ತುಮಕೂರಿನಲ್ಲಿ ಈದ್ ಮಿಲಾದ್ ಸಂಭ್ರಮ : ಬೃಹತ್ ಮೆರವಣಿಗೆ

Date:

ಮುಸ್ಲಿಂ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ಈದ್ ಮಿಲಾದ್ ಪ್ರಯುಕ್ತ ಶಾಂತಿನಗರದ ಗೂಡ್‌ಶೆಡ್ ಕಾಲೋನಿಯ ಮೀನಾ ಮಸೀದಿಯಿಂದ ಚಾಂದಿನಿ ಮೆರವಣಿಗೆಯನ್ನು ನಡೆಸಲಾಯಿತು. 

- Advertisement -

ತುಮಕೂರು ನಗರದ ಗೂಡ್‌ಶೆಡ್ ಕಾಲೋನಿಯ ಮೀನಾ ಮಸೀದಿಯಿಂದ ಶುಕ್ರವಾರ ಮಧ್ಯಾಹ್ನ 1.30ಕ್ಕೆ ಆರಂಭವಾದ ಚಾಂದಿನಿ ಮೆರವಣಿಗೆಯು ಬನಶಂಕರಿ, ಸದಾಶಿವನಗರ, ನಜರಾಬಾದ್, ಚಾಂದಿನಿ ಸರ್ಕಲ್, ಪಿ.ಹೆಚ್. ಕಾಲೋನಿ, ಬಿ.ಜಿ. ಪಾಳ್ಯ ವೃತ್ತದ ಮುಖೇನ ಸಂತೆಪೇಟೆಯಲ್ಲಿ ಸಾಗಿತು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ನಂತರ ಮೆರವಣಿಗೆಯು ಮಂಡಿಪೇಟೆ ಮುಖ್ಯ ರಸ್ತೆಯಿಂದ ಗುಂಚಿ ಸರ್ಕಲ್, ಬಾರ್‌ಲೈನ್ ಮಸೀದಿ ಮುಖೇನ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತಲುಪಿ ಮುಕ್ತಾಯಗೊಂಡಿತು. 

1002009080

ಚಾಂದಿನಿ ಮೆರವಣಿಗೆಯಲ್ಲಿ ಪಾಲ್ಗೊಂಡು ಮಾತನಾಡಿದ ಕಾಂಗ್ರೆಸ್ ಮುಖಂಡ ಇಕ್ಬಾಲ್ ಅಹಮದ್, ಪ್ರವಾದಿಗಳ 1500ನೇ ಹುಟ್ಟುಹಬ್ಬದ ಅಂಗವಾಗಿ ಅವರ ಶಾಂತಿಯ ಸಂದೇಶವನ್ನು ಸಾರುವ ನಿಟ್ಟಿನಿಲ್ಲಿ ಹಮ್ಮಿಕೊಂಡಿರುವ ಈ ಚಾಂದಿನಿ ಮೆರವಣಿಗೆ, ಎಲ್ಲಾ ಧರ್ಮದವರು, ಜಾತಿಯವರು ಸೇರಿ ಮಾಡುವಂತಹ ಕಾರ್ಯವಾಗಿದೆ. ಪ್ರವಾದಿಗಳ ಸಂದೇಶದಂತೆ ನಾವು ನಮ್ಮ ನೆರೆಹೊರೆಯವರ ಜತೆ ಹಾಗೂ ಅನ್ಯ ಧರ್ಮೀಯರ ಜತೆ ಶಾಂತಿಯ ಸಹಬಾಳ್ವೆ ನಡೆಸಿದರೆ ಅದು ದೇವರಿಗೆ ಪ್ರಿಯವಾದ ಕೆಲಸವಾಗಿದೆ. ಹಾಗಾಗಿ ನಮ್ಮಿಂದ ಯಾರಿಗೂ ತೊಂದರೆಯಾಗದ ರೀತಿ ನಾವು ನಡೆದುಕೊಳ್ಳಬೇಕಿದೆ ಎಂದರು.

ಭಾರತ ಬಹುಧರ್ಮ, ಜಾತಿ, ಭಾಷೆ, ಸಂಸ್ಕೃತಿಗಳನ್ನು ಒಳಗೊಂಡ ದೇಶ. ಬಹುತ್ವವೇ ಭಾರತದ ನಿಜವಾದ ಜೀವಾಳ. ಹಾಗಾಗಿ ಪ್ರವಾದಿಗಳ ತತ್ವ ಸಂದೇಶದಂತೆ ನಡೆದುಕೊಂಡಾಗ ಮಾತ್ರ ನಿಜವಾದ ಮುಸ್ಲಿಂನಾಗಲು ಸಾಧ್ಯ. ಬೇರೆಯವರಿಗೆ ತೊಂದರೆಯಾಗದಂತೆ ನಡೆದುಕೊಂಡರೆ ಅದೇ ನಾವು ದೇವರಿಗೆ ಸಲ್ಲಿಸುವ ನಿಜವಾದ ಪ್ರಾರ್ಥನೆ ಎಂದು ಹೇಳಿದರು

