ಪೂರ್ವಿಕರ ಪರಿಸರ ಕಾಳಜಿ ನಮಗಿಂದಿಗೂ ಮಾದರಿ: ಸಿಎಂ ಸಿದ್ದರಾಮಯ್ಯ

Date:

  • ‘ಪ್ರಕೃತಿ ಮತ್ತು ಮನುಷ್ಯನ ಜೀವನ ಒಂದಕ್ಕೊಂದು ಹೊಂದಿಕೊಂಡಿದೆ: ಸಿದ್ದರಾಮಯ್ಯ’
  • ವಿಶ್ವ ಪರಿಸರ ದಿನ ಉದ್ಘಾಟಿಸಿ, ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ

ಪೂರ್ವಿಕರಿಗೆ ನಮ್ಮ ಪರಿಸರ ಮತ್ತು ಪ್ರಕೃತಿಯ ಬಗ್ಗೆ ಇದ್ದ ಕಾಳಜಿ ಅನನ್ಯ. ಒಂದು ಮರ ಕಡಿದರೆ ಮತ್ತೊಂದು ಗಿಡ ನೆಡುತ್ತಿದ್ದರು. ಆದರೆ ಈಗ ಕೇವಲ ಮರ ಕಡಿಯುವುದಾಗಿದೆ. ಇದೇ ನಮ್ಮ ಪೂರ್ವಿಕರಿಗೂ ನಮಗೂ ಇರುವ ವ್ಯತ್ಯಾಸ. ಪ್ರಕೃತಿ ಮತ್ತು ಮನುಷ್ಯನ ಜೀವನ ಒಂದಕ್ಕೊಂದು ಹೊಂದಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸೋಮವಾರ ವಿಶ್ವ ಪರಿಸರ ದಿನಾಚರಣೆ-2023 ಉದ್ಘಾಟಿಸಿ ಮತ್ತು ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, “ಪ್ರಕೃತಿಯ ಜೊತೆಗೆ ಮನುಷ್ಯ ಬದುಕಬೇಕು. ಕಾಡು ಚೆನ್ನಾಗಿದ್ದರೆ ಒಳ್ಳೆಯ ಮಳೆ, ಬೆಳೆಯಾಗಿ ಜೀವನ ಸುಗಮವಾಗುತ್ತದೆ. ನಾವು ಪ್ರಕೃತಿಯನ್ನೂ, ಭೂಮಿತಾಯಿಯನ್ನೂ ಪ್ರೀತಿಸಬೇಕು. ನಾವು ಅದನ್ನು ನಮ್ಮ ಕರ್ತವ್ಯ ಎಂದು ಭಾವಿಸಬೇಕು. ಪರಿಸರ ಉತ್ತಮವಾಗಿದ್ದರೆ, ಆರೋಗ್ಯಕರ ಜೀವನ ಸಾಧ್ಯ” ಎಂದರು.

ಪ್ರಕೃತಿ,ಭೂಮಿ ಆರೋಗ್ಯಕರವಾಗಿದ್ದರೆ ಬದುಕು ಹಸನು

“ಪರಿಸರದ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಜನರಲ್ಲಿ ಜಾಗೃತಿ ಮೂಡಿಸಲು ವಿಶ್ವದಾದ್ಯಂತ ಇಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ನಮ್ಮ ಪರಿಸರವನ್ನು ಚೊಕ್ಕಟವಾಗಿಡುವಂತಹ ಜಾಗೃತಿ ಎಲ್ಲರಲ್ಲೂ ಮೂಡಬೇಕು. ಪ್ರಕೃತಿ, ಭೂಮಿ ಆರೋಗ್ಯಕರವಾಗಿದ್ದರೆ ಮಾತ್ರ ನಮ್ಮ ಬದುಕು ಹಸನಾಗಿರುತ್ತದೆ. ಪ್ರಕೃತಿಯ ವಿಕೋಪಕ್ಕೆ ನಾವು ಒಳಗಾಗುತ್ತಿದ್ದೇವೆ. ಪ್ರಕೃತಿಯಲ್ಲಿ ಅನೇಕ ಬದಲಾವಣೆ ಕಾಣುತ್ತಿದ್ದೇವೆ. ಪ್ರಕೃತಿಯಲ್ಲಾಗುವ ಅನಾಹುತಗಳನ್ನು ತಪ್ಪಿಸಬೇಕಿದೆ” ಎಂದರು.

