ಉಡುಪಿ | ಜಿಲ್ಲೆಯಾದ್ಯಂತ ವೈಭವದ ಈಸ್ಟರ್ ಜಾಗರಣೆ

Date:

Advertisements

ಯೇಸು ಕ್ರಿಸ್ತರು ಶಿಲುಬೆಗೇರಿ ಪುನರುತ್ಥಾನರಾದ ಈಸ್ಟರ್ ಜಾಗರಣೆಯನ್ನು ಶನಿವಾರ ರಾತ್ರಿ ಜಿಲ್ಲೆಯಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು.
ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ಧರ್ಮಪ್ರಾಂತ್ಯದ ಪ್ರಧಾನ ದೇವಾಲಯ ಮಿಲಾಗ್ರಿಸ್ ಕ್ಯಾಥೆಡ್ರಲ್ ಚರ್ಚ್ನಲ್ಲಿ ಧಾರ್ಮಿಕ ವಿಧಿವಿಧಾನಗಳು ಜರುಗಿದವು.

ಚರ್ಚಿನ ಪ್ರಧಾನ ಧರ್ಮಗುರು ಹಾಗೂ ಧರ್ಮಪ್ರಾಂತ್ಯದ ಶ್ರೇಷ್ಠಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಸಹಾಯಕ ಧರ್ಮಗುರು ವಂ|ಪ್ರದೀಪ್ ಕಾರ್ಡೊಜಾ, ವಂ|ಡಾ|ಜೆನ್ಸಿಲ್ ಆಲ್ವಾ, ಪಿಲಾರ್ ಸಭೆಯ ವಂ|ಮನೋಜ್ ಫುರ್ಟಾಡೊ, ವಂ|ಪರೇಲ್ ಫೆರ್ನಾಂಡಿಸ್ ಕಟಪಾಡಿ ಹೋಲಿ ಕ್ರೊಸ್ ಸಂಸ್ಥೆಯ ನಿರ್ದೇಶಕ ವಂ|ರೋನ್ಸನ್ ಡಿಸೋಜಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬೃಹತ್ ಗಾತ್ರದ ಈಸ್ಟರ್ ಕ್ಯಾಂಡಲ್ ಹಚ್ಚಿ ಮೆರವಣಿಗೆಯಲ್ಲಿ ಸಾಗಿ ಬಂದು ಚರ್ಚ್ನ ಪ್ರಧಾನ ಸ್ಥಳದಲ್ಲಿ ಪ್ರತಿಷ್ಠಾಪಿಸಲಾಯಿತು. ಬಳಿಕ ಹಳೆ ಹಾಗೂ ಹೊಸ ಒಡಂಬಡಿಕೆಯ ಆಯ್ದ ಭಾಗಗಳ ವಾಚನ ಮಾಡಲಾಯಿತು. ಧರ್ಮಾಧ್ಯಕ್ಷ ರು ಮತ್ತು ಧರ್ಮಗುರುಗಳು ಆಶೀರ್ವಚನ ನೆರವೇರಿಸಿ ನೆರೆದ ಭಕ್ತಾದಿಗಳ ಮೇಲೆ ಹೊಸ ನೀರನ್ನು ಪ್ರೋಕ್ಷಿಸಿ ಆಶೀರ್ವಾದಿಸಿದರು.

Advertisements

ಬಳಿಕ ನಡೆದ ಬಲಿಪೂಜೆಯಲ್ಲಿ ಯೇಸುವಿನ ಕಷ್ಟಗಳು, ಪುನರುತ್ಥಾನದ ಸಂದೇಶವನ್ನು ವಿವರಿಸಿದ ಧರ್ಮಗುರುಗಳು, ಕ್ರೈಸ್ತ ವಿಶ್ವಾಸ, ಸತ್ಯದ ಮರು ಹುಟ್ಟನ್ನು ದೃಢೀಕರಣ ನಡೆಸಿದರು.

ಬಲಿಪೂಜೆಯಲ್ಲಿ ಸಂದೇಶ ನೀಡಿದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಈಸ್ಟರ್ ನಮ್ಮ ಹೃದಯಗಳಲ್ಲಿ ನಂಬಿಕೆ, ನವೀಕರಣ ಮತ್ತು ಆನಂದವನ್ನು ತುಂಬುವ ಪವಿತ್ರ ದಿನ. ಈ ಹಬ್ಬ ಒಂದು ಧಾರ್ಮಿಕ ಆಚರಣೆಯಲ್ಲ, ಬದಲಾಗಿ ಸೋಲಿನ ಮೇಲೆ ಗೆಲುವು ಕತ್ತಲೆಯ ಮೇಲೆ ಬೆಳಕು ಮತ್ತು ಮರಣದ ಮೇಲೆ ಜೀವದ ವಿಜಯದ ಸಂಕೇತ. “ಪುನರುತ್ಥಾನವು ಜೀವವೂ ನಾನೇ; ನನ್ನಲ್ಲಿ ವಿಶ್ವಾಸವಿಟ್ಟವನು ಸಾವಿಗೀಡಾದರೂ ಜೀವಿಸುವನು”. ಎಂದು ನುಡಿದ ಯೇಸು ಪಾಪ ಹಾಗೂ ಅದರ ಶಿಕ್ಷೆಯಾದ ಮರಣವನ್ನು ಜಯಿಸಿದ ಸುದಿನ. ಕ್ರಿಸ್ತನ ಪುನರುತ್ಥಾನ ವಿಶ್ವಾಸಿಗಳ ಭವಿಷ್ಯ ಪುನರುತ್ಥಾನದ ಭರವಸೆ. ಇದು ನಮ್ಮ ನಂಬಿಕೆಯನ್ನು ದೃಡಪಡಿಸಿ ಜೀವನದ ಪೂರ್ಣತೆಯತ್ತ ಜೀವಿಸಲು ಪ್ರೇರೆಪಿಸುತ್ತದೆ. ನಾವೆಲ್ಲರೂ ಪ್ರತಿ ದಿನ ಬದುಕಿನಲ್ಲಿ ಎದುರಿಸುತ್ತಿರುವ ಕಷ್ಟ ಸಂಕಟಗಳನ್ನು ಮೀರಿ ಜಯಶಾಲಿಗಳಾಗಬಹುದೆಂಬ ಬಲವಾದ ಸಂದೇಶವನ್ನು ನೀಡುತ್ತದೆ.

