ಆಳಂದ | ಈ ದಿನ ಫಲಶೃತಿ: ಸರ್ಕಾರಿ ಶಾಲೆಯ ಕೊಠಡಿ ನಿರ್ಮಾಣಕ್ಕೆ ₹1.80 ಕೋಟಿ ಅನುದಾನ ಬಿಡುಗಡೆ

Date:

ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗಳು ಒಂದೇ ಆವರಣದಲ್ಲಿದ್ದವು. ಈ ಎರಡೂ ಶಾಲೆಗಳಿಗೆ ಒಂದೇ ಅಡುಗೆ ಕೋಣೆಯಿದ್ದು, ಅದೂ ಕೂಡ ಶಿಥಿಲಗೊಂಡಿತ್ತು. ಶಾಲೆಯ ಅವ್ಯವಸ್ಥೆಯ ಬಗ್ಗೆ ಕಳೆದ ಡಿಸೆಂಬರ್ 25, 2023ರಂದು ಈದಿನ.ಕಾಮ್ ವರದಿ ಮಾಡಿತ್ತು.

- Advertisement -

ಜೊತೆಗೆ ನಿರಂತರವಾಗಿ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ, ಫಾಲೋಅಪ್ ಮಾಡಿರುವುದರಿಂದ ಶಾಲೆಯ ನವೀಕರಣಕ್ಕೆ ಸರ್ಕಾರವು 1.80 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಬೀಳುವ ಹಂತದಲ್ಲಿರುವ ಹಳೆ ಕಟ್ಟಡಗಳನ್ನು ಕೆಡವಿ ಹೊಸ ಕಟ್ಟಡ ನಿರ್ಮಾಣದ ಕಾಮಗಾರಿಯನ್ನು ಈಗಾಗಲೇ ಆರಂಭಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಆಳಂದ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಅಡುಗೆ ಕೋಣೆಯ ಬಾಗಿಲುಗಳು ಕೂಡ ಮುರಿದಿದ್ದವು. ಪರಿಣಾಮ, ತರಗತಿ ನಡೆಯುವ ಕೊಠಡಿಯಲ್ಲಿಯೇ ಅಡುಗೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೊಸ ಅಡುಗೆ ಕೋಣೆ ನಿರ್ಮಿಸಿಕೊಡಬೇಕೆಂದು ಶಾಲೆಯ ಅಡುಗೆ ಸಿಬ್ಬಂದಿ ಕೂಡ ಬೇಡಿಕೆ ಇಟ್ಟಿದ್ದರು.

“ಶಾಲೆಯಲ್ಲಿ ಮೊದಲೇ ತರಗತಿಗಳಿಗೆ ಅಗತ್ಯವಿರುವಷ್ಟು ಕೊಠಡಿಗಳು ಇಲ್ಲ. ಅಡುಗೆ ಕೋಣೆ ಶಿಥಿಲಗೊಂಡಿದೆ. ಕಟ್ಟಡದ ಗೋಡೆಗಳು ಬಿರುಕು ಬಿಟ್ಟಿದ್ದು, ಯಾವಾಗ ಬೇಕಿದ್ದರೂ ಬೀಳುವ ಆತಂಕವಿದೆ. ಅದನ್ನು ಕೆಡವಿ, ಹೊಸ ಕಟ್ಟಡ ನಿರ್ಮಾಣ ಮಾಡಬೇಕು. ಆದರೆ, ಹಳೆಯ ಕಟ್ಟಡದಲ್ಲಿಯೇ ಮಕ್ಕಳಿಗೆ ಬಿಸಿಯೂಟ ನೀಡಲಾಗುತ್ತಿದೆ” ಎಂದು ಸ್ಥಳೀಯರು ಮಾಹಿತಿ ನೀಡಿದ್ದರು.

“ಕೆಲವು ಕೊಠಡಿಗಳು ಕೂಡ ತರಗತಿ ನಡೆಸಲು ಯೋಗ್ಯವಾಗಿಲ್ಲ. ಸರ್ಕಾರ ಕಟ್ಟಡಗಳ ದುರಸ್ತಿ, ನವೀಕರಣ ಹಾಗೂ ಪ್ರಗತಿಗೆ ಅಗತ್ಯವಾಗಿ ಹೆಚ್ಚಿನ ಒತ್ತು ನೀಡಬೇಕು” ಎಂದು ಆಗ್ರಹಿಸಿದ್ದರು.

