ಗ್ರಾಮೀಣ ಭಾಗದ ಜನರು ಉದ್ಯೋಗ ಹಾಗೂ ಶಿಕ್ಷಣಕ್ಕಾಗಿ ನಗರಗಳತ್ತ ಮುಖ ಮಾಡುತ್ತಿರುವುದರಿಂದ ನಗರಗಳು ಬೆಳೆದು ಮೂಲಭೂತ ಸೌಕರ್ಯದ ಕೊರತೆ ಮತ್ತು ಪರಿಸರ ಮಾಲಿನ್ಯದ ಸಮಸ್ಯೆ ಉಂಟಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ.ಬಿ ಖಂಡ್ರೆ ಕಳವಳ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿಯವರು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ 50 ಲಕ್ಷ ಅನುದಾನನದಲ್ಲಿ ಪಾದಚಾರಿ ಮಾರ್ಗ ಹಾಗೂ ಬೀದಿ ದೀಪ ಉದ್ಘಾಟಿಸಿ ಮಾತನಾಡಿದ ಅವರು, “ನಗರ ಸಭೆಯ ಅಧ್ಯಕ್ಷರು ಮತ್ತು ಸದಸ್ಯರು ಪರಿಸರ ರಕ್ಷಣೆಯ ಜೊತೆಗೆ ಮೂಲಭೂತ ಸೌಕರ್ಯ ಒದಗಿಸುವ ಮೂಲಕ ಸ್ವಚ್ಚ, ಸುಂದರ ಬೀದರ ನಿರ್ಮಾಣಕ್ಕೆ ಒತ್ತು ನೀಡಬೇಕು” ಹೇಳಿದರು.
“ಈ ಹಿಂದೆ ನಾನು ಪೌರಾಡಳಿ ಖಾತೆ ಸಚಿವನಾಗಿದ್ದ ಸಂದರ್ಭದಲ್ಲಿ ಬೀದರ ನಗರದ ಅಭಿವೃದ್ದಿಗೆ ನೂರಾರು ಕೋಟಿ ರೂ.ಗಳ ಅನುದಾನ ನೀಡಿದೇನೆ. ಅದೇ ಅನುದಾನದ ಕಾಮಗಾರಿಗಳು ಇಂದಿಗೂ ನಡೆಯುತ್ತಿವೆ. ಈಗ ಮತ್ತೆ ನಾನು ರಹೀಮ್ ಖಾನ್ ಸೇರಿ ಯೋಜನೆ ಹಾಕಿಕೊಂಡಿದ್ದೇವೆ. ಈ ಯೋಜನೆಯಡಿ ಬೀದರಗೆ 10 ಕೋಟಿ ರೂ. ಹಾಗೂ ಭಾಲ್ಕಿಗೆ 10 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ. ಅಮೃತ ಯೋಜನೆಯಡಿ ಉಳಿತಾಯವಾದ 60 ಕೋಟಿ ರೂ.ಗಳ ಅನುದಾನ ಪ್ರಸ್ತಾವನೆ ಬಂದ ಹಿನ್ನೆಲೆಯಲ್ಲಿ ಬೀದರಗೆ ಮಂಜುರಾಗಿದೆ ಎಂದು ಪೌರಾಡಳಿತ ರಹೀಮ್ ಖಾನ್ ಹೇಳಿದ್ದಾರೆ” ಎಂದರು.
ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಮಾತನಾಡಿ, “ಈ ಬಡಾವಣೆಯ ನಗರಸಭೆ ಸದಸ್ಯ ಹಾಗೂ ನಿವಾಸಿಗಳ ಮನವಿಯ ಮೇರೆಗೆ ಕೆಕೆಆರ್ ಡಿಬಿಯಲ್ಲಿ ನನಗೆ ಬರುವ 50 ಲಕ್ಷ ರೂ. ಅನುದಾನದಲ್ಲಿ ಪಾದಚಾರಿ ಮಾರ್ಗ ಹಾಗೂ ಬೀದಿ ದೀಪ ಅಳವಡಿಸಿದ್ದೇನೆ. ಮುಂದಿನ ದಿನಗಳಲ್ಲಿ ಈ ಬಡಾವಣೆ ಹೆಚ್ಚಿನ ಅಭಿವೃದ್ದಿಗೆ ಅನುದಾನ ಅಗತ್ಯವಿದ್ದು ಸಚಿವರು ಸಹಕಾರ ನೀಡಬೇಕು” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ವಿದ್ಯುತ್ ಕಳವು ಪ್ರಕರಣ: ಮಾಜಿ ಸಿಎಂ ಹೆಚ್ಡಿಕೆ ವಿರುದ್ಧ ಬೆಸ್ಕಾಂನಿಂದ ಎಫ್ಐಆರ್
ಈ ಸಂದರ್ಭದಲ್ಲಿ ಬೀದರ ನಗರಸಭೆ ಅಧ್ಯಕ್ಷ ಮೊಹಮ್ಮದ ಗೌಸ್, ನಗರಸಭೆ ಸದಸ್ಯ ಪ್ರಶಾಂತ ದೊಡ್ಡಿ, ಜಿಲ್ಲಾ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಸೇರಿದಂತೆ ಬಡಾವಣೆಯ ಮುಖಂಡರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು.