ಆಹಾರ ಸಂಸ್ಕರಣಾ ಉದ್ದಿಮೆಗಳ ಯೋಜನೆಯ ಮೂಲಕ ಉದ್ಯೋಗ ಸೃಷ್ಟಿಸಬಹುದು: ಎನ್ ಚೆಲುವರಾಯಸ್ವಾಮಿ

Date:

ಉದ್ಯೋಗ ಹುಡುಕುತ್ತಿರುವ ಯುವ ರೈತರು ಆಹಾರ ಸಂಸ್ಕರಣಾ ಉದ್ದಿಮೆ ಯೋಜನೆಯನ್ನು ಅಳವಡಿಸಿಕೊಂಡು ತಾವೇ ಖುದ್ದು ಉದ್ಯೋಗ ಸೃಷ್ಟಿಸಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಹೇಳಿದರು.

- Advertisement -

ಇಂದು ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಆಹಾರ ಸಂಸ್ಕರಣಾ ಸಚಿವಾಲಯ, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ’ ಅರಿವು ಮೂಡಿಸುವ ಕಾರ್ಯಾಗಾರವನ್ನು ಗಾಣದಿಂದ ಎಣ್ಣೆ ತೆಗೆಯುವ ಮೂಲಕ ವಿನೂತನವಾಗಿ ಚಾಲನೆ ನೀಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಜಿಲ್ಲೆಯಲ್ಲಿ ಅಲ್ಪ ಪ್ರಮಾಣದಲ್ಲಿ ಬಿಟ್ಟರೆ ಉಳಿದವರೆಲ್ಲರೂ ಜಮೀನು ಹೊಂದಿದ್ದಾರೆ. ನಿಮ್ಮ ಬಳಿ ಇರುವ ಜಮೀನಿನಲ್ಲಿ 1 ಎಕರೆ ಜಾಗದಲ್ಲಿ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡು ಕಡಿಮೆ ವೆಚ್ಚದಲ್ಲಿ ಹೆಚ್ಚು ಇಳುವರಿಯನ್ನು ಪಡೆಯಬಹುದು ಎಂದರು.

ವಿದ್ಯಾಭ್ಯಾಸಕ್ಕೂ ವೃತ್ತಿಗೂ ಸಂಬಂಧವಿಲ್ಲ. ವಿದ್ಯಾಭ್ಯಾಸ ಲೋಕಜ್ಞಾನ. ಸಾಮಾನ್ಯಜ್ಞಾನ. ತಿಳುವಳಿಕೆ ಹಾಗೂ ಸಮಾಜದಲ್ಲಿ ಬದುಕುವ ರೀತಿ ಕಲಿಸುತ್ತದೆ. ಉನ್ನತ ವಿದ್ಯಾಭ್ಯಾಸ ಮಾಡಿರುವ ಕಾರಣಕ್ಕೆ ಉನ್ನತ ಕೆಲಸಗಳನ್ನೇ ಮಾಡಬೇಕು ಎಂಬ ಮನೋಭಾವನೆಯಿಂದ ಯುವಕರು ಹೊರ ಬರಬೇಕು. ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಯೋಜನೆಯಡಿ ನೀವೇನಾದರೂ ಉದ್ದಿಮೆ ಪ್ರಾರಂಭಿಸಿದರೆ ಲಾಭ ಗಳಿಸಬಹುದು ಎಂದರು.

