ಮಂಡ್ಯ | ಅನಿಷ್ಠ ಪದ್ಧತಿಗಳ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ

Date:

ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಠ, ಪಿಡುಗುಗಳ ನಿರ್ಮೂಲನೆ ನಮ್ಮೆಲ್ಲರ ಆಧ್ಯ ಕರ್ತವ್ಯ, ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗದ ಸದಸ್ಯ ಮಿಕ್ಕೆರೆ ವೆಂಕಟೇಶ್ ಹೇಳಿದ್ದಾರೆ.

- Advertisement -

ಅವರು ಕೆ.ಆರ್‌ ಪೇಟೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. “ಮಂಡ್ಯ ಜಿಲ್ಲೆಯ ಗಡಿ ತಾಲೂಕು ಕೆ.ಆರ್‌ ಪೇಟೆಯಿಂದ ಮುಂಬೈ ಮಹಾನಗರಕ್ಕೆ ನೇರ ಸಂಪರ್ಕವಿರುವುದರಿಂದ ಮಕ್ಕಳ ಸಾಗಾಣಿಕೆ, ಬಾಲ್ಯ ವಿವಾಹದಂತಹ ಅನಿಷ್ಟ ಪದ್ದತಿಗಳು ಇಂದಿಗೂ ಇಲ್ಲಿ ಜೀವಂತವಾಗಿವೆ. ಆದ್ದರಿಂದ, ತಾಲೂಕು ಮಟ್ಟದ ಅಧಿಕಾರಿಗಳು ಮಕ್ಕಳ ಹಕ್ಕುಗಳ ರಕ್ಷಣೆ ವಿಚಾರದಲ್ಲಿ ಜಾಗೃತರಾಗಿ ಕೆಲಸ ಮಾಡಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

“ಕೆ.ಆರ್‌ ಪೇಟೆ ತಾಲೂಕಿನ ಜನರು, ನೆರೆಯ ಮಹಾರಾಷ್ಟ್ರ ಮುಂಬೈ ಮಹಾನಗರದಲ್ಲಿ ನೇರವಾಗಿ ವ್ಯಾಪಾರ, ವಹಿವಾಟು ಸೇರಿದಂತೆ, ಅಲ್ಲಿಯೇ ಜೀವನ ನಡೆಸುತ್ತಿರುವುದರಿಂದ ಮುಂಬೈ ಮಹಾನಗರದ ನಂಟಿದೆ. ತಾಲೂಕಿನಲ್ಲಿ ಮಕ್ಕಳ ಮಾರಾಟ ಜಾಲ ಸೇರಿದಂತೆ, ಬಾಲ್ಯವಿವಾಹ, ಅಸ್ಪೃಶ್ಯತೆ ಆಚರಣೆ, ಸಾಮಾಜಿಕ ಕಟ್ಟುಪಾಡುಗಳ ಆಚರಣೆಯಂತಹ  ಕಾನೂನು ಬಾಹಿರವಾದ ಚಟುವಟಿಕೆಗಳು ನಡೆಯುತ್ತಿವೆ. ತಾಲೂಕು ಮಟ್ಟದ ಅಧಿಕಾರಿಗಳು ಈ ಬಗ್ಗೆ ಎಚ್ಚರವಹಿಸಿ ಸಮಾಜ ವಿರೋಧಿ ಚಟುವಟಿಕೆಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕು” ಎಂದರು.

“ಹೆಣ್ಣು ಮಕ್ಕಳ ಪಾಲಿಗೆ ಶಾಪವಾಗಿರುವ ಬಾಲ್ಯ ವಿವಾಹದಂತಹ ಪ್ರಕರಣಗಳು ನಡೆಯದಂತೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಕೆ.ಆರ್.ಪೇಟೆ ತಾಲೂಕಿನಲ್ಲಿ ಮಹಿಳೆಯರು ಮತ್ತು ಮಕ್ಕಳು ಕಾಣೆಯಾಗುವ ಪ್ರಕರಣಗಳು, ಸರ್ವೇ ಸಾಮಾನ್ಯವಾಗಿವೆ. ಗ್ರಾಮದಿಂದ ನಾಪತ್ತೆಯಾದ ಮಹಿಳೆಯರು ಎಲ್ಲಿದ್ದಾರೆ? ಏನು ಮಾಡುತ್ತಿದ್ದಾರೆ? ಎಂಬುದು ಈಗೂ ಗೊತ್ತಾಗುತ್ತಿಲ್ಲ. ಮಹಿಳೆಯರ ಮತ್ತು ಮಕ್ಕಳ ಮಾರಾಟ ಜಾಲಗಳು  ಸಕ್ರಿಯವಾಗಿರುವ ಬಗ್ಗೆ ಆಯೋಗಕ್ಕೆ ಮಾಹಿತಿ ಇದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಪೊಲೀಸರು ನಿಗಾವಹಿಸಿ, ಅಕ್ರಮ ದಂಧೆಕೋರರ ವಿರುದ್ಧ ಕಠೀಣ ಕ್ರಮ ಕೈಗೊಳ್ಳಬೇಕು” ಎಂದು ತಿಳಿಸಿದರು.