1500 ವರ್ಷಗಳ ಹಿಂದೆ ಪ್ರಪಂಚದಲ್ಲಿ ಅತ್ಯಾಚಾರ, ದರೋಡೆ, ಹೆಣ್ಣು ಮಕ್ಕಳು ಜನಿಸಿದರೆ ಜೀವಂತವಾಗಿ ಹೂಳುವುದು ಇತ್ತು. ಆ ಸಂದರ್ಭದಲ್ಲಿ ಜನಿಸಿದ ಪ್ರವಾದಿಗಳು ಇದಕ್ಕೆಲ್ಲಾ ಅಂತ್ಯ ಹಾಡುವ ಮೂಲಕ ಜಗತ್ತಿಗೆ ಶಾಂತಿಯ ಸಂದೇಶವನ್ನು ಸಾರಿದರು ಎಂದರು

1002009094

ಮಾಜಿ ಶಾಸಕ ಹಾಗೂ ಮುಸ್ಲಿಂ ಸಮುದಾಯದ ಹಿರಿಯ ಮುಖಂಡ ಎಸ್. ಷಫಿಅಹಮದ್ ಮಾತನಾಡಿ, ಈದ್ ಮಿಲಾದ್ ಹಬ್ಬ ಆಚರಣೆ ಶಾಂತಿ, ಸಹಬಾಳ್ವೆಯ ಸಂಕೇತ. ಈ ಸುಸಂದರ್ಭದಲ್ಲಿ ಗೌರಿ ಗಣೇಶ ಹಬ್ಬವನ್ನು ಹಿಂದೂ-ಮುಸ್ಲಿಂಸಮುದಾಯದವರೆಲ್ಲರೂ ಸೇರಿ ಆಚರಿಸಿದ್ದೇವೆ. ಮುಂದಿನ ದಿನಗಳಲ್ಲೂ ಸಹ ನಾವೆಲ್ಲರೂ ಅಣ್ಣ ತಮ್ಮಂದಿದಂತೆ ಸಹಬಾಳ್ವೆಯಿಂದ ಬದುಕೋಣ ಎಂದರು. 

ಮಾಜಿ ಶಾಸಕ ಡಾ. ರಫೀಕ್‌ಅಹಮದ್ ಮಾತನಾಡಿ, ಇಂದು ಪ್ರವಾದಿ ಮಹಮದ್ ರವರ 1500ನೇ ಹುಟ್ಟುಹಬ್ಬವನ್ನು ಆಚರಣೆ ಮಾಡುತ್ತಿದ್ದೇವೆ. ಈ ಸುಸಂದರ್ಭದಲ್ಲಿ ಹಿಂದೂ-ಮುಸ್ಲಿಂ, ಕ್ರೖಸ್ತ, ಸಿಖ್ ಎಲ್ಲರೂ ಸಹೋದರತೆಯಿಂದ ಬಾಳೋಣ ಎಂದರು.

ಸಮಾಜದಲ್ಲಿ ಹಿಂದೂ-ಮುಸ್ಲಿಂ ಎಲ್ಲರೂ ಅಣ್ಣ ತಮ್ಮಂದಿರಂತೆ ಬಾಳಬೇಕು ಎಂಬುದು ಪ್ರವಾದಿಗಳ ಸಂದೇಶ. ಪ್ರವಾದಿಗಳು ಇಡೀ ಜಗತ್ತಿಗೆ ಶಾಂತಿಯ ಸಂದೇಶ ಸಾರಿದ್ದಾರೆ ಎಂದರು.

ಇದೆ ಸಂದರ್ಭದಲ್ಲಿ ಮಾಜಿ ಶಾಸಕರಾದ ಷಫಿ ಅಹಮದ್, ರಫೀಕ್ ಅಹಮದ್, ಇಕ್ಬಾಲ್ ಅಹಮದ್, ಅಸ್ಲಾಂ ಪಾಷ, ಮೆಹಬೂಬು ಪಾಷ, ಡಿವೈಎಸ್ಪಿ ಚಂದ್ರಶೇಖರ್, ಕುಮಾರ್, ನಯಾಜ್, ಇನಾಯತ್, ಇಸ್ಮಾಯಿಲ್, ಅಕ್ರಂ, ಜಹೀದ್, ಈದ್ ಮಿಲಾದ್ ಕಮಿಟಿಯ ಮಹಮದ್ ಫೀರ್, ಬಾಬು, ಸೈಯದ್, ಇಮ್ರಾನ್ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಂಡಿದ್ದರು.

ಚಾಂದಿನಿ ಮೆರವಣಿಗೆ ಸಾಗಿದ ಮಾರ್ಗದುದ್ದಕ್ಕೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ರವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಮಾಜದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ ಪಾತ್ರ ಮಹತ್ವದ್ದು: ರಾಕೇಶ್ ಗೋಪಾಲ್ ಜೋಶಿ

ಸಮಾಜದ ಅಭಿವೃದ್ಧಿ, ದೇಶದ ಪ್ರಗತಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು...

ಉಳ್ಳಾಲ | ಅಪಘಾತ: ಮಗನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ವರ್ಷಿತ್ ಕುಟುಂಬ

ಉಳ್ಳಾಲ ತಾಲೂಕಿನ ಕುತ್ತಾರು ಕೊರಗಜ್ಜ ಕಟ್ಟೆಯ ಬಳಿ ಸೋಮವಾರ ರಾತ್ರಿ ದ್ವಿಚಕ್ರ...

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...

ಉಡುಪಿ | ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ : ಸಚಿವ ಬಸವಂತಪ್ಪ

ಸರ್ವಋತು ಮಲ್ಪೆ ಮೀನುಗಾರಿಕಾ ಬಂದರಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಆಧುನೀಕರಣಕ್ಕೆ ಮೊದಲ...