WhatsApp Image 2025 07 23 at 3.38.51 PM

ಸರ್ಕಾರ 6000 ಆಹಾರ ಸಂಸ್ಕರಣಾ ಉದ್ದಿಮೆಗಳನ್ನು ಸ್ಥಾಪಿಸಬೇಕೆಂದು ತೀರ್ಮಾನಿಸಿದೆ. ಪಿ.ಎಮ್.ಎಫ್.ಎಮ್.ಇ. ಯೋಜನೆಯಡಿ ರೂ 15 ಲಕ್ಷದವರೆಗೂ ಸಹಾಯಧನ ಪಡೆಯಬಹುದು. ಕೇಂದ್ರ ಸರ್ಕಾರ ರೂ 6 ಲಕ್ಷ ಮತ್ತು ರಾಜ್ಯ ಸರ್ಕಾರ 9 ಲಕ್ಷ ರೂಪಾಯಿಗಳನ್ನ ಸಬ್ಸಿಡಿ ರೂಪದಲ್ಲಿ ನೀಡಲಾಗುತ್ತದೆ. ಆಹಾರ ಸಂಸ್ಕರಣಾ ಉದ್ದಿಮೆಗಳ ಯೋಜನೆಯಡಿ ಸಾಲ ಹಾಗೂ ಸಬ್ಸಿಡಿ ನೀಡುವಲ್ಲಿ ಜಿಲ್ಲೆ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದೆ. ವಂಶಪಾರಂಪರ್ಯವಾಗಿ ಮಾಡಿಕೊಂಡು ಬಂದಿರುವ ಕೃಷಿ ಪದ್ಧತಿಯ ಜೊತೆಗೆ ಕನಿಷ್ಠ ಒಂದು ಎಕರೆಯಲ್ಲಾದರು ಕೃಷಿ ವಿಜ್ಞಾನಿಗಳು ಹಾಗೂ ಕೃಷಿ ಅಧಿಕಾರಿ ಸಲಹೆ ಪಡೆದು ಸಮಗ್ರ ಕೃಷಿ ಬೆಳೆದು ನೋಡಿ ಕಡಿಮೆ ವೆಚ್ಚದಲ್ಲಿ ಅಧಿಕ ಇಳುವರಿ ತೆಗೆಯಬಹುದು ಎಂದರು.

ರಾಷ್ಟ್ರದ ಎಲ್ಲಾ ರಾಜ್ಯಗಳಿಗಿಂತಲ್ಲೂ ಕರ್ನಾಟಕ ರಾಜ್ಯ ಕೃಷಿ ಇಲಾಖೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಕೇಂದ್ರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ನಮ್ಮ ಸರ್ಕಾರದ ಕೆಲಸವನ್ನು ಶ್ಲಾಘಿಸಿದ್ದಾರೆ. ಆಹಾರ ಸಂಸ್ಕರಣಾ ಉದ್ದಿಮೆಗಳ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಂಡರೆ ಪ್ರತಿ ತಿಂಗಳಿಗೆ ಕನಿಷ್ಠ 50 ಸಾವಿರದಿಂದ 1 ಲಕ್ಷದ ವರೆಗೂ ಆದಾಯ ಗಳಿಸಬಹುದು ಎಂದು ತಿಳಿಸಿದರು.

ಸಮಗ್ರ ಕೃಷಿ ಪದ್ಧತಿಯಲ್ಲಿ ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಕೃಷಿಯಿಂದ ಉತ್ತಮ ಲಾಭಗಳಿಸಬಹುದು. ಮುಂದಿನ ದಿನಗಳಲ್ಲಿ ಮಂಡ್ಯ ಕೃಷಿ ವಿಶ್ವವಿದ್ಯಾಲಯದ ಮಹತ್ವದ ಕುರಿತು ನಿಮಗೆ ಅರ್ಥವಾಗುತ್ತದೆ. ಜಿಲ್ಲೆಯ ಯುವಕರು ಸ್ವಾವಲಂಬಿಗಳಾಗಬೇಕು ಹಾಗೂ ಜಿಲ್ಲೆಯ ಎಲ್ಲ ಕುಟುಂಬಗಳು ಆರ್ಥಿಕವಾಗಿ ಸಧೃಡರಾಗಬೇಕು ಎಂಬುದು ನನ್ನ ಅಭಿಲಾಷೆ ಎಂದು ಹೇಳಿದರು.

