ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು ಸೆ.8ರಂದು ಚಾಲನೆ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು.
ತುಮಕೂರು ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀರಿನ ಯಂತ್ರಗಳು ತುಕ್ಕು ಹಿಡಿದ ಹಿನ್ನೆಲೆಯಲ್ಲಿ ಸ್ಪೋಟಗೊಂಡಿದ್ದವು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಾಯೋಗಿಕವಾಗಿ ಪರೀಕ್ಷೆ ನಡೆಸಿದ್ದ ಯಶಶ್ವಿಯಾಗಿವೆ. ಸೆ.6ರಂದು ಚಾಲನೆ ನೀಡಲಾಗುತ್ತಿದೆ. ಈ ನೀರನ್ನು ವಾಣಿವಿಲಾಸ ಸಾಗರ ಅಣೆಕಟ್ಟೆಗೆ 1500 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ. ಆ ಭಾಗಕ್ಕೆ ಉಪಯೋಗವಾಗಲಿದೆ. ಮುಂದಿನ ವರ್ಷ ಅರಸಿಕೆರೆ, ತಿಪಟೂರು ಭಾಗದಲ್ಲಿನ ಕಾಮಗಾರಿ ಪೂರ್ಣಗೊಳ್ಳಲಿದ್ದು ತುಮಕೂರಿಗೆ ನೀರು ಬರಲಿದೆ ಎಂದು ತಿಳಿಸಿದರು.

ಪರಮಶಿವಯ್ಯನವರು ಹಾಸನ, ಚಿಕ್ಕಮಗಳೂರು, ತುಮಕುರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಬಯಲುಸೀಮೆ ಪ್ರದೇಶಗಳಿಗೆ ಕುಡಿಯುವ ನೀರಿನ ಯೋಜನೆ ಮಾಡಬೇಕೆಂದು ಪ್ರಸ್ತಾಪ ಮಾಡಿದ್ದರು. ಇದಕ್ಕೆ ನೇತ್ರಾವತಿಯ ತಿರುವು ಎಂದು ಹೆಸರಿಟ್ಟಿದ್ದರು.
ಇದಕ್ಕೆ ಮಂಗಳೂರಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದರಿಂದ ಯೋಜನೆ ಕೈ ಬಿಡುವ ಸ್ಥಿತಿ ಬಂದಿತ್ತು. ಇದಾದ ಬಳಿಕ ನೀರಾವರಿ ತಜ್ಞರು ವಿಶೇಷವಾಗಿ ಮಳೆಗಾಲದಲ್ಲಿ ಹೆಚ್ಚು ಮಳೆಯಾಗುವ ಪ್ರದೇಶವನ್ನು ಗುರುತಿಸಿದರು. ಎತ್ತಿನಹೊಳೆ, ಕಾಡುಮನೆಹೊಳೆ, ಹೊಂಗದಹಳ್ಳ, ಕೇದಿಹೊಳೆ. ಇದೆಲ್ಲವು ಕ್ರೂಡಿಕ್ರುತವಾಗಿ ಒಂದುಕಡೆ ಬಂದರೆ 24 ಟಿಎಂಸಿ ಬರುತ್ತದೆ. ಈ ಯೋಜನೆಯ ಸಾಧಕ-ಬಾಧಕಗಳನ್ನು, ನೀರು ತೆಗೆದುಕೊಳ್ಳುವ ಸಾಧ್ಯ-ಅಸಾಧ್ಯತೆಯ ಕುರಿತು ಸರ್ಕಾರಕ್ಕೆ ವರದಿ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದಕ್ಕೆ ಬೇಕಾದ ಹಣಕಾಸು, ತಾಂತ್ರಿಕತೆಯನ್ನು ಅಧ್ಯಯನ ನಡೆಸಿ, ₹ 12,912.36 ಕೋಟಿ ಹಣವನ್ನು ಬಜೆಟ್‌ನಲ್ಲಿ ಒದಗಿಸಿ, 17-2-2014ರಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿದರು. ಯೋಜನೆಯ ಇವತ್ತಿನ ಮೊತ್ತ ₹ 23,251 ಕೋಟಿ ತಲುಪಿದೆ. ಈ ಯೋಜನೆಯು ಮುಂಬರುವ ಮಾರ್ಚ್ 2027ಕ್ಕೆ ಸಂಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ತುಮಕೂರು ಜಿಲ್ಲೆಯಲ್ಲಿ 150 ಕಿ.ಮೀ.ಕೆನಾಲ್:
ಜಿಲ್ಲೆಯಲ್ಲಿ ಮುಖ್ಯ ಕೆನಾಲ್ 150 ಕಿ.ಮೀ ಇದೆ. ಇದರಲ್ಲಿ 102 ಕಿ.ಮೀ ಕೆನಾಲ್ ಕಾಮಗಾರಿ ಪೂರ್ಣಗೊಂಡಿದೆ. 121 ಕಿ.ಮೀ ಫೀಡರ್ ಕೆನಾಲ್‌ನಲ್ಲಿ 106 ಕಿ.ಮೀ. ಪೂರ್ಣಗೊಂಡಿದೆ. ಜುಲೈ 2025ರೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಜಿಲ್ಲೆಯಲ್ಲಿ ಸುಮಾರು 63 ಎಕರೆ ಅರಣ್ಯ ಭೂಮಿ ಈ ಯೋಜನೆಯಲ್ಲಿ ಬರುತ್ತದೆ ಎಂದರು.
