ಮೈಸೂರು | ಜೈವಿಕ – ವೈದ್ಯಕೀಯ ತ್ಯಾಜ್ಯ ನಿರ್ವಹಣಾ ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಒತ್ತು : ಶೈಖ್ ತನ್ವಿರ್ ಆಸೀಫ್

Date:

Advertisements

ಪರಿಸರ ಸುರಕ್ಷತೆ ಮತ್ತು ಸಾರ್ವಜನಿಕ ಆರೋಗ್ಯವನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರು ನಗರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಆಸ್ಪತ್ರೆಗಳು, ಚಿಕಿತ್ಸಾಲಯಗಳು ಮತ್ತು ಪ್ರಯೋಗಾಲಯಗಳ ಪ್ರತಿನಿಧಿಗಳೊಂದಿಗೆ ಮೈಸೂರಿನ ಮಹಾನಗರ ಪಾಲಿಕೆಯ ವಲಯ ಕಚೇರಿ -3 ರ ಸಭಾಂಗಣದಲ್ಲಿ ಸಭೆ ನಡೆಸಿ ಜೈವಿಕ – ವೈದ್ಯಕೀಯ ತ್ಯಾಜ್ಯ ನಿರ್ವಹಣಾ ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಒತ್ತು ನೀಡುವಂತೆ ಪಾಲಿಕೆ ಆಯುಕ್ತರಾದ ಶೈಖ್ ತನ್ವಿರ್ ಆಸೀಫ್ ತಾಕೀತು ಮಾಡಿದರು.

ಜೈವಿಕ-ವೈದ್ಯಕೀಯ ತ್ಯಾಜ್ಯ ನಿರ್ವಹಣಾ ನಿಯಮಗಳು, 2016 (ಬಿಎಂಡಬ್ಲ್ಯೂ ನಿಯಮಗಳು 2016) ಪರಿಣಾಮಕಾರಿ ಅನುಷ್ಠಾನದ ಕುರಿತು ಚರ್ಚಿಸುವುದು ಸಭೆಯ ಕಾರ್ಯಸೂಚಿಯಾಗಿತ್ತು. ಸಭೆಯಲ್ಲಿ ಸ್ವಚ್ಛತಾ ಕಾರ್ಮಿಕರು ಸಾರ್ವಜನಿಕ ಆರೋಗ್ಯ ಮತ್ತು ಪರಿಸರಕ್ಕೆ ಗಮನಾರ್ಹ ಅಪಾಯವನ್ನುಂಟುಮಾಡುವ ಜೈವಿಕ – ವೈದ್ಯಕೀಯ ತ್ಯಾಜ್ಯವನ್ನು ಪ್ರತಿನಿತ್ಯ ಉತ್ಪತಿಯಾಗುವ ಘನ ತ್ಯಾಜ್ಯದೊಂದಿಗೆ ಮಿಶ್ರಣ ಮಾಡುತ್ತಿರುವ ನಿರಂತರ ಅಭ್ಯಾಸದ ಬಗ್ಗೆ ಆಯುಕ್ತರಾದ ಶೈಖ್ ತನ್ವಿರ್ ಆಸೀಫ್ ಗಂಭೀರ ಕಳವಳ ವ್ಯಕ್ತಪಡಿಸಿದರು.

ಜೈವಿಕ – ವೈದ್ಯಕೀಯ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಬೇರ್ಪಡಿಸಲು , ಸಂಗ್ರಹಿಸಲು ಮತ್ತು ವಿಲೇವಾರಿ ಮಾಡಲು ಎಲ್ಲಾ ಆರೋಗ್ಯ ಸಂಸ್ಥೆಗಳು ಬಿಎಂಡಬ್ಲ್ಯೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಒತ್ತಾಯಿಸಿದರು. ಹಾಗೂ ಇದನ್ನು ಕಟ್ಟುನಿಟ್ಟಾಗಿ ನಿರ್ವಹಿಸಲು ಸೆಪ್ಟೆಂಬರ್.1ರಿಂದ 2025 ರ ವರೆಗೆ ಗಡುವನ್ನು ನಿಗಧಿಪಡಿಸಿದರು. ಈ ನಿಗದಿತ ದಿನಾಂಕದ ನಂತರ ಮಾನದಂಡಗಳನ್ನು ಪಾಲಿಸಲು ವಿಫಲವಾದರೆ ಕಾನೂನಿನ ನಿಬಂಧನೆಗಳ ಪ್ರಕಾರ ಕಠಿಣ ದಂಡ ವಿಧಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು | ಲಭ್ಯವಿರುವ ಅನುದಾನವನ್ನು ನಿಯಮಾನುಸಾರ ಬಳಕೆ ಮಾಡಿ : ಡಾ ರವಿಕುಮಾರ್

ಮೈಸೂರು ಸ್ವಚ್ಛ ಮತ್ತು ಸುರಕ್ಷಿತ ನಗರವಾಗಿ ಉಳಿಯುವುದನ್ನು ಖಚಿತಪಡಿಸಿಕೊಳ್ಳಲು ಎಂಸಿಸಿ ಬದ್ಧವಾಗಿದೆ ಮತ್ತು ಈ ಗುರಿಯನ್ನು ಸಾಧಿಸಲು ಎಲ್ಲಾ ಪಾಲುದಾರರ ಸಹಕಾರ ಅವಶ್ಯವೆಂದು ತಿಳಿಸಿದರು. ಸದರಿ ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳು, ಇತರೆ ವೈದ್ಯಕೀಯ ಸಿಬ್ಬಂದಿಗಳು ಮತ್ತು ಸಂಸ್ಥೆಯವರು ಹಾಗೂ ಪಾಲಿಕೆಯ ಅಧಿಕಾರಿ ಸಿಬ್ಬಂದಿ ವರ್ಗದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X