ಬೀದರ್‌ | ಅಬಕಾರಿ ಪೊಲೀಸರ ದಾಳಿ, ಒಂದೇ ತಿಂಗಳಲ್ಲಿ 36.83 ಲಕ್ಷ ರೂ. ಮೌಲ್ಯದ ಅಬಕಾರಿ ವಸ್ತು ಜಪ್ತಿ

Date:

ಬೀದರ ಜಿಲ್ಲೆಯಲ್ಲಿ ಅಬಕಾರಿ ಅಕ್ರಮ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಮಾ.1 ರಿಂದ 31ರವರೆಗೆ ಜಿಲ್ಲಾದ್ಯಂತ ಅಬಕಾರಿ ಇಲಾಖೆಯಿಂದ ದಾಳಿ ನಡೆಸಿ ಅಂದಾಜು 36.83 ಲಕ್ಷ ರೂ. ಮೌಲ್ಯದ ಅಬಕಾರಿ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಅಬಕಾರಿ ಪೊಲೀಸರು ಒಟ್ಟು 210 ಕಡೆ ದಾಳಿ ನಡೆಸಿ, 133 ಮೊಕದ್ದಮೆಗಳನ್ನು ದಾಖಲಿಸಿ, 108 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳಿಂದ 827.160 ಲೀ. ಮದ್ಯ, 258.590 ಲೀ. ಬೀರ್ ಮತ್ತು 197 ಲೀ. ಸೇಂದಿ, 4.030 ಕಿ.ಗ್ರಾಂ ಗಾಂಜಾ ಹಾಗೂ 23 ದ್ವಿಚಕ್ರ ವಾಹನ, 2 ವಾಹನಗಳನ್ನು ಜಪ್ತುಪಡಿಸಿಕೊಳ್ಳಲಾಗಿದೆ ಎಂದು ಬೀದರ್ ಡೆಪ್ಯುಟಿ ಕಮೀಷನರ್ ಆಫ್ ಎಕ್ಸೈಜ್ ಡಾ.ಸಂಗನಗೌಡ ಪಿ. ಹೊಸಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಜಿಲ್ಲೆಯಲ್ಲಿ ಅಬಕಾರಿ ಅಕ್ರಮಗಳನ್ನು ಕಟ್ಟುನಿಟ್ಟಾಗಿ ತಡೆಗಟ್ಟುವ ನಿಟ್ಟಿನಲ್ಲಿ ಇಲಾಖೆ ಸಿಬ್ಬಂದಿ ಸಜ್ಜುಗೊಳಿಸಿದ್ದು, ದಿನದ 24 ಗಂಟೆ ಹಗಲು, ರಾತ್ರಿ ಪಾಳಿಗಳಲ್ಲಿ ಅಬಕಾರಿ ಜಾರಿ ಮತ್ತು ತನಿಖಾ ಕಾರ್ಯಗಳನ್ನು ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸುತ್ತಿದ್ದು, ಇದನ್ನು ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೂ ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ : ಕೇಂದ್ರ ಸಚಿವ ಭಗವಂತ ಖೂಬಾ

“ಲೋಕಸಭಾ ಚುನಾವಣೆ ಪ್ರಯುಕ್ತ ಕಳ್ಳ ಭಟ್ಟಿ ಸಾರಾಯಿ, ಅಕ್ರಮ ಮದ್ಯ ತಯಾರಿಕೆ, ಸಾಗಾಣಿಕೆ ಮತ್ತು ಮಾರಾಟ ಸೇರಿ ಮುಂತಾದ ಅಕ್ರಮ ಚಟುವಟಿಕೆಗಳು ನಡೆಯುವ ಸಾಧ್ಯತೆಗಳಿದ್ದು, ಇವುಗಳನ್ನು ನಿಯಂತ್ರಿಸಲು ಕಛೇರಿಯಲ್ಲಿ ಅಬಕಾರಿ ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದೆ. ಸಾರ್ವಜನಿಕರು ಟೋಲ್‍ ಫ್ರೀ ಸಂಖ‍್ಯೆಗೆ (1800 4251 055) ಮಾಹಿತಿ ನೀಡಬಹುದು” ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಂವಿಧಾನ, ಪ್ರಜಾಪ್ರಭುತ್ವ ಉಳುವಿಗಾಗಿ ಕಾಂಗ್ರೆಸ್‌ಗೆ ಬೆಂಬಲ; ದಸಂಸ ತೀರ್ಮಾನ

2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳುವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ಗೆ...

ತುಮಕೂರು | ಸತ್ಯ, ಸಮಾನತೆಯ ಮತ್ತೊಂದು ಪ್ರತಿರೂಪವೇ ಶ್ರೀರಾಮ: ಡಾ. ಜಿ ಪರಮೇಶ್ವರ್

ಸತ್ಯ, ಸಮಾನತೆಯ ಮತ್ತೊಂದು ಪ್ರತಿರೂಪವೇ ಶ್ರೀರಾಮ ಎಂದು ಗೃಹಸಚಿವ ಡಾ. ಜಿ.ಪರಮೇಶ್ವರ್...

ನಕಲಿ ಸುದ್ದಿ ಹರಡಲು ಬಿಜೆಪಿ ಐಟಿ ಸೆಲ್ ಉದ್ಯೋಗಿಗಳಿಗೆ ಮಾಸಿಕ 50 ಸಾವಿರ ರೂ. ವೇತನ!

ಸಿಂಗಾಪುರ ಮೂಲದ ಮಾಧ್ಯಮ ನ್ಯೂಸ್ ಏಷ್ಯಾ ಸಾಕ್ಷ್ಯಚಿತ್ರ (documentary) ಒಂದನ್ನು ಬಿಡುಗಡೆ...

ಮತದಾನದ ದಿನ ಐಟಿ–ಬಿಟಿ ಸಿಬ್ಬಂದಿಗೆ ರಜೆ ನೀಡಲು ಸೂಚನೆ : ತುಷಾರ್ ಗಿರಿನಾಥ್

ಬೆಂಗಳೂರು ವ್ಯಾಪ್ತಿಯಲ್ಲಿರುವ ಎಲ್ಲ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಮತದಾನದ ದಿನ...