ಚುನಾವಣೆ ನೀತಿ ಸಂಹಿತೆ: ‘ಅಂಬೇಡ್ಕರ್‌ ಜಯಂತಿ’ ಕುರಿತು ಸಮಾಜ ಕಲ್ಯಾಣ ಇಲಾಖೆ ಸ್ಪಷ್ಟನೆ

Date:

ಭಾರತ ರತ್ನ ಡಾ.ಬಿ ಆರ್‌ ಅಂಬೇಡ್ಕರ್‌ ಹಾಗೂ ಬಾಬು ಜಗಜೀವನ್‌ ರಾಂ ಅವರ ಜಯಂತಿಗಳನ್ನು ಪ್ರತಿ ವರ್ಷ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಚರಿಸಲಾಗುತ್ತಿದೆ. ಎರಡು ಜಯಂತಿಗಳ ಆಚರಣೆಗೆ ಸಂಬಂಧಿಸಿದ ವಿಷಯಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿರುವುದಿಲ್ಲ. ಹೀಗಾಗಿ, ಆ ಇಲಾಖೆ ಹೊರಡಿಸಿದ್ದ ಪ್ರಕಟಣೆಯಲ್ಲಿ ಈ ಇಬ್ಬರು ನಾಯಕರ ಜಯಂತಿಗಳ ಕುರಿತು ಉಲ್ಲೇಖಿಸಿರಲಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಬೆಂಗಳೂರು ಆಯುಕ್ತ ರಾಖೇಶ್‌ ಕುಮಾರ್‌ ಸ್ಪಷ್ಟನೆ ನೀಡಿದ್ದಾರೆ.

ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ 2023ರ ಏಪ್ರಿಲ್‌ ಮತ್ತು ಮೇ ತಿಂಗಳಿನಲ್ಲಿರುವ ಜಯಂತಿಗಳನ್ನು ಸರಳ ಮತ್ತು ಸಾಂಕೇತಿಕವಾಗಿ ಆಚರಣೆ ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿತ್ತು. ಈ ಆದೇಶದಲ್ಲಿ ಅಂಬೇಡ್ಕರ್‌ ಮತ್ತು ಬಾಬು ಜಗಜೀವನ್‌ ರಾಂ ಅವರ ಜಯಂತಿಗಳನ್ನು ಉಲ್ಲೇಖಿಸಿರಲಿಲ್ಲ. ಇದನ್ನು ಖಂಡಿಸಿ ಸಾರ್ವಜನಿಕರು ಸಾಮಾಜಿಕ ಜಾಲಾತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ಸಾರ್ವಜನಿಕರ ಆಕ್ರೋಶವನ್ನು ಶಮನ ಮಾಡುವ ಪ್ರಯತ್ನವನ್ನು ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಮಾಡಿದ್ದಾರೆ.

ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್‌ ರಾಂ ಮತ್ತು ಸಂವಿಧಾನ ಶಿಲ್ಪಿ  ಡಾ. ಬಿ ಆರ್‌ ಅಂಬೇಡ್ಕರ್‌ ಅವರ ಜಯಂತಿಯನ್ನು ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಸಮಾಜ ಕಲ್ಯಾಣ ಇಲಾಖೆ ಮೂಲಕ ಸರ್ಕಾರ ಪ್ರತಿ ವರ್ಷವೂ ಆಚರಿಸಲಾಗುತ್ತದೆ.  ದಿನಾಂಕ 05/04/2023 ರಂದು ಬಾಬು ಜಗಜೀವನ್‌ ರಾಂ ಅವರ ಜನ್ಮ ದಿನಾಚರಣೆಯನ್ನು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಚರಿಸಲಾಗಿದೆ ಎಂದು ಇಲಾಖೆಯ ಆಯುಕ್ತ ರಾಖೇಶ್‌ ಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ ನೀತಿ ಸಂಹಿತೆ ಜಾರಿ; ಅಂಬೇಡ್ಕರ್‌ ಜಯಂತಿ ಕೈಬಿಟ್ಟ ಕನ್ನಡ ಮತ್ತು ಸಂಸ್ಕೃತಿ ಇಲಾಖೆ

ಈ ಸಂಬಂಧ ಈ ದಿನ.ಕಾಮ್‌ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯನ್ನು ಸಂಪರ್ಕಿಸಿದಾಗ ಪ್ರತಿಕ್ರಿಯಿಸಿದ್ದು, “ಬಾಬು ಜಗಜೀವನ್‌ ರಾಂ ಮತ್ತು ಅಂಬೇಡ್ಕರ್‌ ಜಯಂತಿಗಳನ್ನು ಪ್ರತಿ ವರ್ಷ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಚರಿಸುತ್ತೇವೆ. ಈ ಬಾರಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸರಳ ಮತ್ತು ಅರ್ಥಪೂರ್ಣವಾಗಿ ನಡೆಸುತ್ತೇವೆ. ಈಗಾಗಲೇ ಏಪ್ರಿಲ್‌ 5ರಂದು ಬಾಬು ಜಗಜೀವನ್‌ ರಾಂ ಜಯಂತಿ ನಡೆಸಿದ್ದು, ಏ.14ರಂದು ಅಂಬೇಡ್ಕರ್‌ ಜಯಂತಿ ನಡೆಸುತ್ತೇವೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪನಿಶ್ಮೆಂಟ್‌ಗೆ ಆಸ್ಪದ ಕೊಡಬೇಡಿ, ಒಳ್ಳೆ ಕೆಲಸ ಮಾಡಿ: ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಎಚ್ಚರಿಕೆ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಡಿಸಿಎಂ ಸಭೆ 'ಪನಿಶ್ಮೆಂಟ್ ಮಾಡೋದು ದೊಡ್ಡ...

ಟಿ.ನರಸೀಪುರ ಬಳಿ ಭೀಕರ ಅಪಘಾತ | 10 ಮಂದಿ ಸಾವು; ಹಲವರಿಗೆ ಗಂಭೀರ ಗಾಯ

ಮೈಸೂರು ಜಿಲ್ಲೆ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಕೊಳ್ಳೇಗಾಲ- ಟಿ.ನರಸೀಪುರ...

ಧಾರವಾಡ | ರಿಯಲ್‌ ಎಸ್ಟೇಟ್‌ ಉದ್ಯಮಿ ಕೊಲೆ ಪ್ರಕರಣ; ಆರು ಮಂದಿ ಆರೋಪಿಗಳ ಬಂಧನ

ಧಾರವಾಡದ ಕಮಲಾಪುರ ಹೊರವಲಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ಕೊಲೆ...

ಧಾರವಾಡ | ಕುಸ್ತಿಪಟುಗಳ ಹೋರಾಟ ಬೆಂಬಲಿಸಿದವರ ಬಂಧನ ಖಂಡಿಸಿ ಪ್ರತಿಭಟನೆ

ಬ್ರಿಜ್ ಭೂಷಣ್ ಪರವಾಗಿ ಕೇಂದ್ರ ಸರ್ಕಾರ ನಿಂತಿರುವುದು ನಿಜಕ್ಕೂ ಖಂಡನೀಯ ಕುಸ್ತಿಪಟುಗಳ ಹೋರಾಟ...