ಬೀದರ್‌ | ಈದಿನ ವರದಿ ಫಲಶೃತಿ : ತೊಗರಿ ಖರೀದಿಗೆ ನೋಂದಣಿ ಪ್ರಕ್ರಿಯೆ ಪ್ರಾರಂಭ

Date:

ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ತೊಗರಿ ಕಾಳು ಖರೀದಿಗಾಗಿ ಬೀದರ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯಿಂದ ಜಿಲ್ಲೆಯಲ್ಲಿ ಒಟ್ಟು 70 ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಬೀದರ ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

- Advertisement -

‘ಈ ತೊಗರಿ ಖರೀದಿ ಕೇಂದ್ರಗಳು ನಾಫೆಡ್ ಸಂಸ್ಥೆಯಿಂದ ಲಾಗಿನ್ ಕ್ರೆಡೆನ್ಸಿಯಲ್ಸ್ ಪಡೆದಿದ್ದು, ತೊಗರಿ ಖರೀದಿಗಾಗಿ ನೋಂದಣಿ ಪ್ರಕ್ರಿಯೆಗೆ ಸರ್ವಸನ್ನದ್ದರಾಗಿದ್ದಾರೆ. ನೋಂದಣಿ ಪ್ರಕ್ರಿಯೆಯು ಜ.24ರಿಂದ ಪ್ರಾರಂಭವಾಗಲಿದೆ’ ಎಂದು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ತೊಗರಿ ಬೆಳೆದ ರೈತರು ಎಫ್‌ಎಕ್ಯೂ ಗುಣಮಟ್ಟದ ತೊಗರಿ ಪ್ರತಿ ಕ್ವಿಂಟಾಲ್‌ಗೆ ₹7,550 ದರದಂತೆ ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಾಲ್‌ನಂತೆ ಹಾಗೂ ಪ್ರತಿ ರೈತರಿಂದ ಗರಿಷ್ಠ 40 ಕ್ವಿಂಟಾಲ್‌ಗಳಂತೆ ತೊಗರಿ ಕಾಳನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದೆ ಎಂದಿದ್ದಾರೆ.

ʼರೈತರು ತಮ್ಮ ಸಮೀಪದ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡು ಈ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಬೇಕುʼ ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಟಾಸ್ಕ್‌ ಫೋರ್ಸ್‌ ಸಮತಿ ಸದಸ್ಯ ಕಾರ್ಯದರ್ಶಿಗಳು ಕೋರಿದ್ದಾರೆ.

ಈ ಕುರಿತು ಜ.22ರಂದು ಈದಿನ.ಕಾಮ್‌ ಬೀದರ್‌ | ತೊಗರಿ ಬೆಲೆ ಕುಸಿತದಿಂದ ರೈತರು ಕಂಗಾಲು : ಸ್ಪಂದಿಸುವುದೇ ಸರ್ಕಾರ? ಎಂಬ ಶೀರ್ಷಿಕೆಯಡಿ ವಿಸ್ತೃತ ವರದಿ ಪ್ರಕಟಿಸಿತ್ತು. ವರದಿಗೆ ಸ್ಪಂದಿಸಿದ ಅಧಿಕಾರಿಗಳು ಜಿಲ್ಲೆಯಲ್ಲಿ ತೊಗರಿ ಖರೀದಿಗೆ ನೋಂದಣಿ ಪ್ರಕ್ರಿಯೆ ಆರಂಭಕ್ಕೆ ಮುಂದಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಬೀದರ್‌ ಜಿಲ್ಲಾದ್ಯಂತ ಮತದಾರರ ಹೆಸರು ತೆಗೆಸಲು 6,101 ಫಾರಂ-7 ಅರ್ಜಿ ಸಲ್ಲಿಕೆ!

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮುಂದುವರಿದಿದ್ದು,...

ಬೀದರ್‌ | ಭಾರತ ಸ್ವಾಭಿಮಾನ ಟ್ರಸ್ಟ್ ಜಿಲ್ಲಾಧ್ಯಕ್ಷರಾಗಿ ಗೋರಖನಾಥ್ ಕುಂಬಾರ್ ಆಯ್ಕೆ

ಭಾರತ ಸ್ವಾಭಿಮಾನ ಟ್ರಸ್ಟ್ (ಪತಂಜಲಿ ಯೋಗ ಸಮಿತಿ) ಬೀದರ್ ಜಿಲ್ಲಾಧ್ಯಕ್ಷರಾಗಿ ಯೋಗ...

ಭಾಲ್ಕಿ | ಚನ್ನಬಸವೇಶ್ವರ ಗುರುಕುಲದಲ್ಲಿ 72ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮ

ವನ್ಯಜೀವಿಗಳ ಸಂರಕ್ಷಣೆ ಕೇವಲ ಸರ್ಕಾರ ಅಥವಾ ಅರಣ್ಯ ಇಲಾಖೆಯ ಜವಾಬ್ದಾರಿಯಲ್ಲ. ಅದು...

ರಾಯಚೂರು | ರೈತರ ಹೊಲಗಳಿಗೆ ಸರ್ವಿಸ್ ರಸ್ತೆ ನಿರ್ಮಿಸದಿದ್ದರೆ ಹೆದ್ದಾರಿ ಕಾಮಗಾರಿ ಬಂದ್: ಅಮರೇಗೌಡ ಪಾಟೀಲ ಬಯ್ಯಾಪುರ

ರಾಷ್ಟ್ರೀಯ ಹೆದ್ದಾರಿ(748 ಎ) ನಿರ್ಮಾಣದಿಂದ ರೈತರಿಗೆ ತಮ್ಮ ಹೊಲಗಳಿಗೆ ತೆರಳಲು ಸರ್ವಿಸ್...