ಬೀದರ್‌ | ನೂತನ ಮಾರುಕಟ್ಟೆ ನಿರ್ಮಾಣಕ್ಕೆ ಪ್ರಯತ್ನ : ಸಂಸದ ಸಾಗರ್‌ ಖಂಡ್ರೆ

Date:

Advertisements

ಬೀದರ್ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನೂತನ ವಿಶಾಲ ಮಾರುಕಟ್ಟೆ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು ಎಂದು ಸಂಸದ ಸಾಗರ್ ಖಂಡ್ರೆ ಭರವಸೆ ನೀಡಿದರು.

ಇಲ್ಲಿಯ ಗಾಂಧಿಗಂಜ್‍ನ ಬಸವೇಶ್ವರ ದೇವಸ್ಥಾನದಲ್ಲಿ ದಿ ಗ್ರೇನ್ ಆ್ಯಂಡ್ ಸೀಡ್ಸ್ ಮರ್ಚಂಟ್ಸ್ ಅಸೋಸಿಯೇಷನ್ ವತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ʼಹೊಸ ಮಾರುಕಟ್ಟೆ ನಿರ್ಮಾಣ ವ್ಯಾಪಾರಿಗಳ ಹಾಗೂ ರೈತರ ಬೇಡಿಕೆಯಾಗಿದೆ. ಇದನ್ನು ಈಡೇರಿಸುವ ದಿಸೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರೊಂದಿಗೆ ಚರ್ಚಿಸಲಾಗುವುದುʼ ಎಂದರು.

ʼಕಿರಿಯ ವಯಸ್ಸಿನಲ್ಲೇ ನನ್ನನ್ನು ಸಂಸತ್ತಿಗೆ ಆರಿಸಿ ಕಳುಹಿಸಿದ್ದಕ್ಕೆ ಮತದಾರರಿಗೆ ಕೃತಜ್ಞನಾಗಿರುವೆ. ಹಿರಿಯರ ಮಾರ್ಗದರ್ಶನದೊಂದಿಗೆ ಜಿಲ್ಲೆಯ ಅಭಿವೃದ್ಧಿ ಹಾಗೂ ಜನರ ಆಶೋತ್ತರಗಳನ್ನು ಈಡೇರಿಸಲು ಶ್ರಮಿಸುವೆʼ ಎಂದು ಹೇಳಿದರು.

Advertisements

ದಿ ಗ್ರೇನ್ ಆ್ಯಂಡ್ ಸೀಡ್ಸ್ ಮರ್ಚಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಬಸವರಾಜ ಧನ್ನೂರ ಮಾತನಾಡಿ, ʼಹೊಸ ಮಾದರಿ ಮಾರುಕಟ್ಟೆ ನಿರ್ಮಾಣದ ಅಗತ್ಯತೆವಿದೆ. ಬೀದರ್ ಎಪಿಎಂಸಿ ಮಾರುಕಟ್ಟೆ ಪ್ರಮುಖ ವಾಣಿಜ್ಯ ಕೇಂದ್ರವಾಗಿದ್ದು, ಜಿಲ್ಲೆಯ ಆರ್ಥಿಕತೆಯ ಬೆನ್ನೆಲುಬಾಗಿದೆ. 60 ವರ್ಷಗಳ ಹಿಂದೆ ಆಗಿ ಅವಶ್ಯಕತೆಗೆ ಅನುಗುಣವಾಗಿ ಮಾರುಕಟ್ಟೆ ನಿರ್ಮಿಸಲಾಗಿತ್ತು. ಇದೀಗ ತೀರಾ ಚಿಕ್ಕದಾಗಿದೆʼ ಎಂದು ಹೇಳಿದರು.

ʼಸದ್ಯ ಮಾರುಕಟ್ಟೆಗೆ ಕೃಷಿ ಉತ್ಪನ್ನಗಳ ಆವಕ ಹೆಚ್ಚಾಗಿದೆ. ವ್ಯಾಪಾರಿಗಳ ಸಂಖ್ಯೆಯೂ ವೃದ್ಧಿಸಿದೆ. ಎಲ್ಲರ ಅನುಕೂಲಕ್ಕಾಗಿ ವಿಶಾಲವಾದ ಮಾರುಕಟ್ಟೆ ನಿರ್ಮಾಣ ತುರ್ತಾಗಿ ಆಗಬೇಕಿದೆ. ಅಸೋಸಿಯೇಷನ್ ಈ ನಿಟ್ಟಿನಲ್ಲಿ ದಶಕದಿಂದ ಬೇಡಿಕೆ ಮಂಡಿಸುತ್ತಲೇ ಬಂದಿದೆʼ ಎಂದು ತಿಳಿಸಿದರು.

