ತುಮಕೂರು ಜಿಲ್ಲೆಯಲ್ಲಿ 4 ಶೇಂಗಾ ಖರೀದಿ ಕೇಂದ್ರ ಸ್ಥಾಪನೆ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

Date:

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಶೇಂಗಾ ಖರೀದಿಸಲು ಜಿಲ್ಲೆಯ ಶಿರಾ, ತುಮಕೂರು, ಪಾವಗಡ, ಮಧುಗಿರಿ ತಾಲೂಕು ಸೇರಿ 4 ಕಡೆ ಖರೀದಿ ಕೇಂದ್ರಗಳನ್ನು ಸ್ಥಾಪಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

- Advertisement -

ತುಮಕೂರು ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಕಾರ್ಯಪಡೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯ ರೈತರ ಹಿತದೃಷ್ಠಿಯಿಂದ ಶೇಂಗಾ ಬೆಳೆಯನ್ನು ಹೆಚ್ಚಾಗಿ ಬೆಳೆಯುವ ತಾಲ್ಲೂಕುಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಬೇಕು. ಖರೀದಿ ಕೇಂದ್ರಗಳನ್ನು ಆಯಾ ತಾಲ್ಲೂಕುನ ಎಪಿಎಂಸಿ ಆವರಣದಲ್ಲಿ ತೆರೆಯಬೇಕು. ಶೇಂಗಾ ಖರೀದಿಗಾಗಿ ಕೇಂದ್ರ ಸರ್ಕಾರದ ನಫೆಡ್ ಮತ್ತು ರಾಜ್ಯ ಸರ್ಕಾರದ ಕೆ.ಓ.ಎಫ್.ಅನ್ನು ಖರೀದಿ ಸಂಸ್ಥೆಯನ್ನಾಗಿ ನೇಮಿಸಲಾಗಿದೆ. ಎಫ್.ಎ.ಕ್ಯೂ ನಿಯಾಮಾನುಸಾರ ಪ್ರತಿ ಎಕರೆಗೆ ಒಬ್ಬ ರೈತನಿಂದ 3 ಕ್ವಿಂಟಾಲ್‌ನಂತೆ ಗರಿಷ್ಠ 15 ಕ್ವಿಂಟಾಲ್ ಶೇಂಗಾ ಬೀಜವನ್ನು ಖರೀದಿಸಬೇಕು. ಪ್ರತಿ ಕ್ವಿಂಟಾಲ್ ಶೇಂಗಾ ಬೀಜಕ್ಕೆ 6,783 ರೂ.ಗಳ ಬೆಂಬಲ ಬೆಲೆಯನ್ನು ನಿಗಧಿಪಡಿಸಲಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಶೇಂಗಾ ಖರೀದಿ ಕೇಂದ್ರಗಳಲ್ಲಿ ನವೆಂಬರ್ 4 ರಿಂದ ನೋಂದಣಿ ಕಾರ್ಯ ಪ್ರಾರಂಭವಾಗಲಿದೆ. ರೈತರಿಂದ ಶೇಂಗಾ ಖರೀದಿಸುವ ಪೂರ್ವದಲ್ಲಿ ಫ್ರೂಟ್ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡು, ನೋಂದಾಯಿಸಿದ ನಂತರ 90 ದಿನಗಳವರೆಗೆ ಖರೀದಿ ಮಾಡಬೇಕು. ರೈತರ ನೋಂದಣಿಗೆ 45 ದಿನಗಳ ಕಾಲಾವಕಾಶವಿದ್ದು, ಯಾವುದೇ ಗದ್ದಲ-ಗಲಭೆಗಳಿಗೆ ಅವಕಾಶ ನೀಡಬಾರದು ಎಂದು ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿಗೆ ಸೂಚನೆ ನೀಡಿದರು. 

  ಖರೀದಿ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ರೈತರಿಗೆ ಯಾವುದೇ ಸಮಸ್ಯೆಯಾಗದಂತೆ ಎಚ್ಚರವಹಿಸುಂತೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಸೂಚಿಸಿದರು.

     ಈ ಸಂದರ್ಭದಲ್ಲಿ ಕೃಷಿ ಮಾರಾಟ ಇಲಾಖೆ ಉಪ ನಿದೇರ್ಶಕ ಡಾ. ಬಿ.ರಾಜಣ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...