ಎಲ್‌ ನಿನೋ ಪರಿಣಾಮ; ರಾಜ್ಯದಲ್ಲಿ ಫೆಬ್ರವರಿಯಲ್ಲೇ ಬೇಸಿಗೆ

Date:

Advertisements

ಬೇಸಿಗೆ ಕಾಲ ಇನ್ನೂ ಆರಂಭವಾಗಿಲ್ಲ. ಆದರೂ, ಈಗಾಗಲೇ ಬೇಸಿಗೆಯ ರೀತಿಯಲ್ಲಿ ಬಿಸಿಲು ಹೆಚ್ಚಾಗಿದೆ. ಬೆಂಗಳೂರಿನಲ್ಲಿ ತಾಪಮಾನ 2 ಡಿಗ್ರಿಗಳಷ್ಟು (33.3°) ಹೆಚ್ಚಾಗಿದೆ. ಉತ್ತರ ಒಳಭಾಗ ಮತ್ತು ಕರಾವಳಿ ಕರ್ನಾಟಕದಲ್ಲಿ ಹವಾಮಾನ ಒಂದೇ ರೀತಿಯಿದೆ. ಈ ಭಾಗಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ 2° ಹೆಚ್ಚಾಗಿದೆ ಎಂದು ವರದಿಯಾಗಿದೆ.

ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ಹೇಳುವಂತೆ, ‘ಎಲ್‌ ನಿನೋ’ ಪರಿಣಾಮದಿಂದಾಗಿ ತಾಪಮಾನ ಹೆಚ್ಚಾಗಿದೆ. ಆಗಸ್ಟ್‌ ವೇಳೆಗೆ ಎಲ್‌ ನಿನೋ ತಟಸ್ಥವಾಗುವ ನಿರೀಕ್ಷೆ ಇದೆ.

ಬೆಂಗಳೂರಿನಲ್ಲಿ ಆರ್ದ್ರ ವಾತಾವರಣವಿದೆ. ನಗರದಲ್ಲಿ ಗರಿಷ್ಠ ತಾಪಮಾನ 33.1° ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 18.1° ಸೆಲ್ಸಿಯಸ್ ಇದೆ. ಇದು, ಈ ಸಮಯದಲ್ಲಿ ಸರಾಸರಿ ಗರಿಷ್ಠ ತಾಪಮಾನ 30.9° ಸೆಲ್ಸಿಯಸ್ ಮತ್ತು ಕನಿಷ್ಠ 17.6° ಸೆಲ್ಸಿಯಸ್ ಆಗಿರಬೇಕಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisements

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 33.1° (ಗರಿಷ್ಠ) ಮತ್ತು 15.9° (ಕನಿಷ್ಠ) ಸೆಲ್ಸಿಯಸ್ ಮತ್ತು ಹಳೆಯ ವಿಮಾನ ನಿಲ್ದಾಣದಲ್ಲಿ 32.9° (ಗರಿಷ್ಠ) ಮತ್ತು 15° (ಕನಿಷ್ಠ) ಸೆಲ್ಸಿಯಸ್ ದಾಖಲಾಗಿದೆ ಎಂದು ಇಲಾಖೆ ಹೇಳಿದೆ.

”ದಕ್ಷಿಣ ಒಳನಾಡು ಭಾಗಗಳ ಕೆಲವು ಪ್ರದೇಶಗಳು, ಕರಾವಳಿ ಕರ್ನಾಟಕದ ಉಡುಪಿ, ಕಾರವಾರ ಹಾಗೂ ಉತ್ತರ ಒಳನಾಡಿನ ಕಲಬುರಗಿ, ರಾಯಚೂರು, ಬಾಗಲಕೋಟೆ ಮತ್ತು ಬೆಳಗಾವಿಯಲ್ಲಿ ಗರಿಷ್ಠ ತಾಪಮಾನ ಕನಿಷ್ಠ 2° ಸೆಲ್ಸಿಯಸ್ ಹೆಚ್ಚಾಗಿದೆ” ಎಂದು ಇಲಾಖೆ ತಿಳಿಸಿದೆ.

ಗಮನಾರ್ಹ ವಿಚಾರವೆಂದರೆ, ಮಾರ್ಚ್ 1ಅನ್ನು ಅಧಿಕೃತವಾಗಿ ಬೇಸಿಗೆಯ ಆರಂಭವೆಂದು ಪರಿಗಣಿಸಲಾಗಿದೆ. ಸಾಮಾನ್ಯವಾಗಿ ಫೆಬ್ರವರಿ ಮೂರನೇ ವಾರದ ನಂತರ ಬೇಸಿಗೆಯ ಪರಿಸ್ಥಿತಿ ಕಂಡುಬರುತ್ತದೆ. ಆದರೆ, ಈ ವರ್ಷ ಈಗಾಗಲೇ ಬೇಸಿಗೆಯ ಅನುಭವವಾಗುತ್ತಿದೆ. ಇದಕ್ಕೆ ಎಲ್‌ ನೀನೋ ಕಾರಣವೆಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್...

ಕಲಬುರಗಿ | ಶಾಲಾ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ; ಗ್ರಾಮಸ್ಥರಿಂದ ಪ್ರತಿಭಟನೆ

ಸೇಡಂ ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ...

ಗದಗ | ನಾಲ್ಕು ದಿನಗಳಿಂದ ರೈತರು ಪ್ರತಿಭಟನೆ, ಸ್ಪಂದಿಸದ ಆಡಳಿತ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಕಿಡಿ

"ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರೈತರು ನಾಲ್ಕು ದಿನಗಳಿಂದ...

Download Eedina App Android / iOS

X