ಇಂದಿನ ಸಮಯದಲ್ಲಿಜನತೆ ನಿರಾಶೆ, ಅಂಜಿಕೆ, ಅನಿಶ್ಚಿತತೆ ಎದುರಿಸುತ್ತರುವಾಗ ಈಸ್ಟರ್ ನಮ್ಮ ಬಾಳಿನಲ್ಲಿ ಹೊಸ ಭರವಸೆ, ಧೈರ್ಯ ಹಾಗೂ ಚೈತನ್ಯವನ್ನು ತುಂಬುತ್ತದೆ. ಇದು ಸಹನೆ, ವಿಶ್ವಾಸ ಮತ್ತು ಬದಲಾವಣೆಯ ಹೊಸ ಪ್ರಾರಂಭ. ಈ ಈಸ್ಟರ್ ದಿನ ನಾವು ಬೆಳಕಿನ ದಾರಿಯಲ್ಲಿ ಸಡೆಯೋಣ. ಅಲ್ಲಿ ನಂಬಿಕೆ, ವಿಶ್ವಾಸವಿದೆ, ಶಾಶ್ವತ ನೆಲಸಿರುವ ಪ್ರೀತಿಇದೆ ಮತ್ತು ಮುಗಿಯದ ಆಶಯ ಬೆಳಕಿದೆ. ತಮಗೆಲ್ಲರಿಗೂ ಈಸ್ಟರ್ ಹಬ್ಬದ ಹೃತ್ಪೂರ್ವಕ ಶುಭಾಶಯಗಳನ್ನು ಕೋರುವುದಾಗಿ ಹೇಳಿದರು.

ಬಲಿಪೂಜೆಯ ಬಳಿಕ ಭಾಗವಹಿಸಿದ ಕ್ರೈಸ್ತ ಬಾಂಧವರು ಈಸ್ಟರ್ ಹಬ್ಬದ ಶುಭಾಶಯ ವಿನಿಮಯ ಮಾಡಿ ಸಂಭ್ರಮಿಸಿದರು. ಕ್ರೈಸ್ತರು ವಿಭೂತಿ ಬುಧವಾರದಿಂದ ಆರಂಭಿಸಿ 40 ದಿನಗಳ ಉಪವಾಸ ವೃತ ಹಾಗೂ ಧ್ಯಾನದಲ್ಲಿ ಯೇಸುವಿನ ಕಷ್ಟಗಳನ್ನು ನೆನೆದು ಈಸ್ಟರ್ ಹಬ್ಬದಂದು ಯೇಸುವಿನ ಪುನರುತ್ಥಾನದ ಮೂಲಕ ವೃತ ಅಂತ್ಯಗೊಳಿಸುತ್ತಾರೆ. ಈಸ್ಟರ್ ಹಬ್ಬವೂ ಕ್ರಿಸ್ಮಸ್ ಹಬ್ಬದಂತೆ ಕ್ರೈಸ್ತರಿಗೆ ಪ್ರಮುಖ ಹಬ್ಬವಾಗಿದೆ.

ಜಿಲ್ಲೆಯ ವಿವಿಧ ಚರ್ಚುಗಳಲ್ಲಿ ಆಯಾ ಚರ್ಚುಗಳ ಧರ್ಮಗುರುಗಳ ನೇತೃತ್ವದಲ್ಲಿ ಪವಿತ್ರ ಶುಕ್ರವಾರದ ವಿಧಿ ವಿಧಾನಗಳು ಜರುಗಿದವು. ಉಡುಪಿ ಶೋಕಮಾತಾ ಚರ್ಚಿನಲ್ಲಿ ಧರ್ಮಗುರುಗಳಾದ ವಂ|ಚಾರ್ಲ್ಸ್ ಮಿನೇಜಸ್, ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ವಂ|ಡೆನಿಸ್ ಡೆಸಾ, ಕುಂದಾಪುರ ಹೋಲಿ ರೋಸರಿ ಚರ್ಚಿನಲ್ಲಿ ವಂ|ಪಾವ್ಲ್ ರೇಗೊ, ಶಿರ್ವ ಆರೋಗ್ಯ ಮಾತಾ ಚರ್ಚಿನಲ್ಲಿ ವಂ|ಡಾ|ಲೆಸ್ಲಿ ಡಿಸೋಜಾ, ಕಾರ್ಕಳ ಸಂತ ಲಾರೇನ್ಸ್ ಬಸಿಲಿಕಾದಲ್ಲಿ ವಂ|ಆಲ್ಬನ್ ಡಿಸೋಜಾ ನೇತೃತ್ವದಲ್ಲಿ ಪಾಸ್ಕ ಜಾಗರಣೆಯ ಧಾರ್ಮಿಕ ವಿಧಿ ವಿಧಾನಗಳು ಜರುಗಿದವು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X