ಕೈಗಾರಿಕೆಗಳ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ವತಿಯಿಂದ ಜೂನ್ 22 ರಂದು ಕರ್ನಾಟಕ ಬಂದ್ಗೆ ಕರೆ ನೀಡಿದ್ದನ್ನು ಹಿಂಪಡೆಯಲಾಗಿದೆ ಎಂದು ರಾಯಚೂರು ಜಿಲ್ಲಾ ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ತ್ರಿವಿಕ್ರಮ್ ಜೋಶಿ ಹೇಳಿದರು.
ರಾಯಚೂರು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಫೆಡರೇಷನ್ ಆಫ್ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಿಗೆ ದೂರವಾಣಿ ಮೂಲಕ ಕರೆ ಮಾಡಿ 23 ರಂದು ನಿಮ್ಮ ಬೇಡಿಕೆ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಭೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ ಎಂದರು.
ಸಿಎಂ ಕರೆ ಮಾಡಿ ಸಭೆ ಕರೆದಿರುವ ಹಿನ್ನೆಲೆ ಜೂನ್ 22 ರಂದು ಒಂದು ದಿನ ಕರ್ನಾಟಕ ಬಂದ್ಗೆ ಕರೆಯನ್ನು ಹಿಂಪಡೆಯಲಾಗಿದೆ. ಸಭೆಯಲ್ಲಿ ಏನು ನಿರ್ಣಯ ತೆಗೆದುಕೊಳ್ಳುತ್ತಾರೆ ಎಂಬುದು ನೋಡಿ ಹೋರಾಟ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.
ಸುದ್ದಿ ಗೋಷ್ಠಿಯಲ್ಲಿ ವಿ ಲಕ್ಷ್ಮೀರೆಡ್ಡಿ ಹಾಗೂ ಇತರರು ಇದ್ದರು.
ಈ ಸುದ್ದಿ ಓದಿದ್ದೀರಾ? ಇದ್ರೀಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ; ಸಿಎಂ ವಿರುದ್ಧ ಆರೋಪಿ ಪುನೀತ್ ಕೆರೆಹಳ್ಳಿ ವಾಗ್ದಾಳಿ