ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಸ್ಥಾನಗಳಿಗೆ ತೆರವಾಗಿದ್ದ ಸ್ಥಾನಗಳಿಗೆ ಚುನಾವಣೆ ಘೋಷಿಸಲಾಗಿದ್ದು, ಜಿಲ್ಲೆಯ 15 ಗ್ರಾಮ ಪಂಚಾಯಿತಿಯ 19 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ರಾಜ್ಯಾದ್ಯಂತ ಒಟ್ಟು 531 ಗ್ರಾಮ ಪಂಚಾಯಿತಿಗಳ 641 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಉಪಚುನಾವಣೆಗೆ ನವೆಂಬರ್ 6ರಂದು ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಲಿದ್ದಾರೆ. ನವೆಂಬರ್ 12ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದು, ನವೆಂಬರ್ 15 ನಾಮಪತ್ರ ಹಿಂಪಡೆಯಲು ಅವಕಾಶವಿದೆ. ನ.23ರಂದು ಮತದಾನ ನಡೆಯಲಿದ್ದು, ನ.26ರಂದು ಮತ ಎಣಿಕೆ ನಡೆಯಲಿದೆ.
ಈ ಸುದ್ದಿ ಓದಿದ್ದೀರಾ? ಕೊಡಗು | ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಶಾಸಕ ಡಾ ಮಂತರ್ ಗೌಡ
ಶಿವಮೊಗ್ಗ ತಾಲೂಕಿನ ಕೋಟೆಗಂಗೂರು, ಸಾಗರದ ಕುದರೂರು, ಭದ್ರಾವತಿಯ ಬಾರಂದೂರು, ಅರಕೆರೆ, ತೀರ್ಥಹಳ್ಳಿಯ ತೀರ್ಥಮತ್ತೂರು, ಹೊಸನಗರದ ಎಂ ಗುಡ್ಡೆಕೊಪ್ಪ, ಶಿಕಾರಿಪುರದ ಮಾರವಳ್ಳಿ, ಹಿತ್ತಲ, ಸುಣ್ಣದಕೊಪ್ಪ, ತರಲಘಟ್ಟ, ಸೊರಬ ತಾಲೂಕಿನ ಹೊಸಬಾಳೆ, ಜಡೆ, ಭಾರಂಗಿ ಗ್ರಾಮ ಪಂಚಾಯಿತಿಗಳ ತಲಾ ಒಂದು ಸ್ಥಾನ, ಭದ್ರಾವತಿಯ ಮೈದೊಳಲು, ಅರಹತೊಳಲು ಗ್ರಾಮ ಪಂಚಾಯಿತಿಗಳ ತಲಾ ಮೂರು ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ.