ಆಕಸ್ಮಿಕ ಅಗ್ನಿ ಅವಘಡದಿಂದ ಚಪ್ಪಲಿ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ವಿಜಯಪುರ ನಗರದ ಸರಾಫ್ ಬಜಾರ್ ಬಳಿ ಮಂಗಳವಾರ ನಡೆದಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ನವ ಕರ್ನಾಟಕ ಫುಟ್ ವೇರ್ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಮಂಗಳವಾರ ಮುಜಾನೆ ಅಂಗಡಿಗೆ ಬೆಂಕಿ ತಗುಲಿರುವ ಸಾಧ್ಯತೆ ಇದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಧಾವಿಸಿ ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಅಪಾರ ಪ್ರಮಾಣದ ಹಾನಿ ಉಂಟಾಗಿತ್ತು. ಅಂಗಡಿಯಲ್ಲಿಟ್ಟ ಚಪ್ಪಲಿಗಳು, ಪೀಠೋಪಕರಣಗಳು ಸೇರಿ ಇತರೆ ವಸ್ತುಗಳು ಭಸ್ಮವಾಗಿವೆ. ಗಾಂಧಿ ಚೌಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಈ ಕುರಿತು ನವ ಕರ್ನಾಟಕ ಫುಟ್ ವೇರ್ ಅಂಗಡಿಯ ಮಾಲೀಕ ರಾಘವೇಂದ್ರ ಗಂಗಾಧರ್ ಶಹಪುರ್, ಸುದ್ದಿಗಾರರೊಂದಿಗೆ ಮಾತನಾಡಿ, ಮಧ್ಯರಾತ್ರಿ 1 ಅಥವಾ 2 ಗಂಟೆ ಸಮಯದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಅವಘಡ ಹೇಗೆ ಆಗಿದೆ ಎಂಬುದು ಗೊತ್ತಿಲ್ಲ. ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಲಾಯಿತು. ಅವರು ಬಂದು ಬೆಂಕಿ ನಂದಿಸಿದರು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿರಬಹುದು ಎಂದು ಹೇಳಿದ್ದಾರೆ. ಗಾಂಧಿ ಚೌಕ ಠಾಣೆ ಪೋಲಿಸರು ಸ್ಥಳಕ್ಕೆ ಬಂದು ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಂದಾಜು 30 ಲಕ್ಷ ರೂ. ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ” ಎಂದು ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್-ವೇ ಟೋಲ್ ದರ ಮತ್ತೆ ಹೆಚ್ಚಳ