ಮೈಸೂರಿನ ಅರಮನೆ ಮುಂಭಾಗದ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಯೋಗ ಸಮಿತಿಯಿಂದ 11 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.
ಮೈಸೂರು ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್. ಸಿ. ಮಹದೇವಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಯೋಗ ಪಟುಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ವಿದೇಶಿಗರು ಸೇರಿದಂತೆ ಸಾವಿರಾರು ಮಂದಿ ಯೋಗಾಸಕ್ತರು ಭಾಗಿಯಾಗಿದ್ದರು.

ಮೈಸೂರು ಭಾರತದ ಯೋಗಾ ರಾಜಧಾನಿ ಎಂದೇ ಮಹತ್ವ ಪಡೆದಿದ್ದು. ಯೋಗ ಕಲಿಕೆಗೆ ವಿದೇಶದಿಂದಲೂ ಬರುವವರ ಸಂಖ್ಯೆ ಹೆಚ್ಚಿದ್ದು ಪ್ರವಾಸೋಧ್ಯಮಕ್ಕೆ ನೆರವಾಗಿದೆ. ಜಿಲ್ಲಾಡಳಿತ ಹತ್ತು ಸಾವಿರ ಜನ ಭಾಗವಹಿಸಲು ವ್ಯವಸ್ಥೆಗೊಳಿಸಿತ್ತು.
ಈ ಸುದ್ದಿ ಓದಿದ್ದೀರಾ? ಮೈಸೂರು | ಮನರೇಗಾ ಯೋಜನೆಯಡಿ ಪ್ರಗತಿ ಸಾಧಿಸಿ : ಸಿಇಓ ಎಸ್. ಯುಕೇಶ್ ಕುಮಾರ್

ಸಂಸದ ಯದುವೀರ್, ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ, ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಸಿಇಓ ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ, ಅಪರ ಜಿಲ್ಲಾಧಿಕಾರಿ ಶಿವರಾಜು, ಪಾಲಿಕೆ ಆಯುಕ್ತ ಶೇಕ್ ತನ್ವಿರ್ ಆಸೀಫ್ ಸೇರಿದಂತೆ ಹಲವರು ಇದ್ದರು.