ಕೋಮುವಾದಿಗಳ ಜೊತೆ ರಾಜಿ ಪ್ರಶ್ನೆಯೇ ಇಲ್ಲ, ನನ್ನ ಹೆಣ ಕೂಡ ಬಿಜೆಪಿಗೆ ಹೋಗಲ್ಲ: ಸಿದ್ದರಾಮಯ್ಯ

Date:

  • ಕುಮಾರಸ್ವಾಮಿ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು
  • ಬರಗಾಲ: 62 ತಾಲ್ಲೂಕುಗಳು ಗುರುತಿಸಲಾಗಿದೆ: ಸಿಎಂ

ನನ್ನ ರಾಜಕೀಯ ಜೀವನದಲ್ಲಿ ಕೋಮುವಾದಿ ಪಕ್ಷಗಳ ವಿರುದ್ಧ ಹೋರಾಟ ಮಾಡಿಕೊಂಡು ಬಂದಿರುವೆ. ನನ್ನ ಹೆಣ ಕೂಡ ಬಿಜೆಪಿಗೆ ಹೋಗುವುದಿಲ್ಲ. ಜೆಡಿಎಸ್‌ನವರು ಅವರು ಕುಟುಂಬ ರಾಜಕಾರಣಕ್ಕಾಗಿ ಬಿಜೆಪಿಯವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ. ನಾನು ಯಾವುದೇ ಕಾರಣಕ್ಕೂ ಕೋಮುವಾದಿಗಳ ಜೊತೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಸಿದ್ದರಾಮಯ್ಯನವರು ಹಿಂದೆ ಬಿಜೆಪಿ ಪಕ್ಷಕ್ಕೆ ಹೋಗಲು ಪ್ರಯತ್ನಿಸಿದ್ದರು ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಆರೋಪಕ್ಕೆ ಸೋಮವಾರ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಬರ ಮಾರ್ಗಸೂಚಿಯೊಳಗೆ 62 ತಾಲ್ಲೂಕುಗಳನ್ನು ಗುರುತಿಸಲಾಗಿದೆ. 136 ತಾಲ್ಲೂಕು ಬರಪೀಡಿತ ಪರಿಸ್ಥಿತಿಯ ವರದಿ ಪಡೆಯಲಾಗುತ್ತಿದೆ. ಈ ವರದಿ ಬಂದ ನಂತರ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು” ಎಂದರು.

ಸರ್ವಪಕ್ಷ ಸಭೆಯಲ್ಲಿ ಕಾವೇರಿ ವಿವಾದದ ಕುರಿತು ಬೆಂಬಲಿಸುವುದಾಗಿ ತಿಳಿಸಿದ ಬಿಜೆಪಿ ಈಗ ಕೆಆರ್‌ಎಸ್‌ನಲ್ಲಿ ಬಂದು ರೈತರ ಅಹವಾಲುಗಳನ್ನು ಸರ್ಕಾರ ಕಡೆಗಣಿಸುತ್ತಿದೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಮೇಕೆದಾಟು ಯೋಜನೆಗೆ ಅನುಮತಿ ನೀಡದಿರುವುದು ಕೇಂದ್ರ ಬಿಜೆಪಿ ಸರ್ಕಾರ, ಈ ಯೋಜನೆಗೆ ತಕರಾರು ಮಾಡಲು ತಮಿಳುನಾಡಿಗೆ ಯಾವುದೇ ವಿಚಾರವಿಲ್ಲ. ರಾಜ್ಯಕ್ಕೆ ನಿಗದಿಪಡಿಸಿರುವ 177.25 ಟಿಎಂಸಿ ಸಾಮಾನ್ಯ ವರ್ಷಗಳಲ್ಲಿ ನೀರು ಬಿಡಬೇಕು. ಸಂಕಷ್ಟದ ಸಮಯದಲ್ಲಿ ಸಂಕಷ್ಟದ ಸೂತ್ರ ಅನುಸರಿಸಬೇಕು ಎಂದಿದೆ. ಆದರೆ ತಮಿಳುನಾಡಿನವರು ಅನಗತ್ಯವಾಗಿ ಕ್ಯಾತೆ ತೆಗೆಯುತ್ತಿದ್ದಾರೆ. ಈ ಯೋಜನೆಗೆ ಸಂಬಂಧಿಸಿದ ಡಿಪಿಆರ್ ನೀಡಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಸಮಾಧಾನದ ಕಿಡಿ ಜ್ವಾಲೆಯಾಗಿ ಸರ್ಕಾರವನ್ನು ಸುಡದಿರಲಿ