ಈ ಕುರಿತ ಅಸೋಸಿಯೇಷನ್ ಪದಾಧಿಕಾರಿಗಳು ಮನವಿ ಪತ್ರವನ್ನು ಸಂಸದ ಸಾಗರ್ ಖಂಡ್ರೆ ಅವರಿಗೆ ಸಲ್ಲಿಸಿದರು.

ಸಮಾರಂಭದಲ್ಲಿ ಬುಡಾ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಮಾತನಾಡಿದರು. ಎಪಿಎಂಸಿ ಕಾರ್ಯದರ್ಶಿ ಪರಮೇಶ್ವರಿ ಫುಲೇಕರ್, ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕ ಶಿವಾನಂದ ಕುಂಬಾರ, ಅಸೋಸಿಯೇಷನ್ ಉಪಾಧ್ಯಕ್ಷ ನಾಗಶೆಟ್ಟೆಪ್ಪ ದಾಡಗಿ, ಕಾರ್ಯದರ್ಶಿ ಭಗವಂತ ಔದತ್‍ಪುರ, ದಾಲ್ ಮಿಲ್ ಅಸೋಸಿಯೇಷನ್ ಅಧ್ಯಕ್ಷ ಅಶೋಕ ರೇಜಂತಲ್, ಟ್ರಾನ್ಸ್‍ಪೋರ್ಟ್ ಅಸೋಸಿಯೇಷನ್ ಅಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ, ಕಾರ್ಯದರ್ಶಿ ಶಿವರುದ್ರಪ್ಪ ಗಿರಿ, ರೈಸ್ ಮರ್ಚಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಶಂಕರ ಗುನ್ನಳ್ಳಿ, ಕಾರ್ಯದರ್ಶಿ ರಾಜು ಬಗದಲ್, ಫರ್ಟಿಲೈಸರ್ಸ್ ಅಸೋಸಿಯೇಷನ್ ಉಪಾಧ್ಯಕ್ಷ ಕಂಟೆಪ್ಪ ಪಾಟೀಲ ಕನ್ನಳ್ಳಿ, ದಿ ಗ್ರೇನ್ ಆ್ಯಂಡ್ ಸೀಡ್ಸ್ ಮರ್ಚಂಟ್ಸ್ ಅಸೋಸಿಯೇಷನ್ ಕಾರ್ಯಕಾರಿಣಿ ಸದಸ್ಯರಾದ ರಾಜಕುಮಾರ ಬಿರಾದಾರ ಗುನ್ನಳ್ಳಿ, ಸೋಮನಾಥ ಗಂಗಶೆಟ್ಟಿ, ನಾಗಶೆಟ್ಟೆಪ್ಪ ಕಾರಾಮುಂಗಿ, ಬಂಡೆಪ್ಪ, ಬಾಲಾಜಿ, ಗೋವಿಂದರಾವ್ ನೀಲಮನಳ್ಳಿ, ಪ್ರಭುಶೆಟ್ಟಿ ಮುದ್ದಣ್ಣ, ವಿಶ್ವನಾಥ ಕಾಜಿ, ಹನುಮಾನದಾಸ್ ಅಗರವಾಲ್, ಪ್ರಮುಖರಾದ ಶಾಮರಾವ್ ಸುಲಗುಂಟೆ, ಶ್ಯಾಮಸುಂದರ ಬೋರಾ, ಅಣ್ಣಾರಾವ್ ಮೊಗಶೆಟ್ಟಿ, ನಾಗರಾಜ ನಂದಗಾಂವ್, ದಿಗಂಬರ್ ಪೋಲಾ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಗಾಂಧಿಗಂಜ್ ವ್ಯಾಪಾರಿಗಳು, ಮುನೀಮರು, ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರು ಪಾಲ್ಗೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸ್ಮಶಾನದ ಬಳಿ ಆಸ್ಪತ್ರೆ : ಮಗುವಿಗೆ ಕೇಡಾಗುತ್ತೆ ಎಂಬ ಕಾರಣಕ್ಕೆ ಹೆರಿಗೆಗೆ ಬಾರದ ಗರ್ಭಿಣಿಯರು!

ಕಲಾವಿದ ಶಿವಕುಮಾರ ಪಾಂಚಾಳ ಸಂಗೀತ ನಡೆಸಿಕೊಟ್ಟರು. ದೀಪಕ್ ಥಮಕೆ ನಿರೂಪಿಸಿದರು. ಪ್ರಕಾಶ ಗೌಡಪ್ಪನೋರ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X