ಮಂಡ್ಯ | ಅನಿಷ್ಠ ಪದ್ಧತಿಗಳ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ

Date:

Advertisements

ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಠ, ಪಿಡುಗುಗಳ ನಿರ್ಮೂಲನೆ ನಮ್ಮೆಲ್ಲರ ಆಧ್ಯ ಕರ್ತವ್ಯ, ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗದ ಸದಸ್ಯ ಮಿಕ್ಕೆರೆ ವೆಂಕಟೇಶ್ ಹೇಳಿದ್ದಾರೆ.

ಅವರು ಕೆ.ಆರ್‌ ಪೇಟೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. “ಮಂಡ್ಯ ಜಿಲ್ಲೆಯ ಗಡಿ ತಾಲೂಕು ಕೆ.ಆರ್‌ ಪೇಟೆಯಿಂದ ಮುಂಬೈ ಮಹಾನಗರಕ್ಕೆ ನೇರ ಸಂಪರ್ಕವಿರುವುದರಿಂದ ಮಕ್ಕಳ ಸಾಗಾಣಿಕೆ, ಬಾಲ್ಯ ವಿವಾಹದಂತಹ ಅನಿಷ್ಟ ಪದ್ದತಿಗಳು ಇಂದಿಗೂ ಇಲ್ಲಿ ಜೀವಂತವಾಗಿವೆ. ಆದ್ದರಿಂದ, ತಾಲೂಕು ಮಟ್ಟದ ಅಧಿಕಾರಿಗಳು ಮಕ್ಕಳ ಹಕ್ಕುಗಳ ರಕ್ಷಣೆ ವಿಚಾರದಲ್ಲಿ ಜಾಗೃತರಾಗಿ ಕೆಲಸ ಮಾಡಬೇಕು” ಎಂದು ಹೇಳಿದರು.

“ಕೆ.ಆರ್‌ ಪೇಟೆ ತಾಲೂಕಿನ ಜನರು, ನೆರೆಯ ಮಹಾರಾಷ್ಟ್ರ ಮುಂಬೈ ಮಹಾನಗರದಲ್ಲಿ ನೇರವಾಗಿ ವ್ಯಾಪಾರ, ವಹಿವಾಟು ಸೇರಿದಂತೆ, ಅಲ್ಲಿಯೇ ಜೀವನ ನಡೆಸುತ್ತಿರುವುದರಿಂದ ಮುಂಬೈ ಮಹಾನಗರದ ನಂಟಿದೆ. ತಾಲೂಕಿನಲ್ಲಿ ಮಕ್ಕಳ ಮಾರಾಟ ಜಾಲ ಸೇರಿದಂತೆ, ಬಾಲ್ಯವಿವಾಹ, ಅಸ್ಪೃಶ್ಯತೆ ಆಚರಣೆ, ಸಾಮಾಜಿಕ ಕಟ್ಟುಪಾಡುಗಳ ಆಚರಣೆಯಂತಹ  ಕಾನೂನು ಬಾಹಿರವಾದ ಚಟುವಟಿಕೆಗಳು ನಡೆಯುತ್ತಿವೆ. ತಾಲೂಕು ಮಟ್ಟದ ಅಧಿಕಾರಿಗಳು ಈ ಬಗ್ಗೆ ಎಚ್ಚರವಹಿಸಿ ಸಮಾಜ ವಿರೋಧಿ ಚಟುವಟಿಕೆಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕು” ಎಂದರು.