“ಕಾನೂನಿಗಿಂತ ಯಾರೂ ದೊಡ್ಡವರಲ್ಲ, ನಾಗರೀಕ ಸಮಾಜದಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕಾನೂನಿನ ಪರಿಮಿತಿಯೊಳಗೆ ಜೀವನ ನಡೆಸಬೇಕು. ತಂದೆ, ತಾಯಿಗಳು ಹಾಗೂ ಪೋಷಕರು ಮಕ್ಕಳ ಹಕ್ಕುಗಳನ್ನು ಸಂರಕ್ಷಣೆ ಮಾಡಿ, ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳಿಸಿ, ವಿದ್ಯಾವಂತರನ್ನಾಗಿ ಮಾಡುವ ಮೂಲಕ ಭವಿಷ್ಯದ ನಾಯಕರನ್ನಾಗಿ ತಯಾರು ಮಾಡಬೇಕು. ಈ ದಿಕ್ಕಿನಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗಕ್ಕೆ ಸಹಕಾರ ನೀಡಬೇಕು” ಎಂದು ಹೇಳಿದರು.

ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸುಮಾರಾಣಿ ಮಾತನಾಡಿ, “ಬಾಲ್ಯ ವಿವಾಹ ಮತ್ತು ಶಾಲೆಗೆ ಹೋಗಬೇಕಿರುವ ಮಕ್ಕಳನ್ನು,  ಬಾಲಕಾರ್ಮಿಕ ರನ್ನಾಗಿ ಬಳಸಿಕೊಂಡು ಶೋಷಣೆ ಮಾಡುತ್ತಿರುವ ಪ್ರಕರಣಗಳು, ನಮ್ಮ ಗಮನಕ್ಕೆ ಬಂದ ಕೂಡಲೇ ಕಾರ್ಯೋನ್ಮುಖರಾಗಿ ಕ್ರಿಮಿನಲ್ ಪ್ರಕರಣ ದಾಖಲಿಸಿ, ಮಕ್ಕಳ ಹಕ್ಕುಗಳನ್ನು ಸಂರಕ್ಷಣೆ ಮಾಡಿದ್ದೇವೆ. ನಾಗರೀಕ ಸಮಾಜಕ್ಕೆ ಶಾಪವಾಗಿರುವ ಬಾಲ್ಯವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಯನ್ನು ಅಳಿಸಿ ಹಾಕುವ ದಿಕ್ಕಿನಲ್ಲಿ ನಾವು ಕ್ರಿಯಾಶೀಲವಾಗಿದ್ದೇವೆ” ಎಂದರು.

ಸಭೆಯಲ್ಲಿ ತಹಸೀಲ್ದಾರ್‌ ನಿಸರ್ಗಪ್ರಿಯ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಎಸ್. ಸೀತಾರಾಮ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಅರುಣ್ ಕುಮಾರ್, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಬಸವರಾಜು, ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ವೆಂಕಟೇಶ್, ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಗಾಂಜಾ ಸೇವನೆ ಆರೋಪ: ಯುವಕನ ಬಂಧನ

ನಗರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು...

ಕಲಬುರಗಿ | ಕಿಯಾ ಕಾರು ಮಾರಾಟ ಮಳಿಗೆಯಲ್ಲಿ ₹2.73 ಕೋಟಿ ಹಣದ ದುರ್ಬಳಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಗ್ರಾಹಕರಿಗೆ ಮಾರಾಟ ಮಾಡಿದ ಕಾರುಗಳ ಹಣವನ್ನು ಸಂಸ್ಥೆಯ ಖಾತೆಗೆ ಪಾವತಿಸದೆ ಕೋಟ್ಯಂತರ...

ಯಾದಗಿರಿ | 20 ವರ್ಷಗಳಿಂದ ನೀರು, ವಿದ್ಯುತ್ ಇಲ್ಲದೆ ನರಳಾಟ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

ಹುಣಸಗಿ ತಾಲೂಕಿನ ವಜ್ಜಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಜಲಾಪುರಳ್ಳಿ ಗ್ರಾಮದ ಹೊಲಗಳಲ್ಲಿ...

ವಿಜಯಪುರ |ಸಂವಿಧಾನವನ್ನು ಮನುವಾದಕ್ಕೆ ಜೋಡಿಸುವ ಪ್ರಯತ್ನ ಖಂಡನೀಯ: ಎಸ್.ಎಂ. ಪಾಟೀಲ ಗಣಿಹಾರ

ದೇಶದ ಸಂವಿಧಾನದಲ್ಲಿ ಮನುಸ್ಮೃತಿಯ ಅಂಶಗಳಿವೆ ಎಂಬ ಹೇಳಿಕೆಯನ್ನು ಖಂಡಿಸಿರುವ ಅಹಿಂದ ಮುಖಂಡ...