ನೈಸರ್ಗಿಕ ಸಂಪನ್ಮೂಲಗಳ ಹಿತಮಿತ ಬಳಕೆ ಅಗತ್ಯ

“2016ರಲ್ಲಿ ನಮ್ಮ ಸರ್ಕಾರದ ಅವಧಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇದಿಸಲಾಗಿತ್ತು. ಪ್ಲಾಸ್ಟಿಕ್ ನಿಂದ ಪ್ರಕೃತಿಗೆ ಹಾನಿಯಾಗುತ್ತದೆ. ಕೈಗಾರಿಕೆ ತ್ಯಾಜ್ಯ ವಸ್ತುಗಳು, ಪ್ಲಾಸ್ಟಿಕ್ ಬಳಕೆ, ಕಾಡು ಕಡಿಯುವುದು, ನೀರಿನ ಬಳಕೆಯನ್ನು ಪ್ರಕೃತಿಯ ಹಿತದೃಷ್ಟಿಯಿಂದ ಬಳಸುವುದನ್ನು ಕಲಿತರೆ, ನಮಗೆ ಹಾಗೂ ಪ್ರಕೃತಿಗೆ ಒಳಿತು” ಎಂದರು.

“ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿಗೆ ದಕ್ಷಿಣ ವಲಯದಿಂದ ಮಂಜುನಾಥ್ ಹೆಚ್, ಮಲೆನಾಡು ಮತ್ತು ಕರಾವಳಿ ವಲಯದ ಡಾ. ಎಂ.ಡಿ. ಸುಭಾಷ್ ಚಂದ್ರನ್, ಉತ್ತರ ವಲಯದ ಡಾ. ಎಂ.ಆರ್.ದೇಸಾಯಿ ಅವರು ಭಾಜನರಾಗಿದ್ದಾರೆ.

ಸಂಸ್ಥೆಗಳ ಪೈಕಿ ದಕ್ಷಿಣ ವಲಯದ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ, ಬೆಂಗಳೂರು, ಮಲೆನಾಡು ಮತ್ತು ಕರಾವಳಿ ವಲಯದ ಶ್ರೀ ದೇವಿರಮ್ಮ ವನಸಿರಿ ಟ್ರಸ್ಟ್ , ಹಾಸನ ಜಿಲ್ಲೆ, ಉತ್ತರ ವಲಯದ ವನಸಿರಿ ಪ್ರತಿಷ್ಠಾನ, ಸಿಂಧನೂರು ತಾಲ್ಲೂಕು, ರಾಯಚೂರು ಜಿಲ್ಲೆ ಪ್ರಶಸ್ತಿ ಪಡೆದಿವೆ.

ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜೂನ್ 16 ರಂದು ಕಸಾಪ ಆಜೀವ ಸದಸ್ಯರ ಸಭೆ : ತಾಲ್ಲೂಕು ಅಧ್ಯಕ್ಷ ಎಚ್.ಸಿ.ಯತೀಶ್.

ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಆಜೀವ ಸದಸ್ಯರ ಸಭೆಯನ್ನು ಇದೇ...

ರಾಯಚೂರು | ಹಣ ದುರ್ಬಳಕೆ ಪಿಡಿಒ ಅಮಾನತು

ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಲಿಂಗಸೂಗೂರು ತಾಲ್ಲೂಕು ಕೋಠಾ ಗ್ರಾಮ...

ಜಾತಿ ಗಣತಿ ಮರು ಸಮೀಕ್ಷೆ: ಸಚಿವ ಸಂಪುಟ ತೀರ್ಮಾನದ ಬಗ್ಗೆ ಸಿಎಂ ವಿವರಿಸಿದ್ದೇನು?

ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹತ್ತು ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ...

ವಿಜಯಪುರ | ಮಾಧ್ಯಮ ಅಕಾಡೆಮಿಯಿಂದ ಪತ್ರಿಕೋದ್ಯಮ ಪುಸ್ತಕಗಳ ರಿಯಾಯಿತಿ ಮಾರಾಟ

ಪತ್ರಿಕೋದ್ಯಮ ಹಾಗೂ ಮಾಧ್ಯಮ ಕ್ಷೇತ್ರಕ್ಕೆ ಸಂಬಂಧಿಸಿದ 40ಕ್ಕೂ ಹೆಚ್ಚು ಪುಸ್ತಕಗಳು ಕರ್ನಾಟಕ...

Download Eedina App Android / iOS

X