ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ : ದಾದಿಯರ ಅಹೋರಾತ್ರಿ ಪ್ರತಿಭಟನೆ

Date:

ನಾನಾ ಬೇಡಿಕೆಗಳ ಈಡೇರಿಕೆಗಾಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ 8 ಸಾವಿರ ದಾದಿಯರು ಮೂರು ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

- Advertisement -

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸ್ಟಾಫ್ ನರ್ಸ್‌ಗಳು ಹಲವು ವರ್ಷಗಳಿಂದಲೂ ಪ್ರತಿಭಟನೆ ನಡೆಸಿದರೂ ಕೂಡ ಸರ್ಕಾರ ಅವರ ಬೇಡಿಕೆಗಳಿಗೆ ಸರಿಯಾಗಿ ಸ್ಪಂದಿಸಿಲ್ಲ. ಈ ಹಿನ್ನೆಲೆ, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಪ್ರತಿಭಟನಾಕಾರರು ಪಟ್ಟನ್ನು ಹಿಡಿದಿದ್ದಾರೆ. ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಕರ್ನಾಟಕ ರಾಜ್ಯ ಗುತ್ತಿಗೆ ಶುಶ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಈ ಪ್ರತಿಭಟನೆ ಆಯೋಜನೆ ಮಾಡಲಾಗಿದೆ. ಹಲವು ಬೇಡಿಕೆಗಳನ್ನ ಮುಂದಿಟ್ಟು ಪ್ರತಿಭಟನಾಕಾರರು ಧರಣಿ ನಡೆಸುತ್ತಿದ್ದಾರೆ.

ಶುಶ್ರೂಷಾಧಿಕಾರಿತಾಲ್ಲೂಕು, ಜಿಲ್ಲಾ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸ್ಟಾಫ್ ನರ್ಸ್​ಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ ರಾಜ್ಯದ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆಯಲ್ಲಿ ವ್ಯತ್ಯಯವಾಗಿದೆ. ರೋಗಿಗಳು ಕೂಡ ಸಮಸ್ಯೆಯನ್ನ ಅನುಭವಿಸುವಂತಾಗುತ್ತಿದೆ. ಕಳೆದ ಮೂರು ದಿನದಿಂದ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದರೂ ಕೂಡ ಸರ್ಕಾರ ಇಲ್ಲಿಯವರೆಗೆ ಸ್ಪಂದಿಸಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಘದ ರಾಜ್ಯ ಘಟಕದ ಅಧ್ಯಕ್ಷೆ ರಾಧಾ ಸುರೇಶ್ ಪಿ.ಎನ್‌ ಈ ದಿನ.ಕಾಮ್‌ ಜತೆಗೆ ಮಾತನಾಡಿ, “ಸುಪ್ರೀಂ ಕೋರ್ಟ್ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನಿಗದಿಪಡಿಸಬೇಕು. ಈಗ ನಮಗೆ ₹15 ಸಾವಿರ ವೇತನ ನಿಗದಿಪಡಿಸಲಾಗಿದೆ. ಇಂದಿನ ಬೆಲೆ ಏರಿಕೆ ಪರಿಸ್ಥಿತಿಯಲ್ಲಿ ಈ ಹಣದಲ್ಲಿ ಜೀವನ ನಿರ್ವಹಣೆ ಕಷ್ಟವಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಶುಶ್ರೂಷಾಧಿಕಾರಿಗಳಿಗೆ ನಿಗದಿಪಡಿಸಿರುವ ವೇತನವನ್ನು ನಮಗೂ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

“ನೇರ ನೇಮಕಾತಿಯ ಸಂದರ್ಭದಲ್ಲಿ ಜೇಷ್ಠತೆಯ ಆಧಾರದ ಮೇಲೆ ಕೃಪಾಂಕ ಮತ್ತು ವಯೋಮಿತಿ ಸಡಿಲಿಕೆ ನೀಡಬೇಕು. ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ವರ್ಗಾವಣೆ ಸೌಲಭ್ಯ ಕಲ್ಪಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಸಂಘದ ಉಪಾಧ್ಯಕ್ಷ ಸಂಗಮೇಶ್ ಮಾತನಾಡಿ, “15 ವರ್ಷಗಳಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್‌ಎಚ್ಎಮ್) ಅಡಿಯಲ್ಲಿ ಶುಶ್ರೂಷಾಧಿಕಾರಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದೇನೆ. ಬೇರೆ ಬೇರೆ ರಾಜ್ಯಗಳಲ್ಲಿ ಮಾಡಿದ ಹಾಗೇ ನಮ್ಮನ್ನು ಕೂಡ ಕಾಯಂ ಮಾಡಬೇಕು. ಕಾಯಂ ಪ್ರೋಸೆಸ್ ಮುಗಿಯುವವರೆಗೂ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಾನಾ ಆಯಾಮಗಳಲ್ಲಿ ಚಾಚಿಕೊಂಡ ಪ್ರವಾಹ ರೂಪದ ವ್ಯಕ್ತಿ ʼಋತ್ವಿಕ್ ಘಟಕ್ʼ

