ದಾವಣಗೆರೆ | ‘ಓಟಿಂಗ್‌’ಗಾಗಿ ಅಮೇರಿಕಾದಿಂದ ಬಂದ ವ್ಯಕ್ತಿ; ಮತದಾನ ಮಾಡಲು ಆಗಲೇ ಇಲ್ಲ

Date:

  • ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದೆ ಮತದಾನದಿಂದ ವಂಚಿತ
  • ‘ಜನವರಿಯಲ್ಲಿ ನನ್ನ ಹೆಸರು ಮತದಾರರ ಪಟ್ಟಿಯಲ್ಲಿತ್ತು’

ಮತದಾನಕ್ಕಾಗಿಯೇ ದೂರದ ಅಮೇರಿಕಾದಿಂದ ಲಕ್ಷಾಂತರ ರೂಪಾಯಿ ಖರ್ಚು ಮಾಡಿಕೊಂಡು ದಾವಣಗೆರೆಗೆ ಬಂದಿದ್ದ ವ್ಯಕ್ತಿಯೊಬ್ಬರು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಕಾರಣಕ್ಕೆ ಮತದಾನದಿಂದ ವಂಚಿತರಾಗಿದ್ದಾರೆ.

- Advertisement -

ಅಮೆರಿಕಾದಲ್ಲಿ ಸಾಫ್ಟ್‌ವೇರ್ ಉದ್ಯೋಗಿ ಆಗಿರುವ ರಾಘವೇಂದ್ರ ಕಮಾಲಕರ್ ಮತದಾನದಿಂದ ವಂಚಿತರಾದವರು. ಅವರು ಅಮೆರಿಕಾದಿಂದ ದಾವಣಗೆರೆಗೆ ಬಂದಿದ್ದರು. ಆದರೆ, ಅವರ ಹೆಸರೇ ಮತದಾನದ ಪಟ್ಟಿಯಲ್ಲಿ ಇರಲಿಲ್ಲ. ಹೀಗಾಗಿ ಮತದಾನ ಮಾಡಲು ಸಾಧ್ಯವಾಗಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಜನವರಿಯಲ್ಲಿ ನನ್ನ ಹೆಸರು ಮತದಾರರ ಪಟ್ಟಿಯಲ್ಲಿತ್ತು. ನನಗೆ ಮಾಹಿತಿಯೂ ಬಂದಿತ್ತು. ವಿದ್ಯಾನಗರದ ಮಾಗನೂರು ಬಸಪ್ಪ ಶಾಲೆಯಲ್ಲಿ ನಾನು ಮತ ಚಲಾಯಿಸಲು ಬಂದಾಗ ಪಟ್ಟಿಯಲ್ಲಿ ನನ್ನ ಹೆಸರೇ ಇಲ್ಲ. ಮತದಾನ ಮಾಡಲು ಆಗಲೇ ಇಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ನಾನು ಮತದಾನ ಮಾಡುವ ಸಲುವಾಗಿಯೇ ಅಮೇರಿಕಾದಿಂದ ಸುಮಾರು ಒಂದೂವರೆ ಲಕ್ಷ ರೂ. ಖರ್ಚು ಮಾಡಿಕೊಂಡು ಬಂದಿದ್ದೇನೆ. ಆದರೆ, ನನಗೆ ಮತದಾನ ಮಾಡಲು ಸಾಧ್ಯವಾಗಲಿಲ್ಲ. ಮತದಾನ ಪ್ರತಿಯೊಬ್ಬರ ಜವಾಬ್ದಾರಿ. ಅದನ್ನರಿತು ಮತ ಚಲಾಯಿಸಲು ಬಂದಿದ್ದೆ. ಆದರೆ, ಮತಹಾಕಲು‌ ಸಾಧ್ಯವಾಗಲಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿರುಸುಗೊಂಡ ಮತದಾನ: ರಾಜ್ಯಾದ್ಯಂತ ಮಧ್ಯಾಹ್ನ ವೇಳೆಗೆ 37%ರಷ್ಟು ಮತದಾನ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...