ಈದ್ ಮಿಲಾದ್ | ಮೀನುಗಾರರಿಗೆ ರಜೆ ಬ್ಯಾನರ್; ಖಂಡನೆ-ಸ್ಪಷ್ಟನೆ

Date:

Advertisements

ಈದ್ ಮಿಲಾದ್ ಹಬ್ಬ ಆಚರಿಸುವ ಉದ್ದೇಶಕ್ಕಾಗಿ ಮೀನುಗಾರರು ಸೆ.28ರಂದು ಕಡ್ಡಾಯವಾಗಿ ರಜೆ ತೆಗೆದುಕೊಳ್ಳಬೇಕೆಂಬ ಬ್ಯಾನರ್‌ಅನ್ನು ಮಂಗಳೂರಿನ ಮೀನುಗಾರಿಕಾ ದಕ್ಕೆಯಲ್ಲಿ ಅಳವಡಿಸಲಾಗಿದೆ.

ಹಸಿ ಮೀನು ವ್ಯಾಪಾರಸ್ಥರ ಸಂಘವು ಬ್ಯಾನರ್ ಅಳವಡಿಸಿದ್ದು, ಬ್ಯಾನರ್ ಹಾಕಿರುವುದರ ವಿರುದ್ಧ ಆಕ್ಷೇಪಗಳು ವ್ಯಕ್ತವಾಗಿವೆ. ಆದರೆ, ಬ್ಯಾನರ್ ಅಳವಡಿಕೆಯ ಹಿಂದಿನ ಉದ್ದೇಶವನ್ನು ಸಂಘವು ಸ್ಪಷ್ಟಪಡಿಸಿದೆ.

ಮೀನುಗಾರಿಕಾ ದಕ್ಕೆಯಲ್ಲಿ ಅಳವಡಿಸಿರುವ ಬ್ಯಾನರ್‌ನಲ್ಲಿ, “ವ್ಯಾಪಾರಸ್ಥರ ಸಂಘದ ನಿರ್ಧಾರದಂತೆ ಸೆ.28ರಂದು ಮುಂಜಾನೆ 3:45ರ ನಂತರ ಕಡ್ಡಾಯವಾಗಿ ರಜೆ ತೆಗೆದುಕೊಳ್ಳಬೇಕು. ರಜೆ ಮಾಡದೇ ಕಾನೂನು ಉಲ್ಲಂಘಿಸಿದರೆ, ದಕ್ಕೆಯಲ್ಲಿ ಒಂದು ತಿಂಗಳು ವ್ಯಾಪಾರ ಮಾಡದಂತೆ ಸಂಘವು ಕ್ರಮಕೈಗೊಳ್ಳುತ್ತದೆ ಮತ್ತು ದಂಡನೆ ವಿಧಿಸುತ್ತದೆ” ಬರೆಯಲಾಗಿದೆ.

Advertisements

ಬ್ಯಾನರ್ ಅಳವಡಿಕೆಗೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್‌ವೆಲ್, “ಧಕ್ಕೆಯಲ್ಲಿ ದಂಡನೆ ವಿಧಿಸಲು ಷರಿಯ ಕಾನೂನು ಜಾರಿಯಲ್ಲಿದೆಯೇ? ಇವರ ಬೆದರಿಕೆ ತಂತ್ರಗಳಿಗೆ ಹಿಂದೂ ಮೀನುಗಾರರು ಮಣಿಯಬಾರದು. ನಿಮ್ಮ ಜೊತೆ ಇಡೀ ಹಿಂದೂ ಸಮಾಜ ಇದೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಆ ಮೂಲಕ ಹಿಂದುತ್ವ ಕೋಮು ರಾಜಕೀಯಕ್ಕೆ ಯತ್ನಿಸಿದ್ದಾರೆ.

ಆದರೆ, ಬ್ಯಾನರ್ ಅಳವಡಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿರುವ ಮೀನುಗಾರರ ಸಂಘ, “ಹಸಿ ಮೀನು ವ್ಯಾಪಾರಸ್ಥರ ಸಂಘದಲ್ಲಿ ಎಲ್ಲ ಸಮುದಾಯದವರೂ ಇದ್ದಾರೆ. ಮಂಗಳೂರು ದಕ್ಕೆಯಲ್ಲಿ ವರ್ಷದಲ್ಲಿ ಒಟ್ಟು 9 ದಿನ ರಜೆಯಿರುತ್ತದೆ. ಅದರಲ್ಲಿ, ಹಿಂದುಗಳ ಹಬ್ಬಕ್ಕೆ 4 ದಿನ, ಮುಸ್ಲಿಮರ ಹಬ್ಬಕ್ಕೆ 3 ದಿನ, ಕ್ರೈಸ್ತರ ಹಬ್ಬಕ್ಕೆ ಎರಡು ದಿನದಂತೆ ರಜೆಯನ್ನು ಹಂಚಲಾಗಿದೆ. ಮೊನ್ನೆ ಚೌತಿಯ (ಗಣೇಶ ಹಬ್ಬ) ದಿನ ರಜೆ ಇತ್ತು. ಆದ್ರೆ ಪರ್ಸಿನ್ ಬೋಟ್‌ಗಳು ನಿಯಮವನ್ನು ಮೀರಿ ವ್ಯಾಪಾರವನ್ನು ಮುಂದುವರೆಸಿದ್ದರು. ಹೀಗಾಗಿ, ರಜೆಯ ರಜೆ ತೆಗೆದುಕೊಳ್ಳಲೇಬೇಕೆಂದು ಬ್ಯಾನರ್ ಅಳವಡಿಸಬೇಕಾಯಿತು” ಎಂದು ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X