ಈದಿನ ವರದಿ ಫಲಶೃತಿ: ಹಾಗಲಗಂಚಿ ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶೃಂಗೇರಿ ಶಾಸಕ

Date:

Advertisements

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಅಗಲಗಂಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾಗಲಗಂಚಿ ಗ್ರಾಮಸ್ಥರ ಮನವಿ ಕೊನೆಗೂ ಶಾಸಕರ ಕಿವಿಗೆ ಬಿದ್ದಿದೆ.

ಹಾಗಲಗಂಚಿ ಗ್ರಾಮದಲ್ಲಿ ಸುಮಾರು 70ಕ್ಕೂ ಅಧಿಕ ಕುಟುಂಬಗಳು ವಾಸ ಮಾಡುತ್ತಿವೆ. ಸುತ್ತಲಿನ ಎಂಟರಿಂದ ಹತ್ತು ಗ್ರಾಮಗಳ ಜನರು ಹಾಗಲಗಂಚಿ ಗ್ರಾಮದ ಮಾರ್ಗವಾಗಿಯೇ ಸಾಗಬೇಕು. ಹಾಗೆಯೇ ಶೃಂಗೇರಿ ಮತ್ತು ಕೊಪ್ಪ ತಾಲೂಕಿಗೆ ಹಾದು ಹೋಗುವ ಸಂಪರ್ಕ ರಸ್ತೆ ಕೂಡ ಇದೇ ಆಗಿದೆ. ಪ್ರತಿನಿತ್ಯ ಸಾವಿರಾರು ಮಂದಿ ಓಡಾಡುವ ಈ ರಸ್ತೆ ಡಾಂಬರು ಕಂಡಿರಲಿಲ್ಲ. ಸೂಕ್ತ ರಸ್ತೆ ಇಲ್ಲದೆ ಪಾದಚಾರಿಗಳು, ಅಲ್ಲಿನ ನಿವಾಸಿಗಳು, ವಾಹನ ಸವಾರರು ಪರದಾಡುವಂತಾಗಿತ್ತು.

ಈ ಬಗ್ಗೆ ಜ. 31ರಂದು ಈದಿನ ಡಾಟ್‌ ಕಾಮ್‌ ಗ್ರೌಂಡ್ ರಿಪೋರ್ಟ್ ಮಾಡಿ “ಚಿಕ್ಕಮಗಳೂರು l ಶಾಸಕರಿಗೆ ಪದೆ ಪದೇ ಮನವಿ ಮಾಡಿದರೂ, ಡಾಂಬರೀಕರಣ ಆಗದ ರಸ್ತೆ” ಶೀರ್ಷಿಕೆಯಡಿ ವರದಿ ಮಾಡಿತ್ತು. ಈದಿನ ವರದಿಯ ಫಲವಾಗಿ ಇದೀಗ ಹಾಗಲಗಂಚಿ ಗ್ರಾಮದ ರಸ್ತೆ ದುರಸ್ಥಿ ಕಾರ್ಯ ಆರಂಭವಾಗಿದೆ.

Advertisements
Screenshot 2025 02 20 21 40 25 76 7352322957d4404136654ef4adb64504

ಸುದ್ದಿ ಪ್ರಕಟವಾದ ಬಳಿಕ ಗ್ರಾಮಸ್ಥರು ಹಾಗೂ ಮುಖಂಡರ ಜೊತೆ ಶಾಸಕರು ಸಭೆ ನಡೆಸಿ, ರಸ್ತೆ ಮಾಡಿಕೊಡುವ ಭರವಸೆ ಕೊಟ್ಟಿದ್ದಾರೆ. ಹಾಗೂ ಸುದ್ದಿ ಮಾಡಿದ ಎರಡು ದಿನದ ನಂತರ ಜೆಸಿಬಿ ಮೂಲಕ ರಸ್ತೆಯನ್ನು ಅಗಲೀಕರಣ ಮಾಡಿ ಮಣ್ಣು ಹಾಕಿಸುವ ಕೆಲಸ ಆಗುತ್ತಿದೆ. ಈ ಕೆಲಸ ಮುಗಿದ ತಕ್ಷಣ ಡಾಂಬರೀಕರಣ ಮಾಡಲಾಗುತ್ತದೆ ಎಂದು ಶೃಂಗೇರಿ ಕ್ಷೇತ್ರದ ಶಾಸಕ ಟಿ ಡಿ ರಾಜೇಗೌಡ ಭರವಸೆ ನೀಡಿದ್ದಾರೆ.

ಸದ್ಯ ಹಾಗಲಗಂಚಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದು, ಆದಷ್ಟು ಬೇಗ  ಮಣ್ಣಿನ ಕೆಲಸ ಮುಗಿದು, ರಸ್ತೆಗೆ ಡಾಂಬರೀಕರಣ ಆಗಲಿ ಎಂದು ಎದುರು ನೋಡುತ್ತಿದ್ದಾರೆ.

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
+ posts

ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ...

ಕೋಲಾರ | 9 ತಿಂಗಳಿನಿಂದ ವೇತನ ಸಿಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹೊರಗುತ್ತಿಗೆ ಕಾರ್ಮಿಕರು

ಕೋಲಾರ ನಗರಸಭೆಯಲ್ಲಿ ಕೆಲಸ ಮಾಡುವ 74 ಮಂದಿ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ...

ಬೀದರ್‌ | ವಚನ ಸಾಹಿತ್ಯ, ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠದ ಕೊಡುಗೆ ಅನನ್ಯ : ಪುರಷೋತ್ತಮ ಬಿಳಿಮಲೆ

ಗಡಿಭಾಗದಲ್ಲಿ ವಚನ ಸಾಹಿತ್ಯ ಮತ್ತು ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠ...

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

Download Eedina App Android / iOS

X