ನಂತರ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಮಾತನಾಡಿ, ನಮಗೆ ಆಹಾರ ಸಂಸ್ಕರಣಾ ಉದ್ದಿಮೆ ಹೊಸದಲ್ಲ. ನಮ್ಮ ಪೂರ್ವಜರು ಇದನ್ನು ಮಾಡುತ್ತಿದ್ದರು ಆದರೆ ಕಾಲಾಂತರದಿಂದಾಗಿ ಆಹಾರ ಸಂಸ್ಕರಣೆಯ ಕುರಿತಾಗಿ ನಮ್ಮ ಪೀಳಿಗೆ ಆಸಕ್ತಿ ಕಳೆದುಕೊಂಡಿದೆ. ನಮ್ಮ ಪ್ರಾಂತ್ಯದಲ್ಲಿ ಬೆಳೆಯಬಹುದಾದ ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ಬಳಸಿಕೊಂಡು ಸಂಸ್ಕರಣೆ ಮತ್ತು ಬ್ರಾಂಡಿಂಗ್ ಮಾಡುವುದರ ಮೂಲಕ ಮಾರಾಟ ಮಾಡಿದರೆ ಹೆಚ್ಚಿನ ಮಟ್ಟದಲ್ಲಿ ಲಾಭ ಕಾಣಬಹುದಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ನಂದಿನಿ ಅವರು ಮಾತನಾಡಿ, ಮಂಡ್ಯ ಕೃಷಿ ಆಧಾರಿತ ಜಿಲ್ಲೆಯಾದರು ಕೃಷಿಯಿಂದ ಜಿಲ್ಲೆಯ ರೈತರು ಗಳಿಸುತ್ತಿರುವ ಆದಾಯ ತೃಪ್ತಿಕರವಾಗಿಲ್ಲ. ಭತ್ತ, ಕಬ್ಬು, ತೆಂಗು ಮೂರು ಜಿಲ್ಲೆಯ ಪ್ರಮುಖ ಬೆಳೆಯಾಗಿದೆ. ಕೃಷಿ ಪದ್ಧತಿಯಲ್ಲಿ ವೈವಿಧ್ಯತೆಯನ್ನು ಅಳವಡಿಸಿಕೊಂಡು ಬೆಳೆಗಳನ್ನು ಬೆಳೆದರೆ ಉತ್ತಮ ಆದಾಯ ಗಳಿಸಬಹುದು. ಜಿಲ್ಲೆಯ ಮಣ್ಣಿನ ಗುಣಮಟ್ಟ ಮತ್ತು ಹವಾಮಾನಕ್ಕೆ ಸರಿ ಹೊಂದುವ ಬೆಳೆಗಳನ್ನು ಬೆಳೆಯಿರಿ. ಉದಾಹರಣೆಗೆ ಬೆಣ್ಣೆ ಹಣ್ಣು ಬೆಳೆಯಲು ನಮ್ಮ ಜಿಲ್ಲೆಯ ಹವಾಮಾನ ಸೂಕ್ತವಾಗಿದೆ. ಬೆಣ್ಣೆ ಹಣ್ಣಿಗೆ ವಿದೇಶಗಳಲ್ಲಿ ಹೆಚ್ಚಿನ ಬೇಡಿಕೆ ಇದೆ ಇದನ್ನು ಅರ್ಥ ಮಾಡಿಕೊಂಡು ಬೆಳೆಗಳನ್ನು ಬೆಳೆಯಬೇಕು ಎಂದು ತಿಳಿಸಿದರು.

