ಸನ್ಯಾಸ ಸ್ವೀಕರಿಸಿದ ಕೆಎಎಸ್ ಅಧಿಕಾರಿ ಎಚ್.ಎಲ್ ನಾಗರಾಜ್; ಒಕ್ಕಲಿಗ ಮಠದ ಉತ್ತರಾಧಿಕಾರಿಯಾಗಿ ನೇಮಕ

Date:

ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ದಕ್ಷ ಕೆಎಎಸ್‌ ಅಧಿಕಾರಿ ಡಾ. ಎಚ್‌.ಎಲ್‌ ನಾಗರಾಜ್ ಅವರು ಸನ್ಯಾಸ ಸ್ವೀಕರಿಸಲು ಮುಂದಾಗಿದ್ದಾರೆ. ಅವರನ್ನು ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ನೂತನ ಉತ್ತರಾಧಿಕಾರಿಯಾಗಿ ನೇಮಕ ಮಾಡಲಾಗಿದ್ದು, ಡಿಸೆಂಬರ್ 14, 15ರಂದು ಅವರಿಗೆ ಪಟ್ಟಾಭಿಷೇಕ ನಡೆಯಲಿದೆ ಎಂದು ತಿಳಿದುಬಂದಿದೆ.

- Advertisement -

ಪ್ರಸ್ತುತ ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಪೀಠಾಧಿಪತಿಯಾಗಿರುವ ಚಂದ್ರಶೇಖರ ಸ್ವಾಮೀಜಿ ಅವರಿಗೆ 81ರ ಹರೆಯ. ಅವರ ಉತ್ತರಾಧಿಕಾರಿಯಾಗಿ ನಾಗರಾಜ್ ಅವರನ್ನು ಮಠದ ಟ್ರಸ್ಟಿಗಳು ಮತ್ತು ಸ್ವಾಮೀಜಿ ಆಯ್ಕೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಡಿ.14ರ ಶನಿವಾರ ಸಂಜೆ 6 ಗಂಟೆಗೆ ಕೆಂಗೇರಿಯಲ್ಲಿರುವ ಮಠದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಭಾನುವಾರ ಪಟ್ಟಾಭಿಷೇಕ ನಡೆಯಲಿದೆ ಎಂದು ತಿಳಿದುಬಂದಿದೆ.

ನಿಷ್ಠಾವಂತ ಅಧಿಕಾರಿ ಎಂದು ಹೆಸರು ಗಳಿಸಿದ್ದ ನಾಗರಾಜ್ ಅವರು ವ್ಯವಸ್ಥೆಯ ಬಗ್ಗೆ ಸಾಕಷ್ಟು ಅಸಮಾಧಾನ ಹೊಂದಿದ್ದರು. ಸರ್ಕಾರಿ ಶಾಲೆಗಳನ್ನು ಉಳಿಸುವ ಕೆಲಸಗಳಲ್ಲಿಯೂ ತೊಡಗಿಸಿಕೊಂಡಿದ್ದರು. ಕೆ.ಆರ್‌ ಪೇಟೆಯಲ್ಲಿರುವ ಶತಮಾನದ ಶಾಲೆಯ ಪುನರಾಭಿವೃದ್ಧಿಯಲ್ಲಿ ಅವರು ನಿರ್ವಹಿಸಿದ ಪಾತ್ರ ಮಹತ್ವದ್ದು.

ನಾಗರಾಜ್ ಅವರು ಈ ಹಿಂದೆ, 2011ರಲ್ಲಿ ಕೆ.ಆರ್‌ ಪೇಟೆಯಲ್ಲಿ ತಹಶೀಲ್ದಾರ್‌ ಆಗಿ ಸೇವೆ ಸಲ್ಲಿಸುತ್ತಿದ್ದ ಸಮಯದಲ್ಲಿಯೂ ಸನ್ಯಾಸತ್ವ ಪಡೆದುಕೊಂಡಿದ್ದರು. ಆದಿಚುಂಚನಗಿರಿಯ ಮಠದಲ್ಲಿ ಸನ್ಯಾಸ ದೀಕ್ಷೆ ಪಡೆದಿದ್ದರು. ಆದರೆ, ಕುಟುಂಬಸ್ಥರು ಮತ್ತು ಒಡನಾಡಿಗಳ ಒತ್ತಾಯದಿಂದಾಗಿ ಸನ್ಯಾಸತ್ವ ತೊರೆದು ಸೇವೆಗೆ ಮರಳಿದ್ದರು.

ಆ ನಂತರ ಅವರು ಉಪ ವಿಭಾಗಾಧಿಕಾರಿ ಬಡ್ತಿ ಪಡೆದು ಹಾಸನದಲ್ಲಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ, ಅವರು ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈಗ, ಮತ್ತೆ ಸನ್ಯಾಸತ್ವ ಪಡೆಯಲು ನಿರ್ಧರಿಸಿದ್ದು, ನಾಳೆ (ಶನಿವಾರ) ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಉತ್ತಾರಾಧಿಕಾರಿಯಾಗಿ ನೇಮಕಗೊಳ್ಳಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...