ಮಂಗಳೂರು | ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಿಎಸ್ಆರ್ ನಿಧಿ ಬಳಕೆ ಮಾಡಿ: ಸಚಿವ ದಿನೇಶ್ ಗುಂಡೂರಾವ್

Date:

ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲೆಗಳ ಉಳಿವಿಗೆ ಸರ್ಕಾರದೊಂದಿಗೆ ಕೈಜೋಡಿಸುವ ಸಂಘ ಸಂಸ್ಥೆಗಳು, ಸಿಎಸ್ಆರ್ ನಿಧಿಗಳನ್ನ ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

- Advertisement -

ಮಂಗಳೂರಿನಲ್ಲಿ ಜಿಲ್ಲಾ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡುತ್ತಿದ್ದ ಅವರು, “ದಾನಿಗಳು, ಹಳೆ ವಿದ್ಯಾರ್ಥಿಗಳು, ಕಂಪನಿಗಳ ಸಿಎಸ್‌ಆರ್ ಅನುದಾನ ಪಡೆಯುವ ಜೊತೆಗೆ ‘ಕ್ರೌಡ್‌ ಸೋರ್ಸಿಂಗ್’, ದತ್ತು ಕಾರ್ಯಕ್ರಮ ರೂಪಿಸಬೇಕು” ಎಂದು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಜಿಲ್ಲೆಯ ಶಾಲೆಗಳು, ಅಂಗನವಾಡಿಗಳಿಗೆ ಅಗತ್ಯವಿರುವ ಬೆಂಚ್, ಹೆಚ್ಚುವರಿ ಕೊಠಡಿ, ಶೌಚಾಲಯ ಸೇರಿದಂತೆ ಮೂಲ ಸೌಕರ್ಯಗಳ ಬಗ್ಗೆ ಸೂಕ್ಷ್ಮವಾಗಿ ಅಧ್ಯಯನ ಮಾಡಿ, ವರದಿ ಸಿದ್ಧಪಡಿಸಲಾಗಿದೆ. ‘ಕ್ರೌಡ್ ಸೋರ್ಸಿಂಗ್’ ಬಗ್ಗೆ ಪೋರ್ಟಲ್ ಕೂಡ ರಚಿಸಲಾಗಿದೆ ಎಂದು ಸಭೆಯಲ್ಲಿ ಜಿಲ್ಲಾಧಿಕಾರಿ ತಿಳಿಸಿದರು. ಈ ಯೋಜನೆಗೆ ವಿದೇಶಗಳಲ್ಲಿರುವ ಜಿಲ್ಲೆಯ ಜನರನ್ನು ಸಹ ಒಳಗೊಳಿಸಿಕೊಂಡು, ರಾಯಭಾರಿಯನ್ನೂ ನೇಮಿಸಿ, ಮಾದರಿಯಾಗಿ ಮಾಡೋಣ ಎಂದು ಸಚಿವರು ಹೇಳಿದರು.

ಜಿಲ್ಲೆಯ 186 ಆರೋಗ್ಯ ಉಪಕೇಂದ್ರಗಳಲ್ಲಿ ಸ್ವಂತ ಕಟ್ಟಡ ಇಲ್ಲವಾಗಿದೆ. 73 ಕೇಂದ್ರಗಳಿಗೆ ಕಟ್ಟಡ ನಿರ್ಮಾಣಕ್ಕೆ ನಿವೇಶನ ದೊರೆತಿದ್ದು, 113 ಉಪಕೇಂದ್ರಗಳಿಗೆ ಆರೋಗ್ಯ ಇಲಾಖೆ ಜಾಗ ಹುಡುಕಾಟ ನಡೆಸುತ್ತಿದೆ. ಜಲಸಿರಿ ಯೋಜನೆ ಕಾಮಗಾರಿಯನ್ನು 2025 ಏಪ್ರಿಲ್‌ ಒಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಕೆಯುಐಡಿಎಫ್‌ಸಿ ಎಂಜಿನಿಯರ್ ಹೇಳಿದಾಗ, ‘ವಿವಿಧ ಕಾಮಗಾರಿಗಳ ಹೆಸರಿನಲ್ಲಿ ನಗರದಲ್ಲಿ ಕಾಂಕ್ರೀಟ್ ರಸ್ತೆಗಳನ್ನು ಹಾಳು ಮಾಡಲಾಗುತ್ತಿದೆ’ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಆಕ್ಷೇಪಿಸಿದರು.‌ ಜಲಸಿರಿ, ಗೇಲ್, ಮೆಸ್ಕಾಂ, ಮಹಾನಗರ ಪಾಲಿಕೆ ಅಧಿಕಾರಿಗಳ ಸಭೆ ನಡೆಸಿ, ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ನಿರ್ದೇಶನ ನೀಡಲು ಸಚಿವರು ಜಿಲ್ಲಾಧಿಕಾರಿಗೆ ಸೂಚಿಸಿದರು.

ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿದಂತೆ ಸರ್ಕಾರದ ಪಿಂಚಣಿಗೆ ಆದಾಯ ಮಿತಿ ₹30 ಸಾವಿರ ಇದ್ದು, ಬಿಪಿಎಲ್ ಕಾರ್ಡ್‌ ಪಡೆಯಲು ಆದಾಯ ಮಿತಿ ₹1.20 ಲಕ್ಷ ಇದೆ. ಪಿಂಚಣಿ ಪಡೆಯುವ ಆದಾಯ ಮಿತಿ ಬದಲಾಗಬೇಕು ಎಂದು ಐವನ್ ಡಿಸೋಜ ಹೇಳಿದಾಗ, ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಶಾಲೆಗಳ ಪರವಾನಗಿ ನವೀಕರಣಕ್ಕೆ ಸಂಬಂಧಿಸಿ, 62 ನಿಯಮಗಳನ್ನು ವಿಧಿಸಲಾಗಿದ್ದು, ಇದು ಪಾಲನೆಯಾದರೆ ಮಾತ್ರ ನವೀಕರಿಸುವುದಾಗಿ, ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳುತ್ತಾರೆ ಎಂದು ಭೋಜೇಗೌಡ ಆಕ್ಷೇಪಿಸಿದಾಗ, ನ್ಯಾಯಾಲಯದ ಆದೇಶದ ಆಧಾರದಲ್ಲಿ ಪರವಾನಗಿ ನವೀಕರಿಸಿ, ಅಗ್ನಿ ಸುರಕ್ಷೆ ಸೇರಿದಂತೆ ಎಲ್ಲ ವ್ಯವಸ್ಥೆ ಅಳವಡಿಸಿಕೊಳ್ಳುವಂತೆ ಸೂಚಿಸಬೇಕು ಎಂದು ಸಚಿವರು ಸಲಹೆ ಮಾಡಿದರು.

ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಗೆ ಸಂಬಂಧಿಸಿ ಮಹಾನಗರ ಪಾಲಿಕೆ ಕಾರ್ಯಸೂಚಿಯಲ್ಲಿ ಇಂಗ್ಲಿಷ್‌ನಲ್ಲಿ ಮಾಹಿತಿ ನೀಡಿರುವ ಬಗ್ಗೆ ಆಕ್ಷೇಪಿಸಿದ ಎಂಎಲ್‌ಸಿ ಭೋಜೇಗೌಡ, “ಕನ್ನಡ ಫಲಕ ಕಡ್ಡಾಯ ಅನುಷ್ಠಾನಗೊಳಿಸುವ ನೀವೇ ಇಂಗ್ಲಿಷ್‌ನಲ್ಲಿ ಮಾಹಿತಿ ನೀಡುತ್ತೀರಿ, ಆಡಳಿತ ಭಾಷೆಯನ್ನು ಕಡೆಗಣಿಸುವುದು ಸರಿಯಲ್ಲ” ಎಂದು ಆಯುಕ್ತರನ್ನು ತರಾಟೆಗೆ ತೆಗೆದುಕೊಂಡರು. ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸುವುದಾಗಿ ಸಚಿವರು ಭರವಸೆ ನೀಡಿದರು.

ಇದನ್ನು ಓದಿದ್ದೀರಾ? ಇನ್ಮುಂದೆ ಮೊಬೈಲ್ ಆ್ಯಪ್‌ನಲ್ಲೇ ಬಿಎಂಟಿಸಿ ಪಾಸ್ ಪಡೆಯಿರಿ!

ಸಭೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಮೆಸ್ಕಾಂ ಎಂಡಿ ಪದ್ಮಾವತಿ, ಡಿಎಫ್‍ಒ ಆ್ಯಂಟನಿ ಮರಿಯಪ್ಪ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...