ನಮ್ಮ ಕೃಷಿ ಪದ್ಧತಿಯಲ್ಲಿ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು. ತೋಟಗಾರಿಕೆ ಇಲಾಖೆ, ಪಶುಸಂಗೋಪನೆ ಇಲಾಖೆ, ಕೃಷಿ ಇಲಾಖೆಯ ಸಹಾಯದ ಮೂಲಕ ಸಂಸ್ಕರಿಸಿದ ಅಹಾರ ಪದಾರ್ಥಗಳನ್ನು ಮಾರಾಟ ಮಾಡಿದರೆ ತಮ್ಮ ಬೆಳೆಗೆ ಉತ್ತಮ ಬೆಲೆ ಕಾಣಬಹುದು. ನಮ್ಮ ಬೆಳೆಗಳನ್ನು ನಾವೇ ಸಂಸ್ಕರಿಸಿ ಕಚ್ಚಾ ವಸ್ತುವನ್ನು ಸಿದ್ಧವಸ್ತು ಮಾಡಿ ಮಾರಾಟ ಮಾಡಿದರೆ ಮೂರರಿಂದ ನಾಲ್ಕು ಪಟ್ಟು ಹೆಚ್ಚಿನ ಲಾಭ ಗಳಿಸಬಹುದು. ನಮ್ಮಲ್ಲಿರುವ ಮಾರುಕಟ್ಟೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ದೇಶ ವಿದೇಶಗಳಲ್ಲಿ ನಮ್ಮ ಉತ್ಪನ್ನಗಳನ್ನು ಮಾರಾಟ ಮಾಡಿ ಲಾಭ ಗಳಿಸಬಹುದು ಎಂದು ಹೇಳಿದರು.

ನಮ್ಮ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಬೇಕು. ಆಧುನಿಕ ಯುಗದಲ್ಲಿ ಎಲ್ಲರೂ ರೆಡಿಮೇಡ್ ಫುಡ್ ಮೇಲೆ ಅವಲಂಬಿತರಾಗಿದ್ದಾರೆ. ಇದನ್ನು ರೈತರು ಸದುಪಯೋಗವನ್ನು ಪಡಿಸಿಕೊಳ್ಳಬೇಕು. ಆಹಾರ ಸಂಸ್ಕರಣಾ ಉದ್ದಿಮೆಯಿಂದ ಉದ್ಯೋಗ ಸೃಷ್ಟಿಯಾಗುತ್ತದೆ ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿವೇಶನ ಎಂದಾಕ್ಷಣ ಹೆದರಿ ಓಡುವ ಪ್ರಧಾನಿ ಮೋದಿ

ಕೃಷಿ ಜಗತ್ತಿನ ತಾಂತ್ರಿಕ ಬದಲಾವಣೆಯೊಂದಿಗೆ ನಾವು ನಮ್ಮ ಕೃಷಿ ಪದ್ಧತಿಯನ್ನು ಬದಲಾಯಿಸಿಕೊಂಡು ಮುಂದೆ ಸಾಗಬೇಕು ಇಲ್ಲವಾದರೆ ಹಿಂದೆ ಉಳಿದುಕೊಳ್ಳಬೇಕಾಗುತ್ತದೆ. ಹೊಸತನಕ್ಕೆ ನಾವೀನ್ಯತೆಗೆ ನಮ್ಮನ್ನು ನಾವು ಒಗ್ಗಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ,ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡ,ಕೆಫೆಕ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್. ಶಿವಪ್ರಕಾಶ್. ಮೈ ಶುಗರ್ ಸಕ್ಕರೆ ಕಂಪನಿಯ ಅಧ್ಯಕ್ಷ ಸಿ.ಡಿ. ಗಂಗಾಧರ್. ಜಿಲ್ಲಾಧಿಕಾರಿ ಡಾ ಕುಮಾರ. ರಾಜ್ಯ ಕೃಷಿ ಸಮಾಜದ ಅಧ್ಯಕ್ಷ ಮಂಜುನಾಥ್ ಗೌಡ. ರಾಜ್ಯ ರೈತ ಉತ್ಪಾದಕ ಸಂಸ್ಥೆಗಳು ಸಹಕಾರ ನಿಯಮಿತದ ಆಡಳಿತ ಮಂಡಳಿ ನಿರ್ದೇಶಕ ರಾಜೇಶ್. ಬೆಲ್ಲದ ನಾಡು ರೈತ ಉತ್ಪಾದಕ ಕಂಪನಿಗಳು ಒಕ್ಕೂಟದ ಅಧ್ಯಕ್ಷ ಕಾಸರವಾಡಿ ಮಹಾದೇವ್ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...