ಪ್ರಧಾನಿ ಭೇಟಿಗೆ ಸಮಯ ನಿಗದಿಪಡಿಸಲಿ

“ಕೇಂದ್ರ ಸರ್ಕಾರದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಬಿಜೆಪಿಯವರು ಯೋಜನೆ ಅನುಮತಿ ದೊರಕಿಸಿಸಿಕೊಡಲು ಮನವಿ ಮಾಡಿಕೊಳ್ಳಬೇಕು. ಆದರೆ ರಾಜ್ಯ ಬಿಜೆಪಿಯವರು ಸರ್ವಪಕ್ಷ ಸಭೆಯಲ್ಲಿ ಕಾವೇರಿ ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ಸಹಕರಿಸುವುದಾಗಿ ತಿಳಿಸಿ, ಇಲ್ಲಿ ಇದೇ ವಿಷಯದ ಬಗ್ಗೆ ರಾಜಕೀಯ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯದ ರೈತರ ಹಿತರಕ್ಷಣೆಯ ವಿಷಯದಲ್ಲಿ ರಾಜಕಾರಣ ಬೇಡ. ಈ ವಿಚಾರವಾಗಿ ಸರ್ವಪಕ್ಷ ನಿಯೋಗದ ಭೇಟಿಗೆ ಪ್ರಧಾನ ಮಂತ್ರಿಗಳ ಸಮಯ ಕೋರಿದ್ದು, ಯಾವುದೇ ಉತ್ತರ ಬಂದಿಲ್ಲವಾದ್ದರಿಂದ, ರಾಜ್ಯ ಬಿಜೆಪಿ ಸಂಸದರು, ಭೇಟಿಗೆ ಸಮಯ ನಿಗದಿಪಡಿಸಲಿ” ಎಂದು ಒತ್ತಾಯಿಸಿದರು.

ಒಂದು ರಾಷ್ಟ್ರ, ಒಂದು ಚುನಾವಣೆ ಅಸಾಧ್ಯ

ದೇಶದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಅಗತ್ಯವಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, “ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೊಳಿಸುವುದು ಸಾಧ್ಯವಿಲ್ಲ. ಕೆಲವು ರಾಜ್ಯಗಳಲ್ಲಿ ಇತ್ತೀಚೆಗಷ್ಟೇ ಚುನಾವಣೆ ನಡೆದಿದೆ, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಈ ಎಲ್ಲ ರಾಜ್ಯ ವಿಧಾನಸಭೆಗಳನ್ನು ವಿಸರ್ಜಿಸಲು ಸಾಧ್ಯವಿದೆಯೇ, ಅಥವಾ ಚುನಾವಣೆ ನಡೆಯುವವರೆಗೂ ರಾಷ್ಟ್ರಪತಿ ಅಧಿಕಾರ ಹೇರಲು ಸಾಧ್ಯವಿದೆಯೇ? ಇಂತಹ ಸಂದರ್ಭಗಳು ಉದ್ಭವಿಸುವ ಸಾಧ್ಯತೆಯಿಂದಾಗಿ ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೊಳಿಸುವುದು ಸಾಧ್ಯವಿಲ್ಲ. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಗೆಲುವಿನಿಂದಾಗಿ ಪ್ರಧಾನಿಗಳು ಹತಾಶರಾಗಿದ್ದು, ನಾಲ್ಕೈದು ತಿಂಗಳು ಕಳೆದರೂ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಿರುವುದಿಲ್ಲ” ಎಂದು ಕಿಡಿ ಕಾರಿದರು.

ಖಾಸಗಿ ಸಾರಿಗೆ ಒಕ್ಕೂಟದ ಬೇಡಿಕೆ ಈಡೇರಿಕೆ ಅಸಾಧ್ಯ

ಬೆಂಗಳೂರಿನ ಖಾಸಗಿ ಸಾರಿಗೆ ಒಕ್ಯಕೂಟದವರು ನಡೆಸುತ್ತಿರುವ ಮುಷ್ಕರದ ಬಗ್ಗೆ ಮಾತನಾಡಿ, “ಪ್ರಜಾಪ್ರಭುತ್ವದಲ್ಲಿ ಮುಷ್ಕರ ಮಾಡುವವರಿಗೆ ಕಡಿವಾಣ ಹಾಕಲು ಸಾಧ್ಯವಿಲ್ಲ. ಖಾಸಗಿ ಸಾರಿಗೆಯವರ ಅಹವಾಲುಗಳನ್ನು ಸರ್ಕಾರ ಆಲಿಸಿದೆ. ಶಕ್ತಿಯೋಜನೆಯಿಂದ ಖಾಸಗಿ ಸಾರಿಗೆಯವರಿಗೆ ನಷ್ಟವುಂಟಾಗುತ್ತಿದ್ದು, ಆ ನಷ್ಟವನ್ನು ಭರಿಸಿಕೊಡಬೇಕು ಎಂಬಂತಹ ಅಸಾಧ್ಯ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ. ಹೆಣ್ಣುಮಕ್ಕಳಿಗೆ ಅನುಕೂಲ ಕಲ್ಪಿಸಲು ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...