ಚುನಾವಣಾ ಸಮಯದಲ್ಲಿ ಎಲ್ಲ ಬೆಲೆ ಏರಿಕೆಗೂ ಕಡಿವಾಣ ಹಾಕಲಾಗಿತ್ತು. ಇದೀಗ, ಮೇ 10ರಂದು ಮತದಾನ ಮುಗಿಯುತ್ತಿದ್ದಂತೆ ಬೆಲೆ ಏರಿಕೆಯ ಭರಾಟೆ ಆರಂಭವಾಗಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಬೆಲೆ ಏರಿಕೆಗೆ ನಾಂದಿ ಹಾಡಿದೆ.
ರಾಜ್ಯದಲ್ಲಿ ಪ್ರತಿ ಯೂನಿಟ್ಗೆ ಸರಾಸರಿ 70 ಪೈಸೆ ಹೆಚ್ಚಿಸಿ ಆಯೋಗವು ಆದೇಶ ಹೊರಡಿಸಿದೆ. ಪರಿಷ್ಕೃತ ದರವು ಎಪ್ರಿಲ್ 1ರಿಂದಲೇ ಪೂರ್ವಾನ್ವಯ ಆಗಲಿದೆ ಎಂದೂ ಆಯೋಗ ಹೇಳಿದೆ.
ಚುನಾವಣಾ ಸಯಮದಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಿದ್ದ ಪ್ರಣಾಳಿಕೆಯಲ್ಲಿ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಭರವಸೆ ನೀಡಿದೆ. ಸದ್ಯ ಮತ ಎಣಿಕೆ ಇನ್ನೂ ನಡೆದಿಲ್ಲ. ಚುನಾವಣಾ ಫಲಿತಾಂಶ ಹೊರಬಿದ್ದ ಬಳಿಕ, ಒಂದು ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಉಚಿತ ವಿದ್ಯುತ್ ಭರವಸೆಯನ್ನು ಜಾರಿಗೆ ತರುವುದೇ ಮತ್ತು ವಿದ್ಯುತ್ ಬೆಲೆ ಏರಿಕೆಗೆ ಕಡಿವಾಣ ಹಾಕುವುದೇ ಕಾದು ನೋಡಬೇಕಿದೆ.