Advertisements

“ಹೆಣ್ಣು ಮಕ್ಕಳ ಪಾಲಿಗೆ ಶಾಪವಾಗಿರುವ ಬಾಲ್ಯ ವಿವಾಹದಂತಹ ಪ್ರಕರಣಗಳು ನಡೆಯದಂತೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಕೆ.ಆರ್.ಪೇಟೆ ತಾಲೂಕಿನಲ್ಲಿ ಮಹಿಳೆಯರು ಮತ್ತು ಮಕ್ಕಳು ಕಾಣೆಯಾಗುವ ಪ್ರಕರಣಗಳು, ಸರ್ವೇ ಸಾಮಾನ್ಯವಾಗಿವೆ. ಗ್ರಾಮದಿಂದ ನಾಪತ್ತೆಯಾದ ಮಹಿಳೆಯರು ಎಲ್ಲಿದ್ದಾರೆ? ಏನು ಮಾಡುತ್ತಿದ್ದಾರೆ? ಎಂಬುದು ಈಗೂ ಗೊತ್ತಾಗುತ್ತಿಲ್ಲ. ಮಹಿಳೆಯರ ಮತ್ತು ಮಕ್ಕಳ ಮಾರಾಟ ಜಾಲಗಳು  ಸಕ್ರಿಯವಾಗಿರುವ ಬಗ್ಗೆ ಆಯೋಗಕ್ಕೆ ಮಾಹಿತಿ ಇದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಪೊಲೀಸರು ನಿಗಾವಹಿಸಿ, ಅಕ್ರಮ ದಂಧೆಕೋರರ ವಿರುದ್ಧ ಕಠೀಣ ಕ್ರಮ ಕೈಗೊಳ್ಳಬೇಕು” ಎಂದು ತಿಳಿಸಿದರು.

“ಕಾನೂನಿಗಿಂತ ಯಾರೂ ದೊಡ್ಡವರಲ್ಲ, ನಾಗರೀಕ ಸಮಾಜದಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕಾನೂನಿನ ಪರಿಮಿತಿಯೊಳಗೆ ಜೀವನ ನಡೆಸಬೇಕು. ತಂದೆ, ತಾಯಿಗಳು ಹಾಗೂ ಪೋಷಕರು ಮಕ್ಕಳ ಹಕ್ಕುಗಳನ್ನು ಸಂರಕ್ಷಣೆ ಮಾಡಿ, ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳಿಸಿ, ವಿದ್ಯಾವಂತರನ್ನಾಗಿ ಮಾಡುವ ಮೂಲಕ ಭವಿಷ್ಯದ ನಾಯಕರನ್ನಾಗಿ ತಯಾರು ಮಾಡಬೇಕು. ಈ ದಿಕ್ಕಿನಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗಕ್ಕೆ ಸಹಕಾರ ನೀಡಬೇಕು” ಎಂದು ಹೇಳಿದರು.

ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸುಮಾರಾಣಿ ಮಾತನಾಡಿ, “ಬಾಲ್ಯ ವಿವಾಹ ಮತ್ತು ಶಾಲೆಗೆ ಹೋಗಬೇಕಿರುವ ಮಕ್ಕಳನ್ನು,  ಬಾಲಕಾರ್ಮಿಕ ರನ್ನಾಗಿ ಬಳಸಿಕೊಂಡು ಶೋಷಣೆ ಮಾಡುತ್ತಿರುವ ಪ್ರಕರಣಗಳು, ನಮ್ಮ ಗಮನಕ್ಕೆ ಬಂದ ಕೂಡಲೇ ಕಾರ್ಯೋನ್ಮುಖರಾಗಿ ಕ್ರಿಮಿನಲ್ ಪ್ರಕರಣ ದಾಖಲಿಸಿ, ಮಕ್ಕಳ ಹಕ್ಕುಗಳನ್ನು ಸಂರಕ್ಷಣೆ ಮಾಡಿದ್ದೇವೆ. ನಾಗರೀಕ ಸಮಾಜಕ್ಕೆ ಶಾಪವಾಗಿರುವ ಬಾಲ್ಯವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಯನ್ನು ಅಳಿಸಿ ಹಾಕುವ ದಿಕ್ಕಿನಲ್ಲಿ ನಾವು ಕ್ರಿಯಾಶೀಲವಾಗಿದ್ದೇವೆ” ಎಂದರು.

ಸಭೆಯಲ್ಲಿ ತಹಸೀಲ್ದಾರ್‌ ನಿಸರ್ಗಪ್ರಿಯ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಎಸ್. ಸೀತಾರಾಮ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಅರುಣ್ ಕುಮಾರ್, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಬಸವರಾಜು, ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ವೆಂಕಟೇಶ್, ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X