ಕೊಡಗು | ಕನ್ನಡ ಸಾಹಿತ್ಯ ಸಮ್ಮೇಳನಗಳಿಗೆ ಎಲ್ಲರೂ ಸಹಕಾರ ನೀಡಿ: ಎ.ಎಸ್. ಪೊನ್ನಣ್ಣ

Date:

ಕನ್ನಡ ನಾಡು, ನುಡಿ ಮತ್ತು ಭಾಷೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗರ ಜವಾಬ್ದಾರಿಯಾಗಿದೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಹೇಳಿದರು.

- Advertisement -

ಪೊನ್ನಂಪೇಟೆ ತಾಲ್ಲೂಕಿನ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕರ್ನಾಟಕ ಸರ್ಕಾರದ ಆಶಯವೂ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದೇ ಆಗಿದ್ದು, ಜಿಲ್ಲೆಯಲ್ಲಿ ನಡೆಯಲಿರುವ ಎಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಗಳಿಗೆ ಕನ್ನಡಿಗರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಸಭೆಯಲ್ಲಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, ಜಿಲ್ಲೆಯಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನಗಳ ಕುರಿತು ಮಾಹಿತಿ ನೀಡಿ, ಯಶಸ್ವಿ ಆಯೋಜನೆಗೆ ಎಲ್ಲರ ಸಹಕಾರ ಅಗತ್ಯವೆಂದು ತಿಳಿಸಿದರು.

ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೋಳೆರ ದಯಾ ಚಂಗಪ್ಪ ಮಾತನಾಡಿ, ಇಲ್ಲಿಯವರೆಗೆ ನಡೆದ ಎಲ್ಲಾ ಕನ್ನಡ ಕಾರ್ಯಕ್ರಮಗಳಿಗೆ ಸರ್ಕಾರಿ ಅಧಿಕಾರಿಗಳು ಉತ್ತಮ ಸಹಕಾರ ನೀಡಿದ್ದಾರೆ. ಮುಂದೆಯೂ ಇದೇ ರೀತಿಯ ಬೆಂಬಲ ನೀಡುವಂತೆ ಮನವಿ ಮಾಡಿದರು.

ಈ ವಿಡಿಯೋ ವೀಕ್ಷಿಸಿ:https://youtu.be/3Lk22PKMz88

ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ಮೇ 26, 2026ರಂದು ಕಡಂಗದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಮೇ 29 ಮತ್ತು 30, 2026ರಂದು ಸುಂಟಿಕೊಪ್ಪದಲ್ಲಿ ಜರುಗಲಿದ್ದು, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ಜೂನ್ 1, 2026ರಂದು ಹುದಿಕೇರಿಯಲ್ಲಿ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ?ಆಶಾ ಕಾರ್ಯಕರ್ತೆಯರಿಗೆ ಬಾಕಿ ವೇತನ-ಪ್ರೋತ್ಸಾಹ ಧನ ₹264.14 ಕೋಟಿ ಅನುದಾನ ಬಿಡುಗಡೆ

ಸಭೆಯಲ್ಲಿ ಪೊನ್ನಂಪೇಟೆ ತಾಲೂಕು ಅಕ್ರಮ-ಸಕ್ರಮ ಸಮಿತಿಯ ಅಧ್ಯಕ್ಷ ಅಣ್ಣಳಮಾಡ ಲಾಲಾ ಅಪ್ಪಣ್ಣ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ ಹಾಗೂ ಹುದಿಕೇರಿ ಹೋಬಳಿ ಕಸಾಪ ಅಧ್ಯಕ್ಷ ಬಾನಂಗಡ ಅರುಣ, ಪೊನ್ನಂಪೇಟೆ ಹೋಬಳಿ ಕಸಾಪ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ವಿರಾಜಪೇಟೆ ತಹಶೀಲ್ದಾರ್ ಪ್ರವೀಣ್, ಪೊನ್ನಂಪೇಟೆ ತಹಶೀಲ್ದಾರ್ ಸಂಜನ, ಮಡಿಕೇರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶೇಖರ್, ಪೊನ್ನಂಪೇಟೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜೇಶ್, ಪೊಲೀಸ್ ವೃತ್ತ ನಿರೀಕ್ಷಕ ಶಿವರುದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್, ವಾರ್ತಾಧಿಕಾರಿ ಚಿನ್ನಸ್ವಾಮಿ ಸೇರಿದಂತೆ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...

ರಾಯಚೂರು | ಕಾರು ಪಲ್ಟಿ: ಕೃಷ್ಣಾ ಭಾಗ್ಯ ಜಲನಿಗಮದ ಸಹಾಯಕ ಎಂಜಿನಿಯರ್ ಸಾವು

ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೃಷ್ಣಾ ಭಾಗ್ಯ ಜಲನಿಗಮದ ನಾರಾಯಣಪುರ ವಲಯದ...

ರಾಯಚೂರು | ಯರಮರಸ್ ವಿದ್ಯುತ್ ಘಟಕ ಭೂ ಸಂತ್ರಸ್ಥರಿಗೆ ಉದ್ಯೋಗ ನೀಡಲು ಆಗ್ರಹ

ಯರಮರಸ್ ವಿದ್ಯುತ್ ಘಟಕಕ್ಕೆ ಭೂಮಿ ಕಳೆದುಕೊಂಡ ಭೂ ಸಂತ್ರಸ್ಥರಿಗೆ ಉದ್ಯೋಗ ನೀಡದೇ...