ಕೇಂದ್ರ ಮತ್ತು ರಾಜ್ಯ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮನರೇಗಾ ಯೋಜನೆ ಕಾಮಗಾರಿಗಳು ಗ್ರಾಮೀಣ ಭಾಗಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಹೇಳಿದರು.
ಭಾಲ್ಕಿ ತಾಲೂಕಿನ ಮೇಥಿ ಮೇಳಕುಂದಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧೆಡೆ ಸೋಮವಾರ ಭೇಟಿ ನೀಡಿ ಉದ್ಯೋಗ ಖಾತ್ರಿ ಯೋಜನೆಯಡಿ ಪ್ರಗತಿಯಲ್ಲಿರುವ ವಿವಿಧ ಕಾಮಗಾರಿ ವೀಕ್ಷಿಸಿ ಮಾತನಾಡಿ, ʼಗ್ರಾಮೀಣ ಭಾಗದಲ್ಲಿ ಬಡ
ಜನರು ಉದ್ಯೋಗ ಅರಸಿ ವಲಸೆ ಹೋಗುವುದನ್ನು ತಡೆಗಟ್ಟಲು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕುʼ ಎಂದು ತಿಳಿಸಿದರು.
ಭಾಲ್ಕಿ ತಾಲೂಕಿನ ಭಾತಂಬ್ರಾ ಗ್ರಾಮದ ಹೊರ ವಲಯದ ಪುರಾತನ ಕೋಟೆಗೆ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಗಿರೀಶ ಬದೋಲೆ ಭೇಟಿ ನೀಡಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪರಿಶೀಲನೆ ನಡೆಸಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡುವಂತೆ ಸೂಚನೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಬೆಳಗಾವಿ ಸುವರ್ಣ ಸೌಧದಲ್ಲಿ ʼಅನುಭವ ಮಂಟಪʼ ಚಿತ್ರ ಅನಾವರಣ : ಪಟ್ಟದ್ದೇವರು ಹರ್ಷ
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ್, ಸಹಾಯಕ ನಿರ್ದೇಶಕ ಚಂದ್ರಶೇಖರ ಬನ್ನಾಳೆ, ತಾಂತ್ರಿಕ ಸಂಯೋಜಕ ಮಲ್ಲಿಕಾರ್ಜುನ ಸೇರಿದಂತೆ ಹಲವರು ಇದ್ದರು.