೀಮಿತವಾಗಿ ಗುಡಿಸಲು ನಿರ್ಮಿಸಿಕೊಂಡು ಒಂದು ವರ್ಷದಿಂದ ಬದುಕು ನಡೆಸುತ್ತಿದ್ದರು. ಇವು ಅನಧಿಕೃತ ಗುಡಿಸಿಲುಗಳೆಂದು ಬಂದ ದೂರು ಆಧರಿಸಿ ತಹಶೀಲ್ದಾರ್ ನೇತೃತ್ವದಲ್ಲಿ ಪೊಲೀಸರ ನೆರವಿನೊಂದಿಗೆ ಕಂದಾಯ ಅಧಿಕಾರಿಗಳು ತೆರವುಗೊಳಿಸಿದ್ದರು.

Screenshot 2024 12 06 20 19 44 12 7352322957d4404136654ef4adb64504

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ದಲಿತರ ಗುಡಿಸಲನ್ನು ನೆಲಸಮ ಮಾಡಿದ ತಾಲೂಕು ಅಧಿಕಾರಿಗಳು

“ಈ ಜಾಗದಲ್ಲಿ ಬೇರೆ ಬೇರೆ ತಾಲೂಕಿನಿಂದ ಜನರು ಬಂದು ಬೆಳೆ ಹಾಗೂ ತೋಟ ಮಾಡಿಕೊಂಡಿದ್ದಾರೆ. ನಾವು ಅಂಗೈಯಷ್ಟು ಜಾಗದಲ್ಲಿ ತಮಗೆ ಬದುಕು ಕಟ್ಟಿಕೊಳ್ಳಲು ಗುಡಿಸಲು ನಿರ್ಮಾಣ ಮಾಡಿಕೊಂಡಿರುವುದನ್ನು ದ್ವಂಸಗೊಳಿಸಿದರು. ನಾವು ಕೂಲಿ ಮಾಡಿ ಹೊಟ್ಟೆಬಟ್ಟೆ ಕಟ್ಟಿ ಮಕ್ಕಳನ್ನು ಸಾಕುತ್ತ ಜೀವನ ನಡೆಸುತ್ತಿದ್ದೇವೆ. ನಮ್ಮ ಕಷ್ಟ ಮುಗಿಲು ಮುಟ್ಟಿದೆ. ಒಂದು ಚಿಕ್ಕ ಮನೆಯಲ್ಲಿ 3ರಿಂದ 4 ಕುಟುಂಬದವರು ವಾಸ ಮಾಡುತ್ತಿದ್ದೀವಿ. ನಾವು ಗುಡಿಸಲು ನಿರ್ಮಿಸಿಕೊಂಡು ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದೆವು. ನಾವೆಲ್ಲ ಕೂಲಿ ಕೆಲಸಕ್ಕೆ ಹೋಗಿರುವ ಸಮಯದಲ್ಲಿ ಅಧಿಕಾರಿಗಳು ಜೆಸಿಬಿಯಿಂದ ಗುಡಿಸಲು ಕೆಡವಿದ್ದಾರೆ. ಗುಡಿಸಲಲ್ಲಿದ್ದ ಆಹಾರ ಪದಾರ್ಥಗಳು, ಅಡುಗೆ ಪಾತ್ರೆಗಳು, ಹಾಸಿಗೆ ಹಾಗೂ ನಮ್ಮ ವಸ್ತುಗಳ ಸಮೇತ ಗುಡಿಸಲುಗಳನ್ನು ನಾಶಪಡಿಸಿದ್ದಾರೆ” ಎಂದು ಈ ದಿನ.ಕಾಮ್ ಸ್ಥಳಕ್ಕೆ ಭೇಟಿ ನೀಡಿದಾಗ ಮೇಲನಹಳ್ಳಿ ಗ್ರಾಮಸ್ಥರು ತಮ್ಮ ನೋವನ್ನು ಹೇಳಿಕೊಂಡಿದ್ದರು.

WhatsApp Image 2024 10 24 at 12.02.30
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...