ಮೈಸೂರು | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ: ರವಿಶಂಕರ್

Date:

ಬಾಲಕಾರ್ಮಿಕ ಪದ್ಧತಿ ಒಂದು ಸಾಮಾಜಿಕ ಪಿಡುಗಾಗಿದ್ದು, ಅದು ಸಂಪೂರ್ಣವಾಗಿ ನಿರ್ಮೂಲನೆಯಾದಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಲಕ್ಷ್ಮಿಪುರಂ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ರವಿಶಂಕರ್ ಹೇಳಿದರು.

- Advertisement -

ಮೈಸೂರು ನಗರದ ಚಾಮುಂಡಿಪುರಂನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಬಾಲ ಭೋಧಿನಿ ಶಾಲೆಯಲ್ಲಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮತ್ತು ಅಪೂರ್ವ ಸ್ನೇಹ ಬಳಗದ ವತಿಯಿಂದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಶಿಕ್ಷಣ ಪಡೆಯಬೇಕಾದ ವಯಸ್ಸಿನಲ್ಲಿ ಅನೇಕ ಮಕ್ಕಳು ಕಟ್ಟಡ ನಿರ್ಮಾಣ ಕಾಮಗಾರಿ, ಅಂಗಡಿಗಳು, ಗ್ಯಾರೇಜ್‌ಗಳು, ಹೋಟೆಲ್‌ಗಳು, ಕಾರ್ಖಾನೆಗಳು, ಬೇಕರಿಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ದುಡಿಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬ ನಾಗರಿಕರ ಸಹಕಾರ ಅತ್ಯಗತ್ಯ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣವೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಸಾರ್ವಜನಿಕರು ತಮ್ಮ ಸಾಮಾಜಿಕ ಹೊಣೆಗಾರಿಕೆಯನ್ನು ನಿರ್ವಹಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಂಗವಾಗಿ ಅಪೂರ್ವ ಸ್ನೇಹ ಬಳಗದ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಲೇಖನಿಗಳನ್ನು ವಿತರಿಸಲಾಯಿತು.

ಈ ಸುದ್ದಿ ಓದಿದ್ದೀರಾ?ಮೈಸೂರು | ಜೂ.13ರಂದು ಡೋರ್ನಹಳ್ಳಿಯಲ್ಲಿ ವಿಶ್ವವಿಖ್ಯಾತ ಸಂತ ಅಂತೋಣಿ ಮಹೋತ್ಸವ

ಕಾರ್ಯಕ್ರಮದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಕೆ.ಬಿ. ಲಿಂಗರಾಜು, ಕರ್ನಾಟಕ ಬ್ಯಾಂಕ್‌ನ ನಿವೃತ್ತ ಸಹಾಯಕ ಪ್ರಧಾನ ವ್ಯವಸ್ಥಾಪಕ ವಿಶ್ವನಾಥ್, ಅಪೂರ್ವ ಸ್ನೇಹ ಬಳಗದ ಅಪೂರ್ವ ಸುರೇಶ್, ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಉಪಾಧ್ಯಕ್ಷ ವಿಕ್ರಂ ಅಯ್ಯಂಗಾರ್, ಕೆ.ಆರ್. ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ, ಅರಿವು ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ್ ಕಶ್ಯಪ್, ಶಾಲೆಯ ಮುಖ್ಯ ಶಿಕ್ಷಕಿ ಲತಾ, ದೂರರಾಜಣ್ಣ, ಎಸ್.ಎನ್. ರಾಜೇಶ್, ಶಿಕ್ಷಕರಾದ ಲತಾ ಕುಮಾರಿ, ಮೊಸಿನ್ ತಾಜ್, ಲೀಲಾವತಿ, ಮಮತಾ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಬೈತಕೂಲ ಬಂದರಿನಲ್ಲಿ ನೀರಿಗೆ ಬಿದ್ದು ಒಡಿಶಾ ಮೂಲದ ಮೀನುಗಾರ ಸಾವು

ಮೀನುಗಳನ್ನು ಖಾಲಿ ಮಾಡಿ ಬೋಟಿಗೆ ಐಸ್ ತುಂಬುತ್ತಿದ್ದ ವೇಳೆ ಕಾಲು ಜಾರಿ...

ನವೆಂಬರ್ 26ರಿಂದ ರಾಜ್ಯಾದ್ಯಂತ ‘ಜನರ ದನಿ, ಸಂವಿಧಾನದ ದನಿ’ ಜಾಗೃತಿ ಅಭಿಯಾನ

ನವೆಂಬರ್ 26ರ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ, ದಲಿತ ಸಂಘರ್ಷ ಸಮಿತಿಗಳ...

ಉಡುಪಿ | ಮತದಾರರ ಹಕ್ಕು ರಕ್ಷಣೆಗೆ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ–ದೇಶ್ ಬಚಾವೋ’ ಆಂದೋಲನ

ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾನದ ಹಕ್ಕುಗಳ ರಕ್ಷಣೆಗೆ ಅಖಿಲ ಭಾರತ...

ಯಾದಗಿರಿ | ಆಂಧ್ರಪ್ರದೇಶದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳ ದಮನದ ಆರೋಪ: ಎಐಬಿಎಸ್‌ಪಿ ತೀವ್ರ ಖಂಡನೆ

ಆಂಧ್ರಪ್ರದೇಶದಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅಡ್ಡಿಪಡಿಸಲಾಗಿದೆ ಎಂಬ ಆರೋಪಗಳನ್ನು...