ಕೊಡಗು | ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಜವಾಬ್ದಾರಿ ವಹಿಸಬೇಕು: ಶಾಸಕ ಎ.ಎಸ್. ಪೊನ್ನಣ್ಣ

Date:

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪೊನ್ನಂಪೇಟೆ ಜೂನಿಯರ್ ಕಾಲೇಜಿನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭಾಗವಹಿಸಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಒತ್ತಿ ಹೇಳಿದರು.

- Advertisement -

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಪೊನ್ನಣ್ಣ ಅವರು ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಆಧುನಿಕತೆಯ ಭರದಲ್ಲಿ ಸಾಗುತ್ತಿರುವ ಇಂದಿನ ಪ್ರಪಂಚದಲ್ಲಿ ಪರಿಸರ ಸಂರಕ್ಷಣೆಗೆ ಅತ್ಯಂತ ಮಹತ್ವ ಬಂದಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ...

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕಲೆ ಮತ್ತೊಮ್ಮೆ ಅತ್ಯಂತ ಸುಂದರವಾಗಿ ಸಾಬೀತುಪಡಿಸಿದೆ. ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು 'ಮಹಿಷಾಸುರ...

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಮನುಷ್ಯ ಮಾತ್ರವಲ್ಲದೆ ಸಕಲ ಜೀವರಾಶಿಗಳು ಉತ್ತಮ ವಾತಾವರಣದಲ್ಲಿ ಬದುಕಲು ಪರಿಸರದ ರಕ್ಷಣೆ ಅಗತ್ಯವಾಗಿದೆ. ಭವಿಷ್ಯದ ನಮ್ಮ ನಾಡು ಹಾಗೂ ಪ್ರಪಂಚದ ಉಳಿವಿಗಾಗಿ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಯತ್ತ ಹೆಚ್ಚಿನ ಗಮನಹರಿಸಬೇಕು ಎಂದು ಕರೆ ನೀಡಿದರು.

ಉಸಿರಾಡಲು ಶುದ್ಧ ಗಾಳಿ ದೊರೆಯಬೇಕಾದರೆ ಪರಿಸರವನ್ನು ಕಾಪಾಡುವುದು ಅನಿವಾರ್ಯವಾಗಿದೆ. ಅಲ್ಲದೆ ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಶುಚಿತ್ವವನ್ನು ಕಾಪಾಡಲು ಪ್ರತಿಯೊಬ್ಬರೂ ಜವಾಬ್ದಾರಿ ವಹಿಸಿಕೊಳ್ಳಬೇಕು. ಶುಚಿತ್ವಯುತ ಸಮಾಜವೇ ಸ್ವಸ್ಥ ಸಮಾಜವಾಗಿದ್ದು, ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆ ಪರಸ್ಪರ ಸಂಬಂಧ ಹೊಂದಿವೆ ಎಂದು ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ?ಕೊಡಗು | ಕಾಫಿ ತೋಟ ವೀಕ್ಷಣೆ ವೇಳೆ ಕಾಡಾನೆ ದಾಳಿ: ಹಿರಿಯ ಐಪಿಎಸ್ ಅಧಿಕಾರಿಯ ಪತ್ನಿ ಸಾವು

ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮಿದೇರಿರ ನವೀನ್, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಆಲಿರ ರಶೀದ್, ಹಿರಿಯರಾದ ಮುಕಳೇರ ಕುಶಾಲಪ್ಪ, ಎರ್ಮು ಹಾಜಿ, ರಾಜು, ಪಕ್ಷದ ಮುಖಂಡರಾದ ಸಾಜಿ ಅಚ್ಚುತನ್, ತಿತೀರ ಮಂದಣ್ಣ, ಹ್ಯಾರೀಶ್, ಸದಲಿ, ತಹಶೀಲ್ದಾರ್ ಸಂಜನಾ, ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಇತರ ಪ್ರಮುಖರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ...

ಉಡುಪಿ | ‘ದ ಒರಿಜಿನಲ್ ಆಭರಣ ಜುವೆಲ್ಲರ್ಸ್’ ನವೀಕೃತ ಶೋರೂಂ ಲೋಕಾರ್ಪಣೆ

ಉಡುಪಿ ನಗರದ ಹೃದಯ ಭಾಗದಲ್ಲಿರುವ ಸಿಬಿ ರಸ್ತೆಯಲ್ಲಿ 1935 ರಲ್ಲಿ ಆರಂಭಗೊಂಡಿದ್ದ...

ವಿಜಯಪುರ |ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರ ಬದುಕಿಗೆ ಬೆಳಕಾದ ಎಂ.ಎಸ್. ಖೇಡ: 10ನೇ ಪುಣ್ಯಸ್ಮರಣೆ

ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರಿಗೆ ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ವಿಜಯಪುರ...

ಹಾಸನ | ಅಕ್ರಮ ಪೋಡಿ ದುರಸ್ತಿ: ರದ್ದು ಪಡಿಸಲು ನ್ಯಾಯಾಲಯ ಆದೇಶ 

ಸಕಲೇಶಪುರ ತಾಲೂಕಿನ ಸರ್ವೆಯರ್ ಹಾಗೂ ಸೂಪರ್‌ವೈಸರ್ ಸೇರಿ ಅಕ್ರಮವಾಗಿ ಕಿರುಹುಣಸೆ ಗ್ರಾಮದ...