ಸಾಲು ಮರದ ತಿಮ್ಮಕ್ಕ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ಮುಂದುವರಿಸಿ ಸಿಎಂ ಆದೇಶ

Date:

ನಾಡೋಜ ಸಾಲು ಮರದ ತಿಮ್ಮಕ್ಕ ಅವರಿಗೆ ಈ ಹಿಂದೆ ನೀಡಲಾಗಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ಮುಂದುವರೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.

ಪರಿಸರ ರಾಯಭಾರಿಯಾಗಿಯೂ ಸಾಲು ಮರದ ತಿಮ್ಮಕ್ಕ ಅವರು ಮುಂದುವರೆಯಲಿದ್ದಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಮರಗಳನ್ನು ಬೆಳೆಸಿ ವೃಕ್ಷ ಮಾತೆ ಎಂದು ಖ್ಯಾತಿ ಹೊಂದಿರುವ ಸಾಲು ಮರದ ತಿಮ್ಮಕ್ಕ ಅವರಿಗೆ 2022ರಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರವು ಸಾಲುಮರದ ತಿಮ್ಮಕ್ಕ ಅವರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಿತ್ತು. ಜೊತೆಗೆ ಪರಿಸರ ರಾಯಭಾರಿ ಗೌರವವನ್ನೂ ನೀಡಲಾಗಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಾಲುಮರದ ತಿಮ್ಮಕ್ಕ ಪರಿಸರಕ್ಕಾಗಿ ತಮ್ಮ ಜೀವನ ಮೂಡಿಪಿಟ್ಟವರು. ಸಾಲು ಸಾಲು ಮರಗಳನ್ನು ನೆಟ್ಟು ಪರಿಸರ ಕಾಪಾಡಿದ ವೃಕ್ಷ ಮಾತೆ. ಹುಲಿಕಲ್ ಮತ್ತು ಕುದೂರಿನ ನಡುವಿನ 45 ಕಿಲೋಮೀಟರ್ ಹೆದ್ದಾರಿಯ ಉದ್ದಕ್ಕೂ 385 ಆಲದ ಮರಗಳನ್ನು ನೆಟ್ಟು ಅವುಗಳನ್ನು ಪೋಷಿಸಿದ್ದಾರೆ. ಅಲ್ಲದೇ 8 ಸಾವಿರಕ್ಕೂ ಹೆಚ್ಚು ಬೇರೆ ಬೇರೆ ಮರಗಳನ್ನು ನೆಟ್ಟು ಬೆಳೆಸಿದ್ದಾರೆ. ಪದ್ಮಶ್ರೀ, ನಾಡೋಜ ಸೇರಿ ಹಲವು ಪ್ರಶಸ್ತಿಗಳು ಇವರಿಗೆ ಲಭಿಸಿವೆ. ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪಡೆದಿರುವ ತಿಮ್ಮಕ್ಕ ಅವರನ್ನು ಸರ್ಕಾರ ಪರಿಸರ ರಾಯಭಾರಿಯನ್ನಾಗಿ ನೇಮಿಸಿತ್ತು.

ಸಂಪುಟ ದರ್ಜೆ ಸಚಿವರಿಗೆ ಸಿಗುವ ಎಲ್ಲ ಸವಲತ್ತುಗಳು ತಿಮ್ಮಕ್ಕ ಅವರಿಗೆ ಲಭಿಸಿವೆ. ವೇತನ ಮತ್ತು ಭತ್ಯೆ, ವಸತಿಗೃಹ, ಕಾರು ಸೌಲಭ್ಯಗಳು ಮುಂದುವರಿಯಲಿವೆ.

ಈ ಸುದ್ದಿ ಓದಿದ್ದೀರಾ? ನೀತಿ ಆಯೋಗದ ಸಭೆಗೆ ಹಾಜರಾಗದೆ ಕರ್ನಾಟಕಕ್ಕೆ ಸಿದ್ದರಾಮಯ್ಯ ಅವಮಾನ ಮಾಡಿದ್ದಾರೆ : ಬಿಜೆಪಿ

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಶ್ಚಿಮ ಬಂಗಾಳ| ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ; ಪೂರ್ವ ಯೋಜಿತ ಎಂದ ಮಮತಾ

ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪೋರ್ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಮೇಲೆ ಕಲ್ಲು...

ತುಮಕೂರು | ಬಿಜೆಪಿ-ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಜೆಡಿಎಸ್‌ನ ಯುವ ಮುಖಂಡ ಹೆಬ್ಬೂರಿನ ದೀಪಕ್‌ಗೌಡ ಹಾಗೂ ಬಿಜೆಪಿ ಮುಖಂಡ ನರಸೇಗೌಡ...

ಸಿದ್ದರಾಮಯ್ಯ ಸರ್ಕಾರ ನೋಡಿದ್ರೆ ನಾವೀಗ ಪಾಕಿಸ್ತಾನದಲ್ಲಿ ಇದ್ದೀವಾ ಎಂಬ ಅನುಮಾನ ಬರುತ್ತಿದೆ: ಆರ್‌ ಅಶೋಕ್‌

ಬೆಂಗಳೂರಿನಲ್ಲಿ ಜೈಶ್ರೀರಾಮ್‌ ಘೋಷಣೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಮುಸ್ಲಿಂ ಮೂಲಭೂತವಾದಿಗಳ ವಿರುದ್ಧ...

ಯಾವುದೇ ಆಮೀಷ, ಪ್ರೇರೇಪಣೆಗಳಿಗೆ ಒಳಗಾಗದೆ ಮತ ಚಲಾಯಿಸಿ: ತುಷಾರ್ ಗಿರಿನಾಥ್

ಪ್ರತಿಯೊಬ್ಬ ಯುವ ಮತದಾರರು ಚುಣಾವಣಾ ರಾಯಭಾರಿಗಳಾಗಿದ್ದು, ಯಾವುದೇ ಆಮೀಷ, ಪ್ರೇರೇಪಣೆಗಳಿಗೆ ಒಳಗಾಗದೆ...