ಶಿವಮೊಗ್ಗ | ‘ಈ ದಿನ’ ವರದಿಗೆ ಎಚ್ಚೆತ್ತ ಅಧಿಕಾರಿಗಳು: ಬೀಳುವ ಹಂತಕ್ಕೆ ತಲುಪಿದ್ದ ಬೃಹತ್ ಮರಕ್ಕೆ ಮುಕ್ತಿ

Date:

Advertisements

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಿಂದ ಶಿಕಾರಿಪುರ ರಾಷ್ಟ್ರೀಯ ಹೆದ್ದಾರಿಯ ಕಣ್ಣೂರು ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲಿ ಒಂದು ಬೃಹತ್ತಾದ ಒಣಗಿದ ಮರ ಬೀಳುವ ಹಂತಕ್ಕೆ ತಲುಪಿತ್ತು. ಅಪಾಯದ ಸ್ಥಿತಿಯಲ್ಲಿರುವ ಮರವನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದರ ಬಗ್ಗೆ ಈ ದಿನ.ಕಾಮ್ ವರದಿ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಮರವನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ.

ಅ.24ರಂದು ‘ಶಿವಮೊಗ್ಗ | ಬೀಳುವ ಹಂತಕ್ಕೆ ತಲುಪಿದ ಒಣಗಿರುವ ಬೃಹತ್ ಮರ: ತೆರವಿಗೆ ಸಾರ್ವಜನಿಕರ ಆಗ್ರಹ’ ಎಂಬ ಶೀರ್ಷಿಕೆಯಡಿಯಲ್ಲಿ ವರದಿ ಪ್ರಕಟಿಸಲಾಗಿತ್ತು. ಸುದ್ದಿಯನ್ನು ಗಮನಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು, ಕಣ್ಣೂರು ಗ್ರಾಮದ ರಸ್ತೆಯ ಪಕ್ಕದಲ್ಲಿದ್ದ ಒಣಗಿದ ಮರಕ್ಕೆ ಮುಕ್ತಿ ನೀಡಿದ್ದಾರೆ.

WhatsApp Image 2024 10 29 at 3.55.03 PM

ವಿದ್ಯುತ್ ಕಂಬಗಳು ಸಹ ಮರದ ಅಕ್ಕಪಕ್ಕದಲ್ಲಿದೆ ಹಾಗೂ ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವಾರು ವಾಹನಗಳು ದಿನನಿತ್ಯ ಸಂಚರಿಸುತ್ತವೆ. ಶಾಲಾ-ಕಾಲೇಜುಗಳಿಗೆ ಮಕ್ಕಳು ನಡೆದುಕೊಂಡು ಹೋಗುತ್ತಿರುತ್ತಾರೆ. ಒಂದು ವೇಳೆ ದಿಡೀರನೆ ಈ ಬೃಹತ್ ಮರ ಬಿದ್ದರೆ ಬಹಳ ಅನಾಹುತಗಳು ಸಂಭವಿಸಬಹುದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದರು.

Advertisements

ಇದಕ್ಕೆ ಸ್ಪಂದಿಸಿದ ಅರಣ್ಯಾಧಿಕಾರಿಗಳಾದ ಚಂದ್ರಶೇಖರ್ ಅವರು, ಕೆಇಬಿ ಅಧಿಕಾರಿಗಳ ಸಹಕಾರದೊಂದಿಗೆ ಇಂದು ಮರವನ್ನು ತೆರವುಗೊಳಿಸಿದ್ದಾರೆ ಎಂದು ಆನಂದಪುರಂ ಸ್ಥಳೀಯರಾದ ಅಮಿತ್ ಆರ್. ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದು, ವರದಿ ಮಾಡುವ ಮೂಲಕ ಅಧಿಕಾರಿಗಳ ಗಮನಕ್ಕೆ ತಂದಿದ್ದಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.

333 5
shimoga
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X