ಮೈಸೂರು | ಚಾಮರಾಜನಗರ ಜಿಲ್ಲೆಯ ಹಾಡಿಗಳಿಗೆ ವಿದ್ಯುತ್ ಸೌಲಭ್ಯ : ಶಾಸಕ ರಮೇಶ್ ಬಂಡಿಸಿದ್ದೇಗೌಡ

Date:

Advertisements

ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್‌ ಪ್ರಧಾನ ಕಚೇರಿಯಲ್ಲಿ ನಡೆದ ಚಾಮರಾಜನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಸೆಸ್ಕ್ ಅಧ್ಯಕ್ಷ ಹಾಗೂ ಶಾಸಕ ರಮೇಶ್ ಬಂಡಿಸಿದ್ದೇಗೌಡ ” ಚಾಮರಾಜನಗರ ಜಿಲ್ಲೆಯ ಹಾಡಿಗಳಿಗೆ ವಿದ್ಯುತ್‌ ಪೂರೈಸಲು ಅಗತ್ಯವಿರುವ ಕೆಲಸವನ್ನು ಅಧಿಕಾರಿಗಳು ಕೂಡಲೇ ಆರಂಭಿಸಬೇಕು. ನಂತರದಲ್ಲಿ ಯಾವುದೇ ಅಡೆತಡೆಗಳು ಅಥವಾ ಸಮಸ್ಯೆ ಉಂಟಾದಲ್ಲಿ ಖುದ್ದಾಗಿ ನಾನೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸರ್ಕಾರದ ಜೊತೆ ಮಾತುಕತೆ ನಡೆಸಿ ಅನುಮತಿ ಕೊಡಿಸುತ್ತೇನೆ ” ಎಂದು ಭರವಸೆ ನೀಡಿದರು.

ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್‌ ಮಾತನಾಡಿ, ” ಜಿಲ್ಲೆಯ ವ್ಯಾಪ್ತಿಯಲ್ಲಿರುವ 31 ಹಾಡಿಗಳಿಗೆ ವಿದ್ಯುತ್‌ ಪೂರೈಕೆ ಮಾಡುವ ನಿಟ್ಟಿನಲ್ಲಿ ಸೆಸ್ಕ್‌ ವತಿಯಿಂದ ಉತ್ತಮ ಸಹಕಾರ ಸಿಕ್ಕಿದೆ. 31 ಹಾಡಿಗಳ 2000 ಕುಟುಂಬಕ್ಕೆ ವಿದ್ಯುತ್‌ ಪೂರೈಸಲು ಸರ್ಕಾರ ₹42 ಕೋಟಿ ರೂಗಳನ್ನು ಖರ್ಚು ಮಾಡುತ್ತಿದೆ. ಆದರೆ, ಹಾಡಿಗಳಿಗೆ ವಿದ್ಯುತ್‌ ಪೂರೈಕೆ ಮಾಡಲು ಜಿಲ್ಲೆಯ ಹೆಚ್ಚಿನ ಭೂ ಪ್ರದೇಶ ಅರಣ್ಯ ಇಲಾಖೆಗೆ ಸೇರಿರುವುದು ದೊಡ್ಡ ಸವಾಲಾಗಿದೆ. ಅದನ್ನು ಸರಿಪಡಿಸಲು ಅಗತ್ಯ ಕ್ರಮ ವಹಿಸಲಾಗುವುದು” ಎಂದರು.

” ಜಿಲ್ಲೆಯ ಶೇ.52ರಷ್ಟು ಭೂ ಪ್ರದೇಶ ಅರಣ್ಯದಿಂದ ಕೂಡಿರುವ ಕಾರಣ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಯಾಗುತ್ತಿದೆ. ಹೀಗಾಗಿ, ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಅರಣ್ಯ ಇಲಾಖೆ ವತಿಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕಿದೆ. ಆದರೂ, ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಪಾಲಾರ್ ಹಾಡಿಗೆ ವಿದ್ಯುತ್ ಸಂಪರ್ಕ ನೀಡಿರುವುದು ನಮಗೆ ಸಿಕ್ಕಿರುವ ದೊಡ್ಡ ಯಶಸ್ಸು. ಈಗ ಉಳಿದ ಹಾಡಿಗಳಿಗೂ ವಿದ್ಯುತ್‌ ಪೂರೈಕೆ ಮಾಡುವ ನಿಟ್ಟಿನಲ್ಲಿ ಮುಂದಿನ ಕ್ರಮವನ್ನು ಕೈಗೊಳ್ಳಬೇಕಿದೆ. ಇದಕ್ಕಾಗಿ ಮುಂದಿನ ಮೂರು ತಿಂಗಳಲ್ಲಿ ಯೋಜನೆಯನ್ನು ಪೂರ್ಣಗೊಳಸಬೇಕಿದ್ದು, ಇದಕ್ಕಾಗಿ ಜಿಲ್ಲಾಡಳಿತದಿಂದ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು”, ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು | ಜಿಲ್ಲೆಯ ಇಂದೂಧರ ಹೊನ್ನಾಪುರ, ಹರಿಹರ ಆನಂದ ಸ್ವಾಮಿ ಸೇರಿದಂತೆ 15 ಮಂದಿ ಸಾಧಕರಿಗೆ ‘ ಅಂಬೇಡ್ಕರ್ ಪ್ರಶಸ್ತಿ ‘

ಸಭೆಯಲ್ಲಿ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಮುನಿ ಗೋಪಾಲ್ ರಾಜು, ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ, ಮುಖ್ಯ ಪ್ರಧಾನ ವ್ಯವಸ್ಥಾಪಕಿ ಶರಣಮ್ಮ ಎಸ್‌. ಜಂಗಿನ್‌, ಪ್ರಧಾನ ವ್ಯವಸ್ಥಾಪಕಿ ಬಿ.ಆರ್. ರೂಪ‌, ಮುಖ್ಯ ಪ್ರಧಾನ ವ್ಯವಸ್ಥಾಪಕಿ ಲಿಂಗರಾಜಮ್ಮ, ಪ್ರಧಾನ ವ್ಯವಸ್ಥಾಪಕ ಎಲ್‌. ಲೋಕೇಶ್‌, ಚಾಮರಾಜನಗರ-ಕೊಡಗು ಜಿಲ್ಲೆಗಳ ಅಧೀಕ್ಷಕ ಇಂಜಿನಿಯರ್‌ ಸೋಮಶೇಖರ್‌ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X