“ನಮಗೆ ಮೂಲವೇತನ ನೀಡಬೇಕು. ಒಂದು ವಾರ್ಡ್‌ನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ನರ್ಸ್‌ಗಳು ಕೆಲಸ ಮಾಡುತ್ತಾರೆ. ಆರೋಗ್ಯ ಇಲಾಖೆಯವರು ಕೂಡ ಅದೇ ವಾರ್ಡ್‌ನಲ್ಲಿ ಅದೇ ಕೆಲಸವನ್ನ ಮಾಡುತ್ತೇವೆ. ಆದರೆ, ಅವರಿಗೆ ಮಾತ್ರ ಮೂಲ ವೇತನ ನೀಡುತ್ತಾರೆ. ನಮಗೆ 15ರಿಂದ 16 ಸಾವಿರ ಮಾತ್ರ ವೇತನ ನೀಡುತ್ತಿದ್ದಾರೆ. ನಾವು ಮಾಡಿರುವ ಸೇವೆಗಾದರೂ ಬೆಲೆ ನೀಡಿ” ಎಂದು ಕೇಳಿದ್ದಾರೆ.

“ಈ ಹಿಂದೆ ಕಾಂಗ್ರೆಸ್ ನಾಯಕರು ನಾವು ಅಧಿಕಾರಕ್ಕೆ ಬಂದರೆ, ನಿಮ್ಮ ಬೇಡಿಕೆಗಳನ್ನ ಈಡೇರಿಸುತ್ತೇವೆ ಎಂದು ಹೇಳಿದ್ದರು. ಆದರೆ, ಈಗ ನೋಡಿದರೇ, ಮಾಡೋಣ, ನೋಡೋಣ ಎಂದು ಹೇಳುತ್ತಿದ್ದಾರೆ. ಅವರು ಬಂದು ನಮ್ಮ ಬೇಡಿಕೆ ಈಡೇರಿಸುವವರೆಗೂ ನಾವು ಈ ಜಾಗ ಬಿಟ್ಟು ಹೋಗುವುದಿಲ್ಲ. ಕಳೆದ ಮೂರು ದಿನದಿಂದ 8 ಸಾವಿರ ನರ್ಸ್‌ಗಳು ಪ್ರತಿಭಟನೆ ಮಾಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಚನ್ನಕೇಶವ ದೇಗುಲದ ಸುತ್ತ ತಳ್ಳುಗಾಡಿ ತೆರವಿಗೆ ಸಾರ್ವಜನಿಕರ ಒತ್ತಾಯ 

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬೇಲೂರಿನ ವಿಶ್ವವಿಖ್ಯಾತ ಚನ್ನಕೇಶವ ಸ್ವಾಮಿ ದೇಗುಲದ...

ಚಿಕ್ಕಮಗಳೂರು | ಏಷ್ಯನ್ ಗೇಮ್ಸ್: ಕಂಚಿನ ಪದಕ ಗೆದ್ದ ಸ್ನೇಹ ಎಸ್. ಎಸ್ ಗೆ ಟಿ.ಡಿ ರಾಜೇಗೌಡ ಅಭಿನಂದಿಸಿದ್ದಾರೆ 

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 2026ರ ಏಷ್ಯನ್ ಗೇಮ್ಸ್‌ನ ಮಿಶ್ರ 4x100...

ಬಾಗಲಕೋಟೆ | ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.2 ಮೀಸಲಾತಿ ಸ್ವಾಗತಾರ್ಹ: ಮುತ್ತಣ್ಣ ಮೇತ್ರಿ

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಗಳ ನೇಮಕಾತಿಯಲ್ಲಿ ಶೇ.2ರಷ್ಟು...

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ...