ತುಮಕೂರು ನಗರ ವಿಧಾನ ಸಭಾ ಕ್ಷೇತ್ರದಲ್ಲಿ 12 ಹೊಸ ಮತಗಟ್ಟೆ ಸ್ಥಾಪನೆ : ಆಯೋಗಕ್ಕೆ ಪ್ರಸ್ತಾವನೆ –ಎಡಿಸಿ

Date:

Advertisements

ತುಮಕೂರು ಜಿಲ್ಲೆಯ ವ್ಯಾಪ್ತಿಗೊಳಪಡುವ ತುಮಕೂರು ನಗರ ವಿಧಾನ ಸಭಾ ಕ್ಷೇತ್ರದಲ್ಲಿ ಹೊಸದಾಗಿ 12 ಮತಗಟ್ಟೆ ಸ್ಥಾಪನೆ ಮಾಡಲು ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದೆಂದು ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಗಮನಕ್ಕೆ ತಂದರು.

ತಮ್ಮ ಕೊಠಡಿಯಲ್ಲಿ ಸೋಮವಾರ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ತುಮಕೂರು ನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಹೊಸದಾಗಿ 12 ಮತಗಟ್ಟೆಗಳನ್ನು ಸ್ಥಾಪಿಸಲು ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಹೊಸ ಮತಗಟ್ಟೆಗಳ ವಿವರ :
ನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2 ಕಿ.ಮೀ.ಗಿಂತ ಹೆಚ್ಚು ದೂರವಿರುವ ಮತಗಟ್ಟೆ ಹಾಗೂ 1500ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಹೊಸದಾಗಿ ಮತಗಟ್ಟೆಗಳನ್ನು ಸ್ಥಾಪಿಸಲು ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದ್ದು, ನಗರ ವ್ಯಾಪ್ತಿಯ 2 ಕಿ.ಮೀ.ಗಿಂತ ಹೆಚ್ಚು ದೂರವಿರುವ ಎಸ್.ಎನ್.ಪಾಳ್ಯದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ(ಮತಗಟ್ಟೆ ಸಂಖ್ಯೆ-4ಎ) ; 1500ಕ್ಕೂ ಹೆಚ್ಚು ಮತದಾರರಿರುವ ಅಂತರಸನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ(ಮತಗಟ್ಟೆ ಸಂಖ್ಯೆ-9ಎ), ಶಿರಾಗೇಟ್ ಉತ್ತರ ಬಡಾವಣೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆ(13ಎ), ಅಗ್ರಹಾರ ಶಿಶುವಿಹಾರ ಆವರಣ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆ(30ಎ), ಗಾಂಧಿನಗರದ ವಿದ್ಯೋದಯ ಕಾನೂನು ಕಾಲೇಜು(73ಎ), ಚಾಂದನಿ ಚೌಕ ಭಾರತ ಮಾತಾ ಆಂಗ್ಲ ಹಿರಿಯ ಪ್ರಾಥಮಿಕ ಪಾಠಶಾಲೆ(83ಎ), ಭೈರವೇಶ್ವರ ಪದವಿ ಪೂರ್ವ ಕಾಲೇಜು(122ಎ), ಉಪ್ಪಾರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ(158ಎ), ಸರಸ್ವತಿ ಪುರಂ ವಿದ್ಯಾನಿಕೇತನ ಹಿರಿಯ ಪ್ರಾಥಮಿಕ ಪಾಠಶಾಲೆ(160ಎ), ಮರಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ(164ಎ), ಮರಳೂರು ಮಾವಿನತೋಪು ಅಂಕಿತ ಕಿರಿಯ ಪ್ರಾಥಮಿಕ ಪಾಠಶಾಲೆ(165ಎ), ಬಡ್ಡಿಹಳ್ಳಿ ಎಸ್.ಆರ್.ಎಸ್. ಹಿರಿಯ ಪ್ರಾಥಮಿಕ ಪಾಠಶಾಲೆ(220ಎ) ಸೇರಿ ಹೊಸದಾಗಿ 12 ಮತಗಟ್ಟೆಗಳನ್ನು ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸಲಾಗುವುದೆಂದು ಸಭೆಗೆ ಮಾಹಿತಿ ನೀಡಿದರು.

