ಉಡುಪಿ | ಉದ್ಯೋಗಸ್ಥ ಮಹಿಳೆಯರಿಗೆ ಅನುಕೂಲವಾಗುವಂತೆ ಶಿಶುಪಾಲನಾ ಕೇಂದ್ರಗಳ ಸ್ಥಾಪನೆ

Date:

ಉದ್ಯೋಗಸ್ಥ ಮಹಿಳೆಯರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಖಾಂತರ 4 ಶಿಶುಪಾಲನಾ ಕೇಂದ್ರಗಳನ್ನು ತರೆಯಲಾಗಿದ್ದು, ಉದ್ಯೋಗಸ್ಥ ಮಹಿಳೆಯರು
ಸುಗಮವಾಗಿ ಕಛೇರಿಗಳಲ್ಲಿ ಕೆಲಸ ನಿರ್ವಹಿಸಲು ಹಾಗೂ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ 6 ತಿಂಗಳಿನಿಂದ 6 ವರ್ಷದ ಮಕ್ಕಳ ಯೋಗಕ್ಷೇಮ, ರಕ್ಷಣೆ ಹಾಗೂ ಪೋಷಣೆಗೆ ಅನುವಾಗುವಂತೆ, ಹಾಲುಣಿಸುವ ಕೊಠಡಿ, ಮಕ್ಕಳಿಗೆ ಆಟಿಕೆಗಳು ಮತ್ತು ಪೂರಕ ಪೌಷ್ಟಿಕ ಆಹಾರದೊಂದಿಗೆ ಮಕ್ಕಳ ಲಾಲನೆ, ಪಾಲನೆ ಹಾಗೂ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ.

- Advertisement -

ಶಿಶುಪಾಲನಾ ಕೇಂದ್ರಗಳು ಬೆಳಗ್ಗೆ 9.30 ರಿಂದ ಸಂಜೆ 6 ಗಂಟೆಯವರೆಗೆ ಕಾರ್ಯನಿರ್ವಹಿಸುತ್ತಿದ್ದು, ಮಕ್ಕಳ ಲಾಲನೆ ಮತ್ತು ಪಾಲನೆಗಾಗಿ ಶಿಕ್ಷಕಿ ಮತ್ತು ಸಹಾಯಕಿಯರು ಕಾರ್ಯನಿರ್ವಹಿಸುತ್ತಿರುತ್ತಾರೆ. ಆಸಕ್ತ ಮಹಿಳೆಯರು ತಮ್ಮ ಮಕ್ಕಳನ್ನು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಪಂಚಾಯತ್‌ನ ಸಿ ಬ್ಲಾಕ್ ನೆಲಮಹಡಿ ದೂ.ಸಂ:9448951074 (ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟ ಉಡುಪಿ), ಉಡುಪಿ ನಗರದ ಸರಕಾರಿ ತಾಯಿ ಮಕ್ಕಳ ಆಸ್ಪತ್ರೆ ಎದುರುಗಡೆಯ ಮಹಾತ್ಮಾಗಾಂಧಿ ಶಾಲೆ, ದೂ.ಸಂ: 9448951074 (ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟ ಉಡುಪಿ), ಕುಂದಾಪುರದ ಎ.ಕೆ.ಜಿ ರಸ್ತೆಯ ಹಿತಾ ಹಾರ್ಮೋನಿ ಎದುರುಗಡೆಯ ಶ್ರೀದೇವಿ ನರ್ಸಿಂಗ್ ಹೋಮ್ ದೂ.ಸಂ:7619195452 (ಸ್ತ್ರೀಶಕ್ತಿ ಒಕ್ಕೂಟ ಕುಂದಾಪುರ) ಹಾಗೂ ಕಾರ್ಕಳದ ಕಿಸಾನ್ ಸಭಾ ಟ್ರಸ್ಟ್ ಬಳಿಯ ಮಹಿಳಾ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರ ದೂ.ಸಂ:9449382787 (ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟ ಕಾರ್ಕಳ) ದ ಶಿಶುಪಾಲನ ಕೇಂದ್ರಗಳಲ್ಲಿ ನೋಂದಾಯಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...