“ಶಾಲಾ ಪ್ರಗತಿ, ನಿರ್ವಹಣೆಗೆ ಗ್ರಾಮ ಪಂಚಾಯತಿ ಆಡಳಿತದ ಹೊಂದಾಣಿಕೆಯೊಂದಿಗೆ ಮಕ್ಕಳ ಪೋಷಕರ ಎಸ್‌ಡಿಎಂಸಿ ಸಮಿತಿ ರಚಿಸಿದ್ದರೂ ಶಾಲೆಗಳು ಸಮಸ್ಯೆಯಿಂದ ಬಿಡುಗಡೆಗೊಂಡಿಲ್ಲ. ಅನೇಕ ಶಾಲಾ ಕಟ್ಟಡಗಳು ಸೋರುತ್ತಿವೆ. ಗೋಡೆ ಮೇಲೆ ಮಳೆ ನೀರು ಇಳಿದು ಅಪಾಯದ ಸ್ಥಿತಿಗೆ ತಲುಪಿವೆ ಎಂದು ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ಈ ದಿನ.ಕಾಮ್ ಶಾಲೆಯ ಪರಿಸ್ಥಿತಿಯ ಬಗ್ಗೆ ವರದಿ ಮಾಡಿ ಅಧಿಕಾರಿಗಳ ಗಮನಕ್ಕೆ ತಂದಿತ್ತು. ಈಗ ಶಾಲೆಯ ಹಳೆ ಕೋಣೆಗಳನ್ನು ಕೆಡವಿ ಹೊಸ ಕೋಣೆಗಳ ನಿರ್ಮಾಣಕ್ಕೆ ಒಂದು ಕೋಟಿ 80 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಎರಡು ಅಂತಸ್ತಿನ ನೂತನ ಕಟ್ಟಡ ಕಾಮಗಾರಿಗೆ ಚಾಲನೆ ನೀಡಲಾಗಿದೆ.

ಇದನ್ನು ಓದಿದ್ದೀರಾ? ಬಾಗಲಕೋಟೆ | ದೇವಸ್ಥಾನದ ಕಾರ್ಯಕ್ರಮದಲ್ಲಿ ‘ವಕ್ಫ್‌’ ವಿಚಾರ: ಶಾಸಕ ಯತ್ನಾಳ್‌ಗೆ ಸಾರ್ವಜನಿಕರಿಂದ ಛೀಮಾರಿ

ಈ ಬಗ್ಗೆ ಈ ದಿನ.ಕಾಮ್‌ನೊಂದಿಗೆ ಮಾತನಾಡಿದ ಜೂನಿಯರ್ ಇಂಜಿನಿಯರ್ ಪ್ರದೀಪ್ ಪಾಟೀಲ, “ಮೊದಲ ಅಂತಸ್ತಿನಲ್ಲಿ ಆರು ಹಾಗೂ ಕೆಳಗಿನ ಅಂತಸ್ತಿನಲ್ಲಿಯೂ ಆರು ಕೋಣೆಗಳು ನಿರ್ಮಾಣ ಮಾಡುತ್ತಿದ್ದೇವೆ. ಆದಷ್ಟು ಶೀಘ್ರವೇ ಕಾಮಗಾರಿ ಮುಗಿಸಲಿದ್ದೇವೆ” ಎಂದು ತಿಳಿಸಿದ್ದಾರೆ.

ಶಾಲೆಯ ಪರಿಸ್ಥಿತಿಯ ಬಗ್ಗೆ ವರದಿ ಮಾಡಿದ್ದಕ್ಕೆ ಈ ದಿನ.ಕಾಮ್‌ಗೆ ಪೋಷಕರು ಹಾಗೂ ವಿದ್ಯಾರ್ಥಿಗಳು ಧನ್ಯವಾದ ಸಲ್ಲಿಸಿದ್ದಾರೆ.

WhatsApp Image 2026 05 02 at 12.01.27 e1777704270988
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...