Advertisements

ಅಲ್ಲದೆ ಶಿಥಿಲವಾಗಿರುವ ಕಟ್ಟಡ, ಅಗತ್ಯ ಮೂಲಭೂತ ಸೌಕರ್ಯಗಳಿಲ್ಲದ 129-ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ 2, 132-ತುಮಕೂರು ನಗರ ವಿ.ಸ.ಕ್ಷೇತ್ರದಲ್ಲಿ 4 ಹಾಗೂ 138-ಮಧುಗಿರಿ ವಿ.ಸ.ಕ್ಷೇತ್ರದಲ್ಲಿ 1 ಸೇರಿದಂತೆ ಒಟ್ಟು 7 ಮತಗಟ್ಟೆಗಳನ್ನು ಸ್ಥಳಾಂತರಿಸಲು ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ :
ಪ್ರತಿ ವರ್ಷದಂತೆ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗಾಗಿ ಆಯಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಈಗಾಗಲೇ ಕಳೆದ ಆಗಸ್ಟ್ 20 ರಿಂದ ಮನೆ-ಮನೆ ಸಮೀಕ್ಷೆ ಕೈಗೊಂಡಿದ್ದು, ಶೇ. 98ರಷ್ಟು ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. ಸಮೀಕ್ಷೆಯಲ್ಲಿ 1500ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆ, ಸ್ಥಳಾಂತರಗೊಳಿಸಲು ಉದ್ದೇಶಿಸಿರುವ ಮತಗಟ್ಟೆಗಳನ್ನು ಗುರುತಿಸಲಾಗಿದೆಯಲ್ಲದೆ ದಿನಾಂಕ: 1-1-2025ನ್ನು ಅರ್ಹತಾ ದಿನಾಂಕವೆAದು ಪರಿಗಣಿಸಿ ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ, ತೆಗೆದು ಹಾಕುವುದು, ತಿದ್ದುಪಡಿ ಸೇರಿದಂತೆ ಪರಿಷ್ಕರಣೆ ಕಾರ್ಯ ನಡೆಸಲಾಗಿದೆ ಎಂದು ತಿಳಿಸಿದರು.

ಆಯೋಗದ ವೇಳಾಪಟ್ಟಿಯಂತೆ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಅಕ್ಟೋಬರ್ 29ರಂದು ಪ್ರಕಟಿಸಲಾಗುವುದು. ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ ಅಕ್ಟೋಬರ್ 29 ರಿಂದ ನವೆಂಬರ್ 28ರವರೆಗೂ ಅವಕಾಶ ನೀಡಲಾಗುವುದು. ಸ್ವೀಕೃತ ಹಕ್ಕು ಮತ್ತು ಆಕ್ಷೇಪಣೆಗಳನ್ನು ಡಿಸೆಂಬರ್ 24ರೊಳಗಾಗಿ ವಿಲೇವಾರಿ ಮಾಡಲಾಗುವುದು. ನಂತರ 2025ರ ಜನವರಿ 6ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಚುನಾವಣಾ ತಹಶೀಲ್ದಾರ್ ರೇಷ್ಮ, ಮಹಾನಗರಪಾಲಿಕೆ ಉಪ ಆಯುಕ್ತ(ಆಡಳಿತ) ಗಿರೀಶ್, ಉಪ ಆಯುಕ್ತ(ಕಂದಾಯ) ರುದ್ರಮುನಿ, ತಿಪಟೂರು ತಾಲ್ಲೂಕು ತಹಸೀಲ್ದಾರ್ ಎನ್. ಪವನ್ ಕುಮಾರ್, ಮಧುಗಿರಿ ತಾಲ್ಲೂಕು ತಹಸೀಲ್ದಾರ್ ಶಿರಿನ್ ತಾಜ್ ಸೇರಿದಂತೆ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ...

ಕೋಲಾರ | 9 ತಿಂಗಳಿನಿಂದ ವೇತನ ಸಿಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹೊರಗುತ್ತಿಗೆ ಕಾರ್ಮಿಕರು

ಕೋಲಾರ ನಗರಸಭೆಯಲ್ಲಿ ಕೆಲಸ ಮಾಡುವ 74 ಮಂದಿ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ...

ಬೀದರ್‌ | ವಚನ ಸಾಹಿತ್ಯ, ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠದ ಕೊಡುಗೆ ಅನನ್ಯ : ಪುರಷೋತ್ತಮ ಬಿಳಿಮಲೆ

ಗಡಿಭಾಗದಲ್ಲಿ ವಚನ ಸಾಹಿತ್ಯ ಮತ್ತು ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠ...

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

Download Eedina App Android / iOS

X